Ajinkya Rahane: ಬ್ಯಾಕ್ ಟು ಬ್ಯಾಕ್ 4 ಅರ್ಧಶತಕ ಸಿಡಿಸಿದ ರಹಾನೆ
Ajinkya Rahane: ಅಜಿಂಕ್ಯ ರಹಾನೆ ಟೀಮ್ ಇಂಡಿಯಾದಿಂದ ಹೊರಬಿದ್ದು ಒಂದು ವರ್ಷ ಕಳೆದಿದೆ. ಭಾರತದ ಪರ 85 ಟೆಸ್ಟ್ ಪಂದ್ಯಗಳನ್ನಾಡಿರುವ ರಹಾನೆ 12 ಶತಕಗಳು ಹಾಗೂ 26 ಅರ್ಧಶತಕಗಳೊಂದಿಗೆ ಒಟ್ಟು 5077 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಅವರನ್ನು ಮುಂಬರುವ ದುಲೀಪ್ ಟ್ರೋಫಿ ಟೂರ್ನಿಗೆ ಆಯ್ಕೆ ಮಾಡಲಾಗಿಲ್ಲ.
1 / 5
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಒನ್ ಡೇ ಕಪ್ ಟೂರ್ನಿಯಲ್ಲಿ ಅಜಿಂಕ್ಯ ರಹಾನೆ ಸತತ ನಾಲ್ಕು ಅರ್ಧಶತಕಗಳನ್ನು ಬಾರಿಸಿ ಅಬ್ಬರಿಸಿದ್ದಾರೆ. ಈ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಹ್ಯಾಂಪ್‌ಶೈರ್ ವಿರುದ್ಧ 70 ರನ್ ಸಿಡಿಸುವ ಮೂಲಕ ರಹಾನೆ ಲೀಸೆಸ್ಟರ್‌ಶೈರ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
2 / 5
ಇದಕ್ಕೂ ಮುನ್ನ ನಾಟಿಂಗ್ಹ್ಯಾಮ್ಶೈರ್ ವಿರುದ್ಧದ ಪಂದ್ಯದಲ್ಲಿ ಅಜಿಂಕ್ಯ ರಹಾನೆ 71 ರನ್ಗಳ ಇನಿಂಗ್ಸ್ ಆಡಿದ್ದರು. ಹಾಗೆಯೇ ಸಸೆಕ್ಸ್ ವಿರುದ್ಧದ ಪಂದ್ಯದಲ್ಲಿ 68 ರನ್ ಸಿಡಿಸಿದ್ದರು. ಇನ್ನು ಗ್ಲೌಸೆಸ್ಟರ್‌ಶೈರ್ ವಿರುದ್ಧದ ಪಂದ್ಯದಲ್ಲಿ 62 ರನ್ ಬಾರಿಸಿ ಮಿಂಚಿದ್ದರು. ಇದೀಗ ಹ್ಯಾಂಪ್‌ಶೈರ್ ವಿರುದ್ಧ 70 ರನ್ ಬಾರಿಸಿದ್ದಾರೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ನಾಲ್ಕು ಅರ್ಧಶತಕಗಳ ಸಾಧನೆ ಮಾಡಿದ್ದಾರೆ.
3 / 5
ಟೀಮ್ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿದ್ದ ಅಜಿಂಕ್ಯ ರಹಾನೆ ಅವರನ್ನು ಇದೀಗ ಆಯ್ಕೆಗೆ ಪರಿಗಣಿಸಲಾಗುತ್ತಿಲ್ಲ. ಅವರು ಕೊನೆಯ ಬಾರಿಗೆ ಭಾರತದ ಪರ ಆಡಿದ್ದು 2023 ರಲ್ಲಿ. ಹೀಗಾಗಿಯೇ ರಹಾನೆ ಇದೀಗ ಇಂಗ್ಲೆಂಡ್ನಲ್ಲಿ ಕೌಂಟಿ ಕ್ರಿಕೆಟ್ ಆಡುತ್ತಿದ್ದಾರೆ.
4 / 5
ಇನ್ನು ಅಜಿಂಕ್ಯ ರಹಾನೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವುದು ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ದುಲೀಪ್ ಟ್ರೋಫಿ ಟೂರ್ನಿಗೆ ಪ್ರಕಟಿಸಲಾದ ನಾಲ್ಕು ತಂಡಗಳಲ್ಲೂ ರಹಾನೆ ಅವರಿಗೆ ಸ್ಥಾನ ನೀಡಲಾಗಿಲ್ಲ. ಅಂದರೆ ಬಿಸಿಸಿಐ ಆಯ್ಕೆ ಸಮಿತಿಯು ಯುವ ಆಟಗಾರರ ಆಯ್ಕೆಗೆ ಒಲವು ತೋರಿರುವುದು ಸ್ಪಷ್ಟ. ಹೀಗಾಗಿ 36 ವರ್ಷದ ಅಜಿಂಕ್ಯ ರಹಾನೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆ ಕ್ಷೀಣ ಎನ್ನಬಹುದು.
5 / 5
ಅಜಿಂಕ್ಯ ರಹಾನೆ ಟೀಮ್ ಇಂಡಿಯಾ ಪರ ಈವರೆಗೆ 85 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 144 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 5077 ರನ್ ಕಲೆಹಾಕಿದ್ದಾರೆ. ಇದೇ ವೇಳೆ 12 ಶತಕಗಳು ಹಾಗೂ 26 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಆದರೆ ಕಳೆದ ವರ್ಷ ತಂಡದಿಂದ ಹೊರಬಿದ್ದ ಬಳಿಕ ಅವರನ್ನು ಟೀಮ್ ಇಂಡಿಯಾದ ಆಯ್ಕೆಗೆ ಪರಿಗಣಿಸಲಾಗಿಲ್ಲ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವ ಸಾಧ್ಯತೆಯಿಲ್ಲ.