Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajinkya Rahane: ಟೀಂ ಇಂಡಿಯಾದಲ್ಲಿ ಮಾಜಿ ನಾಯಕ ಅಜಿಂಕ್ಯ ರಹಾನೆ ಯುಗಾಂತ್ಯ..?

Ajinkya Rahane: ಕೆಲವೇ ವರ್ಷಗಳ ಹಿಂದೆ ಟೀಂ ಇಂಡಿಯಾವನ್ನು ಮುನ್ನಡೆಸಿದ್ದ ಅಜಿಂಕ್ಯ ರಹಾನೆ ಅವರ ವೃತ್ತಿಜೀವನ ಕೊನೆಗೊಳ್ಳುವ ಹಂತದಲ್ಲಿದೆ. ಒಂದು ಕಾಲದಲ್ಲಿ ತಂಡದ ಇಡೀ ಮಧ್ಯಮ ಕ್ರಮಾಂಕದ ಜೀವಾಳವಾಗಿದ್ದ ರಹಾನೆ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದು, ಪ್ರಸ್ತುತ ರಣಜಿ ಟ್ರೋಫಿಯಲ್ಲೂ ರಹಾನೆ ಫಾರ್ಮ್​ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ.

ಪೃಥ್ವಿಶಂಕರ
|

Updated on:Feb 28, 2024 | 6:06 PM

ಕೆಲವೇ ವರ್ಷಗಳ ಹಿಂದೆ ಟೀಂ ಇಂಡಿಯಾವನ್ನು ಮುನ್ನಡೆಸಿದ್ದ ಅಜಿಂಕ್ಯ ರಹಾನೆ ಅವರ ವೃತ್ತಿಜೀವನ ಕೊನೆಗೊಳ್ಳುವ ಹಂತದಲ್ಲಿದೆ. ಒಂದು ಕಾಲದಲ್ಲಿ ತಂಡದ ಇಡೀ ಮಧ್ಯಮ ಕ್ರಮಾಂಕದ ಜೀವಾಳವಾಗಿದ್ದ ರಹಾನೆ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದು, ಪ್ರಸ್ತುತ ರಣಜಿ ಟ್ರೋಫಿಯಲ್ಲೂ ರಹಾನೆ ಫಾರ್ಮ್​ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ.

1 / 6
ಪ್ರತಿಕೂಲ ಸಂದರ್ಭಗಳಲ್ಲಿ ಟೀಂ ಇಂಡಿಯಾ ಪರ ಅನೇಕ ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಿಕೊಟ್ಟಿದ್ದ ರಹಾನೆ, ಪ್ರಸ್ತುತ ತಮ್ಮ ವೃತ್ತಿಜೀವನದ ಅತ್ಯಂತ ಕೆಟ್ಟ ಫಾರ್ಮ್ ಅನ್ನು ಎದುರಿಸುತ್ತಿದ್ದಾರೆ. ಸದ್ಯದ ಅಜಿಂಕ್ಯ ರಹಾನೆ ಪ್ರದರ್ಶನ ನೋಡಿದರೆ ಭಾರತ ತಂಡದಲ್ಲಿ ಮಾತ್ರವಲ್ಲದೆ ಮುಂಬೈನ ರಣಜಿ ತಂಡದಲ್ಲೂ ಅವರನ್ನು ಉಳಿಸಿಕೊಳ್ಳುವುದು ಕಷ್ಟ ಎನಿಸುತ್ತಿದೆ.

2 / 6
ಜುಲೈ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪೋರ್ಟ್ ಆಫ್ ಸ್ಪೇನ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಕೊನೆಯ ಬಾರಿಗೆ ಆಡಿದ್ದ ರಹಾನೆ ಪ್ರಸ್ತುತ ರಣಜಿ ಟ್ರೋಫಿ ಆಡುತ್ತಿದ್ದಾರೆ. ರಹಾನೆ ಈ ಸೀಸನ್‌ನಲ್ಲಿ ಆಡಿರುವ ಒಟ್ಟು 10 ಇನ್ನಿಂಗ್ಸ್‌ಗಳಲ್ಲಿ ಕೇವಲ 115 ರನ್ ಕಲೆಹಾಕಿದ್ದಾರೆ. ಅದರಲ್ಲಿ ಮೂರು ಬಾರಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದ್ದಾರೆ.

3 / 6
ಈ 10 ಇನ್ನಿಂಗ್ಸ್‌ಗಳಲ್ಲಿ ರಹಾನೆ ಅವರ ಸ್ಕೋರ್‌ಗಳು ಕ್ರಮವಾಗಿ 0, 0, 16, 8, 9, 1, 56*, 22, 3 ಮತ್ತು 0. ರಹಾನೆ ಪ್ರಸ್ತುತ ರಣಜಿ ಟ್ರೋಫಿಯಲ್ಲಿ ಮುಂಬೈ ತಂಡದ ನಾಯಕತ್ವ ವಹಿಸಿದ್ದು, ತಂಡವು ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿದೆ. ಅಲ್ಲಿ ತಮಿಳುನಾಡು ತಂಡವನ್ನು ಎದುರಿಸಲಿದೆ. ಒಂದು ವೇಳೆ ರಹಾನೆ ತಂಡದ ನಾಯಕರಾಗಿರದಿದ್ದರೆ, ಅವರಿಗೆ ಪ್ಲೇಯಿಂಗ್ 11 ರಲ್ಲೂ ಅವಕಾಶ ಸಿಗುವುದು ಕಷ್ಟಕರವಾಗಿತ್ತು.

4 / 6
ಅಜಿಂಕ್ಯ ರಹಾನೆ ಭಾರತದ ಪರ 85 ಟೆಸ್ಟ್ ಪಂದ್ಯಗಳಲ್ಲಿ 49.50 ಸರಾಸರಿಯಲ್ಲಿ 12 ಶತಕ ಮತ್ತು 26 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಈ ವರ್ಷದ ಜನವರಿಯಲ್ಲಿ ಅವರು ಭಾರತದ ಪರ 100 ಟೆಸ್ಟ್ ಪಂದ್ಯಗಳನ್ನು ಆಡಬೇಕೆಂದು ಹೇಳಿದ್ದರು. ಅದಕ್ಕಾಗಿ ರಣಜಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಇರಾದೆಯಲ್ಲಿದ್ದರು. ಆದರೆ ಇದು ಇದುವರೆಗೆ ಸಾಧ್ಯವಾಗಿಲ್ಲ.

5 / 6
ರಹಾನೆ ನಾಯಕತ್ವದಲ್ಲಿ ಭಾರತವು 2020-21ರಲ್ಲಿ ತನ್ನ ನೆಲದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತು. ಒಂದೆಡೆ ಯುವ ಬ್ಯಾಟ್ಸ್‌ಮನ್‌ಗಳಾದ ಸರ್ಫರಾಜ್ ಅಹ್ಮದ್, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ ರನ್ ಗಳಿಸುತ್ತಿದ್ದರೆ, ಮತ್ತೊಂದೆಡೆ ಅಜಿಂಕ್ಯ ರಹಾನೆ ಅವರ ಬ್ಯಾಟ್‌ ಮೌನಕ್ಕೆ ಶರಣಾಗಿರುವುದನ್ನು ನೋಡುತ್ತಿದ್ದರೆ ಅವರ 100 ಟೆಸ್ಟ್ ಆಡುವ ಕನಸು ಈಡೇರುವ ಲಕ್ಷಣ ಕಾಣುತ್ತಿಲ್ಲ.

6 / 6

Published On - 6:06 pm, Wed, 28 February 24

Follow us
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ

ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್

ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು

VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!

ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್

ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?

ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ

ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ