AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಆರ್​ಸಿಬಿ ಆಟಗಾರ ಟೀಂ ಇಂಡಿಯಾಕ್ಕೆ ಹೊಸ ಮುಖ್ಯ ಆಯ್ಕೆದಾರ

ಟೀಂ ಇಂಡಿಯಾ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರ ಮೂರು ವರ್ಷಗಳ ಅಧಿಕಾರಾವಧಿ ಮುಕ್ತಾಯಗೊಳ್ಳುತ್ತಿದ್ದು, ಅವರು ಹುದ್ದೆಯಲ್ಲಿ ಮುಂದುವರೆಯದಿರಲು ನಿರ್ಧರಿಸಿದ್ದಾರೆ. ಬಿಸಿಸಿಐ ಇದೀಗ ಹೊಸ ಮುಖ್ಯ ಆಯ್ಕೆದಾರರ ಹುಡುಕಾಟದಲ್ಲಿದ್ದು, ಮಾಜಿ ವಿಕೆಟ್‌ಕೀಪರ್ ಪಾರ್ಥಿವ್ ಪಟೇಲ್ ಪ್ರಬಲ ಸಂಭಾವ್ಯ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪಟೇಲ್ ಅವರ ವ್ಯಾಪಕ ಕ್ರಿಕೆಟ್ ಅನುಭವ ಮತ್ತು ಆಯ್ಕೆ ಮಾನದಂಡಗಳನ್ನು ಪೂರೈಸುವ ಅರ್ಹತೆಗಳು ಅವರನ್ನು ಈ ಸ್ಥಾನಕ್ಕೆ ಸೂಕ್ತವಾಗಿಸುತ್ತಿವೆ.

ಪೃಥ್ವಿಶಂಕರ
|

Updated on: Sep 19, 2026 | 2:44 PM

Share
ಟೀಂ ಇಂಡಿಯಾದ ಮುಖ್ಯ ಆಯ್ಕೆದಾರರಾಗಿ ಮಾಜಿ ವೇಗಿ ಅಜಿತ್ ಅಗರ್ಕರ್ ಅವರ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿ ಕೊನೆಗೊಳ್ಳುತ್ತಿದೆ. ವರದಿಗಳ ಪ್ರಕಾರ, ಅಕ್ಟೋಬರ್ 4 ರಂದು ತಮ್ಮ ಅವಧಿ ಮುಗಿದ ನಂತರ ಆ ಸ್ಥಾನದಲ್ಲಿ ಮುಂದುವರಿಯಲು ಬಯಸುವುದಿಲ್ಲ ಎಂದು ಅಗರ್ಕರ್ ಬಿಸಿಸಿಐ ಔಪಚಾರಿಕವಾಗಿ ತಿಳಿಸಿದ್ದಾರೆ. ಹೀಗಾಗಿ ಅಗರ್ಕರ್ ಬದಲಿಗೆ ಹೊಸ ಮುಖ್ಯ ಆಯ್ಕೆದಾರರನ್ನು ಬಿಸಿಸಿಐ ಈಗಾಗಲೇ ಹುಡುಕಿದೆ ಎಂದು ವರದಿಯಾಗಿದೆ(PC-PTI).

1 / 5
ಕಳೆದ ಕೆಲವು ತಿಂಗಳುಗಳಿಂದ ಅಜಿತ್ ಅಗರ್ಕರ್ ಅವರ ಹುದ್ದೆಯ ಬಗ್ಗೆ ವದಂತಿಗಳು ಕೇಳಿಬರುತ್ತಲೇ ಇದ್ದವು. ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್​ವರೆಗೂ ಅಗರ್ಕರ್ ತಮ್ಮ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ವರದಿಯಾಗಿತ್ತು. ಆದರೀಗ ಕೇಳಿಬಂದಿರುವ ಮಾಹಿತಿ ಪ್ರಕಾರ, ಸ್ವತಃ ಅಗರ್ಕರ್ ಅವರೇ ಈ ಹುದ್ದೆಯಲ್ಲಿ ಮುಂದುವರೆಯುವುದಿಲ್ಲ ಎಂದು ಬಿಸಿಸಿಐಗೆ ತಿಳಿಸಿದ್ದಾರೆ(PC-PTI).

2 / 5
ಅಕ್ಟೋಬರ್ ತಿಂಗಳಲ್ಲಿ ಅಗರ್ಕರ್ ತಮ್ಮ ಹುದ್ದೆಯಿಂದ ಕೆಳಗಿಳಿದರೆ ಅವರ ಸ್ಥಾನಕ್ಕೆ ಯಾರು ಆಯ್ಕೆಯಾಗುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಈ ಸ್ಥಾನಕ್ಕೆ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಪಾರ್ಥಿವ್ ಪಟೇಲ್ ಸಂಭಾವ್ಯ ಅಭ್ಯರ್ಥಿಯಾಗಬಹುದು ಎಂದು ಹೇಳಲಾಗುತ್ತಿದೆ. ಅಲ್ಲದೆ ಮಾರ್ಚ್ 2026 ರಿಂದಲೂ ಪಟೇಲ್ ಅವರ ಹೆಸರು ಈ ಹುದ್ದೆಗೆ ಹರಿದಾಡುತ್ತಿದೆ(PC-PTI).

3 / 5
ಪಟೇಲ್ ಭಾರತೀಯ ಕ್ರಿಕೆಟ್‌ನಲ್ಲಿ ವ್ಯಾಪಕ ಅನುಭವ ಹೊಂದಿದ್ದು, ಟೀಂ ಇಂಡಿಯಾ ಪರ ಹಾಗೂ ಐಪಿಎಲ್‌ನಲ್ಲಿ ಆರ್​​ಸಿಬಿ ಪರ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಆಗಿ ಆಡಿದ್ದಾರೆ. ಅಲ್ಲದೆ ಐದು ವರ್ಷಗಳ ಹಿಂದೆಯೇ ಸಕ್ರಿಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಅಲ್ಲದೆ ಆಯ್ಕೆದಾರರ ಸ್ಥಾನಕ್ಕೆ ಬೇಕಿರುವ ಎಲ್ಲಾ ಅರ್ಹತಾ ಮಾನದಂಡಗಳನ್ನು ಪಾರ್ಥಿವ್ ಪಟೇಲ್ ಪೂರೈಸಲು ಶಕ್ತರಾಗಿದ್ದಾರೆ(PC-PTI).

4 / 5
ಪ್ರಸ್ತುತ, ಪಾರ್ಥಿವ್ ಐಪಿಎಲ್ ಫ್ರಾಂಚೈಸಿ ಗುಜರಾತ್ ಟೈಟಾನ್ಸ್‌ನ ಸಹಾಯಕ ಕೋಚ್ ಆಗಿದ್ದಾರೆ. ನಾಯಕ ಶುಭ್‌ಮನ್ ಗಿಲ್ ಗುಜರಾತ್ ತಂಡಕ್ಕೂ ಆಡುತ್ತಾರೆ. ಪಾರ್ಥಿವ್ ಕ್ರಿಕೆಟ್ ಕಾಮೆಂಟರಿ ಮತ್ತು ಕೋಚಿಂಗ್‌ನಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಆದಾಗ್ಯೂ, ಪಾರ್ಥಿವ್ ಪಟೇಲ್ ಅವರನ್ನು ಮುಖ್ಯ ಆಯ್ಕೆದಾರರನ್ನಾಗಿ ನೇಮಿಸುವ ಬಗ್ಗೆ ಬಿಸಿಸಿಐನಿಂದ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ. ಪ್ರಸ್ತುತ, ಅವರ ಹೆಸರನ್ನು ಸಂಭಾವ್ಯ ಆಯ್ಕೆಯಾಗಿ ಮಾತ್ರ ಚರ್ಚಿಸಲಾಗುತ್ತಿದೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ

ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?

ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?

ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ

‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್

ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ

ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ

ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?

ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ

‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?