- Kannada News Photo gallery Cricket photos Akash Ambani chat with Shreyas Iyer During PBKS vs MI Match
IPL 2025: ಪಂದ್ಯದ ನಡುವೆಯೇ ಶ್ರೇಯಸ್ ಅಯ್ಯರ್ ಜೊತೆ ಆಕಾಶ್ ಅಂಬಾನಿ ಮಾತುಕತೆ!
IPL 2025 PBKS vs MI: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 69ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 184 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 18.3 ಓವರ್ಗಳಲ್ಲಿ 187 ರನ್ ಬಾರಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Updated on: May 27, 2025 | 7:40 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 69ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಲೀಕರಾದ ಆಕಾಶ್ ಅಂಬಾನಿ, ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರೊಂದಿಗೆ ಮಾತನಾಡುತ್ತಿರುವ ಫೋಟೋಗಳು ಇದೀಗ ವೈರಲ್ ಆಗಿದೆ.

ಜೈಪುರದ ಸಾವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮುಂಬೈ ಇಂಡಿಯನ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಈ ವೇಳೆ ಬೌಂಡರಿ ಲೈನ್ನಲ್ಲಿ ಫೀಲ್ಡಿಂಗ್ನಲ್ಲಿದ್ದ ಅಯ್ಯರ್ ಅವರೊಂದಿಗೆ ಅಕಾಶ್ ಅಂಬಾನಿ ಅದೇನೋ ಚರ್ಚಿಸುತ್ತಿರುವುದು ಕಂಡು ಬಂದಿದೆ.

ಐಪಿಎಲ್ ನಿಯಮದ ಪ್ರಕಾರ, ಪಂದ್ಯವಾಡುತ್ತಿರುವ ಆಟಗಾರರು ಹೊರಗಿನ ವ್ಯಕ್ತಿಗಳನ್ನು ಸಂಪರ್ಕಿಸುವಂತಿಲ್ಲ. ಇದೇ ಕಾರಣದಿಂದಾಗಿ ಫ್ರಾಂಚೈಸಿ ಮಾಲೀಕರು ಸಹ ಡಗೌಟ್ನಲ್ಲಿ ತಂಡದ ಜೊತೆ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಪಂದ್ಯದ ನಡುವೆಯೇ ಪಂಜಾಬ್ ಕಿಂಗ್ಸ್ ತಂಡದ ನಾಯಕನೊಂದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಮಾಲೀಕರು ಮಾತುಕತೆ ನಡೆಸಿರುವುದು ಇದೀಗ ಚರ್ಚಗೆ ಗ್ರಾಸವಾಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಣಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ 39 ಎಸೆತಗಳಲ್ಲಿ 57 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್ ಕಲೆಹಾಕಿತು.

185 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಪ್ರಿಯಾಂಶ್ ಆರ್ಯ ಹಾಗೂ ಜೋಶ್ ಇಂಗ್ಲಿಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಪ್ರಿಯಾಂಶ್ ಆರ್ಯ 32 ಎಸೆತಗಳಲ್ಲಿ 65 ರನ್ ಬಾರಿಸಿದರೆ, ಇಂಗ್ಲಿಸ್ 42 ಎಸೆತಗಳಲ್ಲಿ 73 ರನ್ ಚಚ್ಚಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು 18.3 ಓವರ್ಗಳಲ್ಲಿ 187 ರನ್ಗಳಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಪಡೆ ಪ್ಲೇಆಫ್ನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆದುಕೊಂಡಿದೆ.
