IPL 2025: ಪಂದ್ಯದ ನಡುವೆಯೇ ಶ್ರೇಯಸ್ ಅಯ್ಯರ್ ಜೊತೆ  ಆಕಾಶ್ ಅಂಬಾನಿ ಮಾತುಕತೆ!

Updated on: May 27, 2025 | 7:40 AM

IPL 2025 PBKS vs MI: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 69ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 184 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 18.3 ಓವರ್​ಗಳಲ್ಲಿ 187 ರನ್ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

1 / 5
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಲೀಕರಾದ ಆಕಾಶ್ ಅಂಬಾನಿ, ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರೊಂದಿಗೆ ಮಾತನಾಡುತ್ತಿರುವ ಫೋಟೋಗಳು ಇದೀಗ ವೈರಲ್ ಆಗಿದೆ.

2 / 5
ಜೈಪುರದ ಸಾವಾಯಿ ಮಾನ್​​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮುಂಬೈ ಇಂಡಿಯನ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಈ ವೇಳೆ ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಅಯ್ಯರ್ ಅವರೊಂದಿಗೆ ಅಕಾಶ್ ಅಂಬಾನಿ ಅದೇನೋ ಚರ್ಚಿಸುತ್ತಿರುವುದು ಕಂಡು ಬಂದಿದೆ.

3 / 5
ಐಪಿಎಲ್ ನಿಯಮದ ಪ್ರಕಾರ, ಪಂದ್ಯವಾಡುತ್ತಿರುವ ಆಟಗಾರರು ಹೊರಗಿನ ವ್ಯಕ್ತಿಗಳನ್ನು ಸಂಪರ್ಕಿಸುವಂತಿಲ್ಲ. ಇದೇ ಕಾರಣದಿಂದಾಗಿ ಫ್ರಾಂಚೈಸಿ ಮಾಲೀಕರು ಸಹ ಡಗೌಟ್​ನಲ್ಲಿ ತಂಡದ ಜೊತೆ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಪಂದ್ಯದ ನಡುವೆಯೇ ಪಂಜಾಬ್ ಕಿಂಗ್ಸ್ ತಂಡದ ನಾಯಕನೊಂದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಮಾಲೀಕರು ಮಾತುಕತೆ ನಡೆಸಿರುವುದು ಇದೀಗ ಚರ್ಚಗೆ ಗ್ರಾಸವಾಗಿದೆ.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಣಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ 39 ಎಸೆತಗಳಲ್ಲಿ 57 ರನ್​ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್​ ಕಲೆಹಾಕಿತು.

5 / 5
185 ರನ್​ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಪ್ರಿಯಾಂಶ್ ಆರ್ಯ ಹಾಗೂ ಜೋಶ್ ಇಂಗ್ಲಿಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಪ್ರಿಯಾಂಶ್ ಆರ್ಯ 32 ಎಸೆತಗಳಲ್ಲಿ 65 ರನ್ ಬಾರಿಸಿದರೆ, ಇಂಗ್ಲಿಸ್ 42 ಎಸೆತಗಳಲ್ಲಿ 73 ರನ್​ ಚಚ್ಚಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು 18.3 ಓವರ್​ಗಳಲ್ಲಿ 187 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಪಡೆ ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್​ ಪಂದ್ಯವಾಡಲು ಅರ್ಹತೆ ಪಡೆದುಕೊಂಡಿದೆ.