AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10ನೇ ಕ್ರಮಾಂಕದಲ್ಲಿ ವಿಶ್ವ ದಾಖಲೆ ಬರೆದ ಅಲನಾ ಕಿಂಗ್

Australia Women vs Pakistan Women: ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ 114 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾ 107 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Oct 09, 2025 | 10:30 AM

Share
ವುಮೆನ್ಸ್ ಒಡಿಐ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಆಸ್ಟ್ರೇಲಿಯಾದ ಸ್ಪಿನ್ನರ್ ಅಲನಾ ಕಿಂಗ್ (Alana King). ಅದು ಕೂಡ 10ನೇ ಕ್ರಮಾಂಕದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ.

1 / 5
ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್​ನ 9ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 115 ರನ್​ಗಳಿಸುವಷ್ಟರಲ್ಲಿ 8 ವಿಕೆಟ್ ಕಳೆದುಕೊಂಡಿತು.

2 / 5
ಈ ಹಂತದಲ್ಲಿ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಲನಾ ಕಿಂಗ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅನುಭವಿ ಬ್ಯಾಟರ್ ಬೆತ್ ಮೂನಿ ಜೊತೆಗೂಡಿ ಇನಿಂಗ್ಸ್ ಕಟ್ಟಿದ ಅಲನಾ ಕೇವಲ 48 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವಿಶೇಷ ಎಂದರೆ ಇದು ಏಕದಿನ ಕ್ರಿಕೆಟ್​ನಲ್ಲಿ ಅಲನಾ ಅವರ ಚೊಚ್ಚಲ ಅರ್ಧಶತಕವಾಗಿದೆ.

3 / 5
ಈ ಚೊಚ್ಚಲ ಅರ್ಧಶತಕದೊಂದಿಗೆ ಅಲನಾ ಕಿಂಗ್ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ. ಅಂದರೆ ವುಮೆನ್ಸ್ ಒಡಿಐ ಕ್ರಿಕೆಟ್​ನಲ್ಲಿ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಹಾಫ್ ಸೆಂಚುರಿ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಅಲನಾ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಮಹಿಳಾ ಕ್ರಿಕೆಟ್​ನಲ್ಲಿ ಎಂಟಕ್ಕಿಂತ ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಧಿಕ ಸ್ಕೋರ್​ಗಳಿಸಿದ ದಾಖಲೆ ಸೌತ್ ಆಫ್ರಿಕಾ ಯುಲಾಂಡಿ ವ್ಯಾನ್ ಡರ್ ಮರ್ವ್ ಹೆಸರಿನಲ್ಲಿತ್ತು. 2000 ರಲ್ಲಿ ಭಾರತದ ವಿರುದ್ಧದ ನಡೆದ ಏಕದಿನ ಪಂದ್ಯದಲ್ಲಿ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಯುಲಾಂಡಿ 42 ರನ್ ಬಾರಿಸಿದ್ದರು. ಇದೀಗ 10ನೇ ಕ್ರಮಾಂಕದಲ್ಲಿ ಅಜೇಯ 51 ರನ್​ ಬಾರಿಸುವ ಮೂಲಕ ಅಲನಾ ಕಿಂಗ್ ಹೊಸ ಇತಿಹಾಸ ರಚಿಸಿದ್ದಾರೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್