- Kannada News Photo gallery Cricket photos Alex Carey Becomes First Australian Wicketkeeper To Score Test Century Kannada News zp
Alex Carey: ಆಸ್ಟ್ರೇಲಿಯಾ ವಿಕೆಟ್ ಕೀಪರ್ಗಳ ಶತಕದ ಬರ ನೀಗಿಸಿದ ಅಲೆಕ್ಸ್ ಕ್ಯಾರಿ
Alex Carey: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್ನಲ್ಲಿ ಕೇವಲ 189 ರನ್ಗಳಿಗೆ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದರು.
Updated on: Dec 28, 2022 | 9:31 PM

ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. 133 ಎಸೆತಗಳನ್ನು ಎದುರಿಸಿದ ಕ್ಯಾರಿ 13 ಫೋರ್ಗಳೊಂದಿಗೆ ಶತಕ ಪೂರೈಸಿದರು. ಈ ಶತಕದೊಂದಿಗೆ ಆಸ್ಟ್ರೇಲಿಯಾ ವಿಕೆಟ್ ಕೀಪರ್ಗಳ ಟೆಸ್ಟ್ ಶತಕದ ಬರ ಕೂಡ ನೀಗಿರುವುದು ವಿಶೇಷ.

ಅಂದರೆ ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್ನಲ್ಲಿ ವಿಕೆಟ್ ಕೀಪರ್ರೊಬ್ಬರು ಶತಕ ಬಾರಿಸಿ ಬರೋಬ್ಬರಿ 9 ವರ್ಷಗಳಾಗಿವೆ. 2013 ರಲ್ಲಿ ಬ್ರಾಡ್ ಹಾಡಿನ್ ಕೊನೆಯ ಬಾರಿ ಶತಕ ಬಾರಿಸಿದ್ದರು. ಇದಾದ ಬಳಿಕ ಹಲವು ವಿಕೆಟ್ ಕೀಪರ್ಗಳು ತಂಡದಲ್ಲಿ ಕಾಣಿಸಿಕೊಂಡರೂ ಶತಕ ಸಿಡಿಸುವಲ್ಲಿ ಮಾತ್ರ ಯಶಸ್ವಿಯಾಗಿರಲಿಲ್ಲ.

ಇದೀಗ ತಮ್ಮ 14ನೇ ಟೆಸ್ಟ್ ಪಂದ್ಯವಾಡುತ್ತಿರುವ ಅಲೆಕ್ಸ್ ಕ್ಯಾರಿ ಚೊಚ್ಚಲ ಶತಕ ಬಾರಿಸುವ ಮೂಲಕ ದೀರ್ಘಕಾಯುವಿಕೆ ಸೆಂಚುರಿಗೆ ಪೂರ್ಣವಿರಾಮ ಹಾಕಿದರು. ಈ ಮೂಲಕ 2013 ರ ಬಳಿಕ ಶತಕ ಬಾರಿಸಿದ ಮೊದಲ ಆಸೀಸ್ ವಿಕೆಟ್ ಕೀಪರ್ ಎನಿಸಿಕೊಂಡರು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್ನಲ್ಲಿ ಕೇವಲ 189 ರನ್ಗಳಿಗೆ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದರು. ವಿಶೇಷ ಎಂದರೆ ಇದು ವಾರ್ನರ್ ಅವರ 100ನೇ ಟೆಸ್ಟ್ ಪಂದ್ಯವಾಗಿದೆ. ಹೀಗಾಗಿ ನೂರನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸಿದ ವಿಶ್ವದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡರು. ಇದಕ್ಕೂ ಮುನ್ನ ಸಾಧನೆ ಇಂಗ್ಲೆಂಡ್ನ ಜೋ ರೂಟ್ ಮಾಡಿದ್ದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಅಲೆಕ್ಸ್ ಕ್ಯಾರಿ ಕೂಡ ಅಮೂಲ್ಯ 111 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 500ರ ಗಡಿದಾಟಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ ತಂಡವು 8 ವಿಕೆಟ್ ನಷ್ಟಕ್ಕೆ 575 ರನ್ಗಳಿಸಿ ಮೊದಲ ಇನಿಂಗ್ಸ್ನ ಡಿಕ್ಲೇರ್ ಮಾಡಿಕೊಂಡಿದೆ.

ಸದ್ಯ 2ನೇ ಇನಿಂಗ್ಸ್ ಆರಂಭಿಸಿರುವ ಸೌತ್ ಆಫ್ರಿಕಾ ತಂಡವು 3ನೇ ದಿನದಾಟದ ಅಂತ್ಯದ ವೇಳೆ 371 ರನ್ಗಳ ಹಿನ್ನಡೆ ಹೊಂದಿದೆ.
