AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಅಲೆಕ್ಸ್ ಹೇಲ್ಸ್

T20 Records: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಮತ್ತು ವಿವಿಧ ಫ್ರಾಂಚೈಸಿ ಲೀಗ್​ಗಳ ಮೂಲಕ ಕೇವಲ ನಾಲ್ವರು ಆಟಗಾರರು ಮಾತ್ರ ಟಿ20 ಕ್ರಿಕೆಟ್​ನಲ್ಲಿ 13 ಸಾವಿರ ರನ್ ಕಲೆಹಾಕಿದ್ದಾರೆ. ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿರುವುದು ಇಂಗ್ಲೆಂಡ್​​ನ ಬ್ಯಾಟರ್ ಅಲೆಕ್ಸ್ ಹೇಲ್ಸ್. ಇದಕ್ಕೂ ಮುನ್ನ ಕ್ರಿಸ್ ಗೇಲ್, ಶೊಯೆಬ್ ಮಲಿಕ್ ಹಾಗೂ ಕೀರನ್ ಪೊಲಾರ್ಡ್ ಮಾತ್ರ ಈ ಸಾಧನೆ ಮಾಡಿದ್ದರು.

ಝಾಹಿರ್ ಯೂಸುಫ್
|

Updated on: Jan 07, 2025 | 9:54 AM

Share
ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ದಾಂಡಿಗ ಅಲೆಕ್ಸ್ ಹೇಲ್ಸ್ ಅಬ್ಬರ ಮುಂದುವರೆದಿದೆ. ಪ್ರಸ್ತುತ ನಡೆಯುತ್ತಿರುವ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ರಂಗ್​ಪುರ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ಹೇಲ್ಸ್, ಸಿಲ್ಹೆಟ್ ಸ್ಟ್ರೈಕರ್ಸ್ ವಿರುದ್ಧದ ಪಂದ್ಯದಲ್ಲಿ 113 ರನ್​ಗಳ ಭರ್ಜರಿ ಶತಕ ಸಿಡಿಸಿದ್ದಾರೆ.

1 / 7
ಈ ಶತಕದೊಂದಿಗೆ ಅಲೆಕ್ಸ್ ಹೇಲ್ಸ್ ಟಿ20 ಕ್ರಿಕೆಟ್​ನಲ್ಲಿ 13 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲಿ 13000 ರನ್ ಕಲೆಹಾಕಿದ ಇಂಗ್ಲೆಂಡ್​ನ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

2 / 7
ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2005 ರಿಂದ 2022 ರವರೆಗೆ ವೆಸ್ಟ್ ಇಂಡೀಸ್ ಸೇರಿದಂತೆ ವಿವಿಧ ತಂಡಗಳ ಪರ ಕಣಕ್ಕಿಳಿದಿರುವ ಕ್ರಿಸ್ ಗೇಲ್ 455	ಇನಿಂಗ್ಸ್​ಗಳಿಂದ ಒಟ್ಟು 14562 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 7
ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಪಾಕಿಸ್ತಾನದ ಶೊಯೆಬ್ ಮಲಿಕ್. 510 ಟಿ20 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಮಲಿಕ್ 13492	ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನ 2ನೇ ರನ್ ಸರದಾರ ಎನಿಸಿಕೊಂಡಿದ್ದಾರೆ.

4 / 7
ಹಾಗೆಯೇ ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ ಇದ್ದು, ವಿಂಡೀಸ್ ಸೇರಿದಂತೆ ವಿವಿಧ ತಂಡಗಳ ಪರ 611 ಟಿ20 ಇನಿಂಗ್ಸ್​ಗಳ ಮೂಲಕ ಪೊಲಾರ್ಡ್ ಒಟ್ಟು 13355 ರನ್ ಬಾರಿಸಿ ಈ ಸಾಧನೆ ಮಾಡಿದ್ದಾರೆ.

5 / 7
ಇದೀಗ ಈ ಪಟ್ಟಿಗೆ ಇಂಗ್ಲೆಂಡ್​ನ ಅಲೆಕ್ಸ್ ಹೇಲ್ಸ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ಈವರೆಗೆ 475 ಟಿ20 ಇನಿಂಗ್ಸ್ ಆಡಿರುವ ಅಲೆಕ್ಸ್ ಹೇಲ್ಸ್ 13000+ ರನ್​ ಕಲೆಹಾಕುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 13 ಸಾವಿರ ರನ್ ಪೂರೈಸಿದ ವಿಶ್ವದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 7
ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ. ಟೀಮ್ ಇಂಡಿಯಾ ಹಾಗೂ ಆರ್​​ಸಿಬಿ ಪರ ಒಟ್ಟು 382 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 12886 ರನ್ ಗಳಿಸಿ ಟಿ20 ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಮೂಲಕ ಕಿಂಗ್ ಕೊಹ್ಲಿ 13 ಸಾವಿರ ರನ್​​ಗಳ ಗಡಿದಾಟುವ ನಿರೀಕ್ಷೆಯಿದೆ.

7 / 7
Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ

ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ

‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?

‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...

‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ

ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..

ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ

ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ

ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು