- TV9 Kannada Kannada News Photos Cricket Photos Alex Hales Becomes 4th Batter Scores 13,000 Runs in T20
ಟಿ20 ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದ ಅಲೆಕ್ಸ್ ಹೇಲ್ಸ್
T20 Records: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಮತ್ತು ವಿವಿಧ ಫ್ರಾಂಚೈಸಿ ಲೀಗ್ಗಳ ಮೂಲಕ ಕೇವಲ ನಾಲ್ವರು ಆಟಗಾರರು ಮಾತ್ರ ಟಿ20 ಕ್ರಿಕೆಟ್ನಲ್ಲಿ 13 ಸಾವಿರ ರನ್ ಕಲೆಹಾಕಿದ್ದಾರೆ. ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿರುವುದು ಇಂಗ್ಲೆಂಡ್ನ ಬ್ಯಾಟರ್ ಅಲೆಕ್ಸ್ ಹೇಲ್ಸ್. ಇದಕ್ಕೂ ಮುನ್ನ ಕ್ರಿಸ್ ಗೇಲ್, ಶೊಯೆಬ್ ಮಲಿಕ್ ಹಾಗೂ ಕೀರನ್ ಪೊಲಾರ್ಡ್ ಮಾತ್ರ ಈ ಸಾಧನೆ ಮಾಡಿದ್ದರು.
Updated on: Jan 07, 2025 | 9:54 AM

ಟಿ20 ಕ್ರಿಕೆಟ್ನಲ್ಲಿ ಇಂಗ್ಲೆಂಡ್ ದಾಂಡಿಗ ಅಲೆಕ್ಸ್ ಹೇಲ್ಸ್ ಅಬ್ಬರ ಮುಂದುವರೆದಿದೆ. ಪ್ರಸ್ತುತ ನಡೆಯುತ್ತಿರುವ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್ನಲ್ಲಿ ರಂಗ್ಪುರ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ಹೇಲ್ಸ್, ಸಿಲ್ಹೆಟ್ ಸ್ಟ್ರೈಕರ್ಸ್ ವಿರುದ್ಧದ ಪಂದ್ಯದಲ್ಲಿ 113 ರನ್ಗಳ ಭರ್ಜರಿ ಶತಕ ಸಿಡಿಸಿದ್ದಾರೆ.

ಈ ಶತಕದೊಂದಿಗೆ ಅಲೆಕ್ಸ್ ಹೇಲ್ಸ್ ಟಿ20 ಕ್ರಿಕೆಟ್ನಲ್ಲಿ 13 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲಿ 13000 ರನ್ ಕಲೆಹಾಕಿದ ಇಂಗ್ಲೆಂಡ್ನ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2005 ರಿಂದ 2022 ರವರೆಗೆ ವೆಸ್ಟ್ ಇಂಡೀಸ್ ಸೇರಿದಂತೆ ವಿವಿಧ ತಂಡಗಳ ಪರ ಕಣಕ್ಕಿಳಿದಿರುವ ಕ್ರಿಸ್ ಗೇಲ್ 455 ಇನಿಂಗ್ಸ್ಗಳಿಂದ ಒಟ್ಟು 14562 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಪಾಕಿಸ್ತಾನದ ಶೊಯೆಬ್ ಮಲಿಕ್. 510 ಟಿ20 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಮಲಿಕ್ 13492 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನ 2ನೇ ರನ್ ಸರದಾರ ಎನಿಸಿಕೊಂಡಿದ್ದಾರೆ.

ಹಾಗೆಯೇ ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ನ ಕೀರನ್ ಪೊಲಾರ್ಡ್ ಇದ್ದು, ವಿಂಡೀಸ್ ಸೇರಿದಂತೆ ವಿವಿಧ ತಂಡಗಳ ಪರ 611 ಟಿ20 ಇನಿಂಗ್ಸ್ಗಳ ಮೂಲಕ ಪೊಲಾರ್ಡ್ ಒಟ್ಟು 13355 ರನ್ ಬಾರಿಸಿ ಈ ಸಾಧನೆ ಮಾಡಿದ್ದಾರೆ.

ಇದೀಗ ಈ ಪಟ್ಟಿಗೆ ಇಂಗ್ಲೆಂಡ್ನ ಅಲೆಕ್ಸ್ ಹೇಲ್ಸ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ಈವರೆಗೆ 475 ಟಿ20 ಇನಿಂಗ್ಸ್ ಆಡಿರುವ ಅಲೆಕ್ಸ್ ಹೇಲ್ಸ್ 13000+ ರನ್ ಕಲೆಹಾಕುವ ಮೂಲಕ ಟಿ20 ಕ್ರಿಕೆಟ್ನಲ್ಲಿ 13 ಸಾವಿರ ರನ್ ಪೂರೈಸಿದ ವಿಶ್ವದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ. ಟೀಮ್ ಇಂಡಿಯಾ ಹಾಗೂ ಆರ್ಸಿಬಿ ಪರ ಒಟ್ಟು 382 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 12886 ರನ್ ಗಳಿಸಿ ಟಿ20 ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಕಿಂಗ್ ಕೊಹ್ಲಿ 13 ಸಾವಿರ ರನ್ಗಳ ಗಡಿದಾಟುವ ನಿರೀಕ್ಷೆಯಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



