AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲೆಕ್ಸ್ ಅಬ್ಬರಕ್ಕೆ ಕ್ರಿಸ್ ಗೇಲ್​ ವಿಶ್ವ ದಾಖಲೆಯೇ ಶೇಕಿಂಗ್

T20 Records: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಮತ್ತು ವಿವಿಧ ಫ್ರಾಂಚೈಸಿ ಲೀಗ್​ಗಳ ಮೂಲಕ ಕೇವಲ ಮೂವರು ಆಟಗಾರರು ಮಾತ್ರ ಟಿ20 ಕ್ರಿಕೆಟ್​ನಲ್ಲಿ 14 ಸಾವಿರ ರನ್ ಕಲೆಹಾಕಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡಿರುವುದು ಇಂಗ್ಲೆಂಡ್​​ನ ಬ್ಯಾಟರ್ ಅಲೆಕ್ಸ್ ಹೇಲ್ಸ್. ಇದಕ್ಕೂ ಮುನ್ನ ಕ್ರಿಸ್ ಗೇಲ್ ಹಾಗೂ ಕೀರನ್ ಪೊಲಾರ್ಡ್ ಮಾತ್ರ ಈ ಸಾಧನೆ ಮಾಡಿದ್ದರು.

ಝಾಹಿರ್ ಯೂಸುಫ್
|

Updated on: Aug 31, 2025 | 11:55 AM

Share
ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ದಾಂಡಿಗ ಅಲೆಕ್ಸ್ ಹೇಲ್ಸ್ ಅಬ್ಬರ ಮುಂದುವರೆದಿದೆ. ಪ್ರಸ್ತುತ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ (CPL 2025) ಟ್ರಿನ್​ಬಾಗೊ ನೈಟ್ ರೈಡರ್ಸ್ ಪರ ಪರ ಕಣಕ್ಕಿಳಿಯುತ್ತಿರುವ ಹೇಲ್ಸ್, ಗಯಾನಾ ಅಮೆಝಾನ್ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ 43 ಎಸೆತಗಳಲ್ಲಿ 74 ರನ್ ಸಿಡಿಸಿದ್ದಾರೆ.

1 / 6
ಈ ಅರ್ಧಶತಕದೊಂದಿಗೆ ಅಲೆಕ್ಸ್ ಹೇಲ್ಸ್ ಟಿ20 ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲಿ 14000 ರನ್ ಕಲೆಹಾಕಿದ ಇಂಗ್ಲೆಂಡ್​ನ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 3ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

2 / 6
ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2005 ರಿಂದ 2022 ರವರೆಗೆ ವೆಸ್ಟ್ ಇಂಡೀಸ್ ಸೇರಿದಂತೆ ವಿವಿಧ ತಂಡಗಳ ಪರ ಕಣಕ್ಕಿಳಿದಿರುವ ಕ್ರಿಸ್ ಗೇಲ್ 455 ಇನಿಂಗ್ಸ್​ಗಳಿಂದ ಒಟ್ಟು 14562 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 6
ಕ್ರಿಸ್ ಗೇಲ್ ಬಳಿಕ ಕೀರನ್ ಪೊಲಾರ್ಡ್ 14 ಸಾವಿರ ರನ್​ಗಳ ಸಾಧನೆ ಮಾಡಿದ್ದರು. ಪೊಲಾರ್ಡ್ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 634 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 9287 ಎಸೆತಗಳನ್ನು ಎದುರಿಸಿರುವ ಅವರು ಬರೋಬ್ಬರಿ 14012 ರನ್ ಕಲೆಹಾಕಿದ್ದಾರೆ. ಇದೀಗ ಪೊಲಾರ್ಡ್ ಅವರನ್ನು ಹಿಂದಿಕ್ಕುವಲ್ಲಿ ಅಲೆಕ್ಸ್ ಹೇಲ್ಸ್ ಯಶಸ್ವಿಯಾಗಿದ್ದಾರೆ.

4 / 6
ಟಿ20 ಕ್ರಿಕೆಟ್​ನಲ್ಲಿ ಈವರೆಗೆ 505 ಇನಿಂಗ್ಸ್ ಆಡಿರುವ ಅಲೆಕ್ಸ್ ಹೇಲ್ಸ್ 9642 ಎಸೆತಗಳನ್ನು ಎದುರಿಸಿ 14024 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ವಿಶ್ದದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಅಲೆಕ್ಸ್ ಬ್ಯಾಟ್​ನಿಂದ ಇನ್ನು 539 ರನ್​ಗಳು ಮೂಡಿಬಂದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

5 / 6
ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆ ಮುರಿಯಲು ಅಲೆಕ್ಸ್ ಹೇಲ್ಸ್​ಗೆ ಬೇಕಿರುವುದು ಕೇವಲ 539 ರನ್​ಗಳು ಮಾತ್ರ. ಹೀಗಾಗಿ ಮುಂಬರುವ ಟಿ20 ಲೀಗ್​ಗಳ ಮೂಲಕ ಇಂಗ್ಲೆಂಡ್ ದಾಂಡಿಗ ಹೊಸ ವಿಶ್ವ ದಾಖಲೆ ಬರೆಯುವುದನ್ನು ಎದುರು ನೋಡಬಹುದು.

6 / 6
Follow Us
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?

ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ

ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ

ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್

ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ

ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ

ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ

ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ

IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ