T20 World Cup 2024: ಟಿ20 ವಿಶ್ವಕಪ್ನಲ್ಲಿ ಸೆಮಿ ಫೈನಲ್ಗೇರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
T20 World Cup 2024: ಟಿ20 ವಿಶ್ವಕಪ್ನ 9ನೇ ಆವೃತ್ತಿ ಜೂನ್ 2 ರಿಂದ ಶುರುವಾಗಲಿದೆ. ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ ಭಾರತ ತಂಡವು ಜೂನ್ 5 ರಂದು ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಿದರೆ, ಜೂನ್ 9 ರಂದು ನಡೆಯಲಿರುವ ತನ್ನ 2ನೇ ಪಂದ್ಯಲ್ಲಿ ಪಾಕಿಸ್ತಾನ್ ವಿರುದ್ಧ ಸೆಣಸಲಿದೆ.
1 / 7
T20 World Cup 2024: ಟಿ20 ವಿಶ್ವಕಪ್ 2024 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ವೆಸ್ಟ್ ಇಂಡೀಸ್-ಯುಎಸ್ಎ ಜಂಟಿಯಾಗಿ ಆಯೋಜಿಸಲಿರುವ 9ನೇ ಆವೃತ್ತಿಯಲ್ಲಿ ಈ ಟೂರ್ನಿಯಲ್ಲಿ ಈ ಬಾರಿ 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಹೀಗಾಗಿ ಮೊದಲ ಸುತ್ತಿನಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
2 / 7
ಈ ಪೈಪೋಟಿ ನಡುವೆ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ತಂಡ ಸೂಪರ್-8 ಹಂತಕ್ಕೇರಲಿದೆ. ಈ ಹಂತದಲ್ಲಿ ಎಂಟು ತಂಡಗಳು ಸೆಣಸಲಿದ್ದು, ಇದರಲ್ಲಿ ಗೆದ್ದು ಸೆಮಿಫೈನಲ್ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು.
3 / 7
ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್ಗೇರುವುದು ಖಚಿತ. ಭಾರತೀಯ ಆಟಗಾರರು ಇತ್ತೀಚೆಗೆ ಐಪಿಎಲ್ ಆಡಿರುವುದರಿಂದ ಎಲ್ಲರೂ ಉತ್ತಮ ಫಾರ್ಮ್ನಲ್ಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಪಡೆ ಸೆಮಿಫೈನಲ್ಗೆ ಪ್ರವೇಶಿಸುವುದು ಖಚಿತ ಎಂದಿದ್ದಾರೆ.
4 / 7
ಇನ್ನು ಇಂಗ್ಲೆಂಡ್ ತಂಡ ಕೂಡ ಬಲಿಷ್ಠವಾಗಿದೆ. ತಂಡದಲ್ಲಿರುವ ಜೋಸ್ ಬಟ್ಲರ್, ಫಿಲ್ ಸಾಲ್ಟ್, ವಿಲ್ ಜಾಕ್ಸ್ ಸೇರಿದಂತೆ ಪ್ರಮುಖರು ಉತ್ತಮ ಲಯದಲ್ಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡವನ್ನು ಕೂಡ ಸೆಮಿಫೈನಲ್ನಲ್ಲಿ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಹುಡು ತಿಳಿಸಿದ್ದಾರೆ.
5 / 7
ಹಾಗೆಯೇ ಕೇನ್ ವಿಲಿಯಮ್ಸನ್ ಮುಂದಾಳತ್ವದ ನ್ಯೂಝಿಲೆಂಡ್ ತಂಡವನ್ನು ಸೆಮಿಫೈನಲ್ನಲ್ಲಿ ಎದುರು ನೋಡಬಹುದು. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ನ್ಯೂಝಿಲೆಂಡ್ ಕೂಡ ಸೆಮಿಫೈನಲ್ ಹಂತಕ್ಕೇರಲಿದೆ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.
6 / 7
ಇನ್ನು ಸೌತ್ ಆಫ್ರಿಕಾ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದ್ದು, ಅವರಲ್ಲಿ ಬಹುತೇಕರು ಉತ್ತಮ ಫಾರ್ಮ್ನಲ್ಲಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ತಂಡ ಕೂಡ ಈ ಬಾರಿ ಫೈನಲ್ಗೆ ಪ್ರವೇಶಿಸಲಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.
7 / 7
ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್ ಆಡಲಿದೆ. ಅದರಂತೆ ಜೂನ್ 27 ರಂದು ನಡೆಯಲಿರುವ ಸೆಮಿ ಫೈನಲ್ ಪಂದ್ಯಗಳಲ್ಲಿ ಈ ನಾಲ್ಕು ತಂಡಗಳು ಕಣಕ್ಕಿಳಿಯಲಿದೆಯಾ? ರಾಯುಡು ಅವರ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.