AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ ಟೀಮ್ ಇಂಡಿಯಾ

India vs South Africa 2nd Test: ಕೇಪ್​ಟೌನ್​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ದಿನದಾಟದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊಹಮ್ಮದ್ ಸಿರಾಜ್ (6 ವಿಕೆಟ್ಸ್​) ದಾಳಿಗೆ ತತ್ತರಿಸಿತು. ಪರಿಣಾಮ ಸೌತ್ ಆಫ್ರಿಕಾ ತಂಡವು ಕೇವಲ 55 ರನ್​ಗಳಿಗೆ ಆಲೌಟ್ ಆಗಿದೆ.

TV9 Web
| Edited By: |

Updated on: Jan 04, 2024 | 8:29 AM

Share
ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಆದರೆ ಬ್ಯಾಟ್ಸ್​ಮನ್​ಗಳು ಮುಗ್ಗರಿಸುವ ಮೂಲಕ ಅತ್ಯಂತ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 6
ಕೇಪ್​ಟೌನ್​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ದಿನದಾಟದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊಹಮ್ಮದ್ ಸಿರಾಜ್ (6 ವಿಕೆಟ್ಸ್​) ದಾಳಿಗೆ ತತ್ತರಿಸಿತು. ಪರಿಣಾಮ ಸೌತ್ ಆಫ್ರಿಕಾ ತಂಡವು ಕೇವಲ 55 ರನ್​ಗಳಿಗೆ ಆಲೌಟ್ ಆಗಿದೆ.

2 / 6
ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಕೆಎಲ್ ರಾಹುಲ್ ಔಟಾಗುತ್ತಿದ್ದಂತೆ ಟೀಮ್ ಇಂಡಿಯಾ ದಿಢೀರ್ ಕುಸಿತಕ್ಕೊಳಗಾಗಿದೆ. ಪರಿಣಾಮ 11 ಎಸೆತಗಳಲ್ಲಿ ಯಾವುದೇ ರನ್ ಕಲೆಹಾಕದೆ 6 ವಿಕೆಟ್ ಕಳೆದುಕೊಂಡು 153 ರನ್​ಗಳಿಗೆ ಆಲೌಟ್ ಆಯಿತು.

3 / 6
ಅಚ್ಚರಿ ಎಂದರೆ ಕೊನೆಯ ನಾಲ್ವರು ಬ್ಯಾಟರ್​​ಗಳು ಖಾತೆ ತೆರೆಯದೇ ಔಟಾದರೆ, ಒಬ್ಬರು ಶೂನ್ಯದೊಂದಿಗೆ ಅಜೇಯರಾಗಿ ಉಳಿದರು. ಅಂದರೆ ಕೊನೆಯ ಐವರು ಬ್ಯಾಟರ್​ಗಳಿಂದ ಯಾವುದೇ ರನ್​ ಮೂಡಿ ಬಂದಿರಲಿಲ್ಲ. ಇದಕ್ಕೂ ಮುನ್ನ ಇಬ್ಬರು ದಾಂಡಿಗರು ಶೂನ್ಯಕ್ಕೆ ಔಟಾಗಿದ್ದರು.

4 / 6
ಅಂದರೆ ಟೀಮ್ ಇಂಡಿಯಾ ಇನಿಂಗ್ಸ್​ನಲ್ಲಿ 7 ಬ್ಯಾಟರ್​ಗಳು ಶೂನ್ಯದೊಂದಿಗೆ ಕಾಣಿಸಿಕೊಂಡಿದ್ದರು. ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಮುಕೇಶ್ ಕುಮಾರ್ ಖಾತೆ ತೆರೆಯದೇ ಪೆವಿಲಿಯನ್​ಗೆ ಹಿಂತಿರುಗಿದ್ದರು.

5 / 6
ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೂಡಿಬಂದ ಅತ್ಯಂತ ಕಳಪೆ ದಾಖಲೆಗಳಲ್ಲಿ ಒಂದು. ಅಂದರೆ 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಯಾವುದೇ ತಂಡದ 7 ಬ್ಯಾಟರ್​ಗಳು ಸೊನ್ನೆಯೊಂದಿಗೆ ಪೆವಿಲಿಯನ್​ಗೆ ಮರಳಿರಲಿಲ್ಲ. ಇದೀಗ 2522 ಟೆಸ್ಟ್​ ಪಂದ್ಯಗಳ ಬಳಿಕ ಟೀಮ್ ಇಂಡಿಯಾದ 7 ಬ್ಯಾಟರ್​ಗಳು ಸೊನ್ನೆ ಸುತ್ತುವ ಮೂಲಕ ಅತ್ಯಂತ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
TV9 Web
TV9 Web

TV9 Kannada

Read More
Follow Us
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್