AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andre Russell: ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

Andre Russell: ಆ್ಯಂಡ್ರೆ ರಸೆಲ್ ವೆಸ್ಟ್ ಇಂಡೀಸ್ ಪರ 56 ಏಕದಿನ, 84 ಟಿ20 ಹಾಗೂ ಒಂದು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಟಿ20 ಕ್ರಿಕೆಟ್​ನಲ್ಲಿ 1074 ರನ್ ಕಲೆಹಾಕಿದರೆ, ಏಕದಿನ ಕ್ರಿಕೆಟ್​ನಲ್ಲಿ 1034 ರನ್​ ಗಳಿಸಿದ್ದರು. ಇನ್ನು ಏಕೈಕ ಟೆಸ್ಟ್ ಪಂದ್ಯದಲ್ಲಿ ಅವರು 2 ರನ್ ಹಾಗೂ 1 ವಿಕೆಟ್ ಪಡೆದಿದ್ದರು. ಇದೀಗ 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಲು ರಸೆಲ್ ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 17, 2025 | 7:59 AM

Share
ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ (Andre Russell) ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ ಇಂಟರ್​ನ್ಯಾಷನಲ್ ಕೆರಿಯರ್​ಗೆ ವಿದಾಯ ಹೇಳುವುದಾಗಿ 37 ವರ್ಷದ ರಸೆಲ್ ತಿಳಿಸಿದ್ದಾರೆ.

1 / 5
2026 ರ ಟಿ20 ವಿಶ್ವಕಪ್​ಗೂ ಮುನ್ನ ನಿವೃತ್ತಿ ನೀಡಲು ನಿರ್ಧರಿಸಿದ್ದು, ಅದರಂತೆ ಜಮೈಕಾದ ಸಬೀನಾ ಪಾರ್ಕ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರಸೆಲ್ ತಿಳಿಸಿದ್ದಾರೆ. ಸಬೀನಾ ಪಾರ್ಕ್ ರಸೆಲ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಮೈದಾನದಲ್ಲಿ ನಡೆಯಲಿರುವ ಪಂದ್ಯದ ಮೂಲಕ ವಿದಾಯ ಹೇಳಲು ಅವರು ಬಯಸಿದ್ದಾರೆ.

2 / 5
2011 ರಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ವೆಸ್ಟ್ ಇಂಡೀಸ್​ ಪರ ಟಿ20 ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ 86 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 75 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 3 ಅರ್ಧಶತಕಗೊಂದಿಗೆ 1122 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 61 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

3 / 5
ಇನ್ನು 2011 ರಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ ಈವರೆಗೆ ಆಡಿರುವುದು 56 ಪಂದ್ಯಗಳನ್ನು ಮಾತ್ರ. ಈ ವೇಳೆ 4 ಅರ್ಧಶತಕಗಳೊಂದಿಗೆ 1034 ರನ್ ಕಲೆಹಾಕಿದ್ದಾರೆ. ಇನ್ನು 55 ಏಕದಿನ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 70 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

4 / 5
ಇದೀಗ 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್​ ಕೆರಿಯರ್​ಗೆ ಆ್ಯಂಡ್ರೆ ರಸೆಲ್ ಗುಡ್ ಬೈ ಹೇಳಿದ್ದಾರೆ. ಇದಾಗ್ಯೂ ಮುಂಬರುವ ದಿನಗಳಲ್ಲಿ ಟಿ20 ಲೀಗ್​ಗಳಲ್ಲಿ ಮುಂದುವರೆಯುವುದಾಗಿ ಅವರು ತಿಳಿಸಿದ್ದಾರೆ. ಅದರಂತೆ ಐಪಿಎಲ್. ಸಿಪಿಎಲ್, ಎಂಸಿಎಲ್ ಸೇರಿದಂತೆ ವಿಶ್ವದ ಪ್ರಮುಖ ಟಿ20 ಲೀಗ್​ನಲ್ಲಿ ಆ್ಯಂಡ್ರೆ ರಸೆಲ್ ಅವರ ಟಿ20 ಆಟ ಮುಂದುವರೆಯಲಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?

ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್

ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ

ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ

ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು

ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ

ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ

ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ

ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!

ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!