ಮಸಲ್ ಪವರ್… ಟಿ20 ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ರಸೆಲ್
Andre Russell Records: ಟಿ20 ಕ್ರಿಕೆಟ್ ಇತಿಹಾಸದಲ್ಲಿ 750+ ಸಿಕ್ಸ್ ಸಿಡಿಸಿರುವುದು ಕೇವಲ ಮೂವರು ಬ್ಯಾಟರ್ಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಯುನಿವರ್ಸ್ ಬಾಸ್ ಕ್ರಿಸ್ ಗೇಲ್. ಆ ಬಳಿಕ ವೆಸ್ಟ್ ಇಂಡೀಸ್ನವರೇ ಆದ ಕೀರನ್ ಪೊಲಾರ್ಡ್ ಈ ದಾಖಲೆಯನ್ನು ಸರಿಗಟ್ಟಿದ್ದರು. ಇದೀಗ ಈ ಪಟ್ಟಿಗೆ ಆ್ಯಂಡ್ರೆ ರಸೆಲ್ ಎಂಟ್ರಿ ಕೊಟ್ಟಿದ್ದಾರೆ.
ವೆಸ್ಟ್ ಇಂಡೀಸ್ನ ಆ್ಯಂಡ್ರೆ ರಸೆಲ್ (Andre Russell) ಟಿ20 ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸರ್ಗಳ ಸುರಿಮಳೆಗೈಯ್ಯುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ರಸೆಲ್ ಇದೀಗ ಮೂರನೇ ಸ್ಥಾನಕ್ಕೇರಿದ್ದಾರೆ.
1 / 5
ಡಲ್ಲಾಸ್ನಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 20ನೇ ಪಂದ್ಯದಲ್ಲಿ ಸಿಯಾಟಲ್ ಓರ್ಕಾಸ್ ವಿರುದ್ಧ ರಸೆಲ್ ಕೇವಲ 39 ಎಸೆತಗಳಲ್ಲಿ ಅಜೇಯ 65 ರನ್ ಬಾರಿಸಿದ್ದರು. ಈ ವೇಳೆ ಆ್ಯಂಡ್ರೆ ರಸೆಲ್ ಬ್ಯಾಟ್ನಿಂದ ಮೂಡಿಬಂದ ಸಿಕ್ಸರ್ಗಳ ಸಂಖ್ಯೆ ನಾಲ್ಕು. ಈ 4 ಸಿಕ್ಸ್ಗಳೊಂದಿಗೆ ರಸೆಲ್ ಟಿ20 ಕ್ರಿಕೆಟ್ನಲ್ಲಿ ವಿಶೇಷ ಮೈಲುಗಲ್ಲು ದಾಟಿದ್ದಾರೆ.
2 / 5
ಸಿಯಾಟಲ್ ಓರ್ಕಾಸ್ ವಿರುದ್ಧದ ಪಂದ್ಯದಲ್ಲಿ 4 ಸಿಕ್ಸ್ ಬಾರಿಸುವುದರೊಂದಿಗೆ ರಸೆಲ್ ಟಿ20 ಕ್ರಿಕೆಟ್ನಲ್ಲಿ 750+ ಸಿಕ್ಸ್ ಸಿಡಿಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಟಿ20 ಕ್ರಿಕೆಟ್ನಲ್ಲಿ ಈವರೆಗೆ 481 ಇನಿಂಗ್ಸ್ ಆಡಿರುವ ರಸೆಲ್ ಒಟ್ಟು 5480 ಎಸೆತಗಳನ್ನು ಎದುರಿಸಿದ್ದು ಈ ವೇಳೆ ಬರೋಬ್ಬರಿ 751 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲೇ ಅತ್ಯಧಿಕ ಸಿಕ್ಸ್ ಬಾರಿಸಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
3 / 5
ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ವೆಸ್ಟ್ ಇಂಡೀಸ್ನ ಕೀರನ್ ಪೋಲಾರ್ಡ್. ಟಿ20 ಕ್ರಿಕೆಟ್ನಲ್ಲಿ ಇದುವರೆಗೆ 623 ಇನಿಂಗ್ಸ್ ಆಡಿರುವ ಪೊಲಾರ್ಡ್ 9082 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ ಪೊಲಾರ್ಡ್ ಬ್ಯಾಟ್ನಿಂದ ಬರೋಬ್ಬರಿ 916 ಸಿಕ್ಸ್ಗಳು ಮೂಡಿಬಂದಿವೆ.
4 / 5
ಇನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಯುನಿವರ್ಸ್ ಬಾಸ್ ಖ್ಯಾತಿ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಟಿ20 ಕ್ರಿಕೆಟ್ನಲ್ಲಿ 455 ಇನಿಂಗ್ಸ್ ಆಡಿರುವ ಗೇಲ್ ಒಟ್ಟು 10060 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ ಬರೋಬ್ಬರಿ 1056 ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.