Andre Russell: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಆಂಡ್ರೆ ರಸೆಲ್

Andre Russell Records: ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವೆಸ್ಟ್ ಇಂಡೀಸ್ ತಂಡದ ಸ್ಪೋಟಕ ದಾಂಡಿಗ ಆಂಡ್ರೆ ರಸೆಲ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ ಯಾರೂ ಕೂಡ ಮಾಡದ ವರ್ಲ್ಡ್​ ರೆಕಾರ್ಡ್ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Feb 12, 2024 | 9:37 AM

ಅಡಿಲೇಡ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಆ್ಯಂಡ್ರೆ ರಸೆಲ್ ಕೇವಲ 16 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 37 ರನ್ ಬಾರಿಸಿ ಮಿಂಚಿದ್ದರು. ಈ 37 ರನ್​ಗಳೊಂದಿಗೆ ರಸೆಲ್ ಟಿ20 ಕ್ರಿಕೆಟ್​ನಲ್ಲಿ ಯಾರೂ ಮಾಡದ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ.

1 / 6
ಈ ಪಂದ್ಯದಲ್ಲಿ 37 ರನ್​ ಕಲೆಹಾಕುವುದರೊಂದಿಗೆ ಆಂಡ್ರೆ ರಸೆಲ್  ಟಿ20 ಕ್ರಿಕೆಟ್​ನಲ್ಲಿ 8 ಸಾವಿರ ರನ್ ಪೂರೈಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 8 ಸಾವಿರ ರನ್ ಹಾಗೂ 400 ವಿಕೆಟ್​ ಪಡೆದ ವಿಶ್ವದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ಮಸಲ್​ಮ್ಯಾನ್ ಖ್ಯಾತಿಯ ರಸೆಲ್ ಪಾಲಾಗಿದೆ.

2 / 6
ಅಂದರೆ ರಸೆಲ್ ಅವರನ್ನು ಹೊರತುಪಡಿಸಿ ಟಿ20 ಕ್ರಿಕೆಟ್​ನಲ್ಲಿ ಯಾವುದೇ ಆಟಗಾರ 8 ಸಾವಿರ ರನ್ + 400 ವಿಕೆಟ್​ಗಳನ್ನು ಪಡೆದಿಲ್ಲ. ಇದೀಗ ಈ ಸಾಧನೆ ಮಾಡಿದ ಮೊದಲ ಆಲ್​ರೌಂಡರ್ ಎಂಬ ಹೆಗ್ಗಳಿಕೆಗೆ ರಸೆಲ್ ಪಾತ್ರರಾಗಿದ್ದಾರೆ. ಇದರೊಂದಿಗೆ ಇನ್ನೂ ಹಲವು ದಾಖಲೆಗಳನ್ನು ಬರೆದಿದ್ದಾರೆ. ಆ ದಾಖಲೆಗಳಾವುವು ಎಂದರೆ...

3 / 6
ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಂಡೀಸ್ ಬ್ಯಾಟರ್​ಗಳ ಪಟ್ಟಿಯಲ್ಲಿ ಆಂಡ್ರೆ ರಸೆಲ್ 3ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಕ್ರಿಸ್ ಗೇಲ್ (14,562) ಮತ್ತು ಕೀರನ್ ಪೊಲಾರ್ಡ್ (12,577) ಮೊದಲೆರಡು ಸ್ಥಾನಗಳಲ್ಲಿದ್ದಾರೆ. ಇದೀಗ 8,029 ರನ್​ಗಳೊಂದಿಗೆ ರಸೆಲ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

4 / 6
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್​ಗಳನ್ನು ಕಬಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ರಸೆಲ್ 6ನೇ ಸ್ಥಾನದಲ್ಲಿದ್ದಾರೆ. ಈ ಸಾಧಕರ ಪಟ್ಟಿಯಲ್ಲಿ ಡ್ವೇನ್ ಬ್ರಾವೊ (623), ರಶೀದ್ ಖಾನ್ (556), ಸುನಿಲ್ ನರೈನ್ (532), ಇಮ್ರಾನ್ ತಾಹಿರ್ (497), ಮತ್ತು ಶಕೀಬ್ ಅಲ್ ಹಸನ್ (476) ಟಾಪ್-5 ನಲ್ಲಿದ್ದಾರೆ. ಇದೀಗ 424 ವಿಕೆಟ್​ಗಳೊಂದಿಗೆ ರಸೆಲ್ 6ನೇ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

5 / 6
ಒಟ್ಟಿನಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯುತ್ತಮ ಆಲ್​ರೌಂಡರ್ ಪ್ರದರ್ಶನದ ಮೂಲಕ ಸಂಚಲನ ಸೃಷ್ಟಿಸುವ ಆಂಡ್ರೆ ರಸೆಲ್ ಇದೀಗ 8 ಸಾವಿರ ರನ್ + 400 ವಿಕೆಟ್​ಗಳನ್ನು ಕಬಳಿಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿರುವುದು ವಿಶೇಷ.

6 / 6
Follow us
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್