AUS vs WI: ಶೆರ್ಫೇನ್ ಜೊತೆಗೂಡಿ ವಿಶ್ವ ದಾಖಲೆ ಬರೆದ ರಸೆಲ್

Andre Russell-Sherfane Rutherford: ಈ ಪಂದ್ಯದಲ್ಲಿ 40 ಎಸೆತಗಳನ್ನು ಎದುರಿಸಿದ ಶೆರ್ಫೇನ್ ರುದರ್​ಫೋರ್​ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 67 ರನ್ ಬಾರಿಸಿದರು. ಇನ್ನು ಕೇವಲ 29 ಎಸೆತಗಳನ್ನು ಎದುರಿಸಿದ ಆಂಡ್ರೆ ರಸೆಲ್ 7 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 71 ರನ್ ಚಚ್ಚಿದರು.

TV9 Web
| Updated By: ಝಾಹಿರ್ ಯೂಸುಫ್

Updated on:Feb 14, 2024 | 3:05 PM

ಪರ್ತ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವಿಂಡೀಸ್ ಪರ ಆಂಡ್ರೆ ರಸೆಲ್ ಹಾಗೂ ಶೆರ್ಫೇನ್ ರುದರ್​ಫೋರ್ಡ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 6
5 ವಿಕೆಟ್​ ಕಳೆದುಕೊಂಡ ಬಳಿಕ ಜೊತೆಗೂಡಿದ ರಸೆಲ್-ಶೆರ್ಫೇನ್ ಜೋಡಿಯು ಆಸ್ಟ್ರೇಲಿಯಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ 6ನೇ ವಿಕೆಟ್​ಗೆ ಬರೋಬ್ಬರಿ 139 ರನ್​ಗಳ ಜೊತೆಯಾಟ ಮೂಡಿಬಂತು. ಇದು ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯಾಗಿದೆ.

2 / 6
ಇದಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ 6ನೇ ವಿಕೆಟ್​ಗೆ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಟೋನಿ ಉರಾ ಮತ್ತು ನಾರ್ಮನ್ ವನುವ ಹೆಸರಿನಲ್ಲಿತ್ತು. 2022 ರಲ್ಲಿ ಸಿಂಗಾಪುರ್ ವಿರುದ್ಧದ ಪಂದ್ಯದಲ್ಲಿ ಪಪುವಾ ನ್ಯೂ ಗಿನಿಯಾ ತಂಡದ ಪರ ಕಣಕ್ಕಿಳಿದ ಟೋನಿ-ನಾರ್ಮನ್ ಜೋಡಿ 6 ವಿಕೆಟ್​ಗೆ 115 ರನ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 6
ಇದೀಗ ಆಸ್ಟ್ರೇಲಿಯಾ ವಿರುದ್ಧ ಶೆರ್ಫೇನ್ ರುದರ್​ಫೋರ್ಡ್​ ಹಾಗೂ ಆಂಡ್ರೆ ರಸೆಲ್ ಜೊತೆಗೂಡಿ 6ನೇ ವಿಕೆಟ್​ಗೆ 139 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 6
ಇನ್ನು ಈ ಪಂದ್ಯದಲ್ಲಿ 40 ಎಸೆತಗಳನ್ನು ಎದುರಿಸಿದ ಶೆರ್ಫೇನ್ ರುದರ್​ಫೋರ್​ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 67 ರನ್ ಬಾರಿಸಿದರು. ಇನ್ನು ಕೇವಲ 29 ಎಸೆತಗಳನ್ನು ಎದುರಿಸಿದ ಆಂಡ್ರೆ ರಸೆಲ್ 7 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 71 ರನ್ ಚಚ್ಚಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 220 ರನ್ ಕಲೆಹಾಕಿತು.

5 / 6
221 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ (81) ಅರ್ಧಶತಕ ಬಾರಿಸಿ ಮಿಂಚಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅಂತಿಮವಾಗಿ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 183 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆಸ್ಟ್ರೇಲಿಯಾ ತಂಡ 37 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

6 / 6

Published On - 12:21 pm, Wed, 14 February 24

Follow us
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್