
ದೇಶೀಯ ಅಂಗಳದಲ್ಲಿ ಸ್ಫೋಟಕ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದಿರುವ ವೈಭವ್ ಸೂರ್ಯವಂಶಿ (Vaibhav Suryavanshi) ಮತ್ತೊಮ್ಮೆ ಅಬ್ಬರಿಸಿದ್ದಾರೆ. ಅದು ಕೂಡ 310ರ ಸ್ಟ್ರೈಕ್ ರೇಟ್ನಲ್ಲಿ. ಇದಾಗ್ಯೂ ಅವರಿಗೆ ದೊಡ್ಡ ಇನಿಂಗ್ಸ್ ಆಡಲು ಸಾಧ್ಯವಾಗಿಲ್ಲ.

ರಾಂಚಿಯಲ್ಲಿ ನಡೆದ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ಬಿಹಾರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಕೇವಲ 10 ಎಸೆತಗಳನ್ನು ಮಾತ್ರ ಎದುರಿಸಿದ್ದರು. ಇದರಲ್ಲಿ 9 ಎಸೆತಗಳಲ್ಲಿ 6 ಫೋರ್ ಹಾಗೂ 1 ಸಿಕ್ಸ್ ಸಿಡಿಸಿದ್ದರು. ಈ ಮೂಲಕ 310 ರ ಸ್ಟ್ರೈಕ್ ರೇಟ್ನಲ್ಲಿ 31 ರನ್ ಬಾರಿಸಿದ್ದರು.

ಆದರೆ ಬಿರುಸಿನ ಆಟಕ್ಕೆ ಮುಂದಾಗಿ ವೈಭವ್ ಸೂರ್ಯವಂಶಿ ಹತ್ತೇ ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದರು. ಇದಾಗ್ಯೂ ಬಿಹಾರ ತಂಡಕ್ಕೆ ಸ್ಫೋಟಕ ಆರಂಭ ಒದಗಿಸುವಲ್ಲಿ ಯುವ ದಾಂಡಿಗ ಯಶಸ್ವಿಯಾಗಿರುವುದು ವಿಶೇಷ. ಈ ಸ್ಫೋಟಕ ಆರಂಭದ ನೆರವನ್ನು ಪಡೆದ ಪಿಯುಷ್ ಸಿಂಗ್ ಶತಕ ಸಿಡಿಸಿದರು. ಈ ಮೂಲಕ 32.3 ಓವರ್ಗಳಲ್ಲಿ 220 ರನ್ ಬಾರಿಸಿ ಬಿಹಾರ ತಂಡ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.

ಇದಕ್ಕೂ ಮುನ್ನ ನಡೆದ ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 84 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 16 ಫೋರ್ಗಳೊಂದಿಗೆ 190 ರನ್ ಬಾರಿಸಿದ್ದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 150 ರನ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಈ ಪಂದ್ಯದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿ ಕೇವಲ 54 ಎಸೆತಗಳಲ್ಲಿ 150 ರನ್ಗಳು ಮೂಡಿಬಂತು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್ ಅತೀ ವೇಗವಾಗಿ 150 ರನ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಸ್ಫೋಟಕ ಬ್ಯಾಟಿಂಗ್ನೊಂದಿಗೆ ಯುವ ದಾಂಡಿಗ ಎಲ್ಲರ ಗಮನ ಸೆಳೆದಿದ್ದಾರೆ.