AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸರಣಿಯಿಂದ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಾರ್ದಿಕ್ ಪಾಂಡ್ಯ

Hardik Pandya Comeback: ಹಾರ್ದಿಕ್ ಪಾಂಡ್ಯ ಗಾಯದಿಂದ ಚೇತರಿಸಿಕೊಂಡು ಟೀಂ ಇಂಡಿಯಾಕ್ಕೆ ಮರಳಲು ಸಿದ್ಧರಾಗಿದ್ದಾರೆ. ಏಷ್ಯಾಕಪ್‌ನಲ್ಲಿ ಗಾಯಗೊಂಡಿದ್ದ ಅವರು, ಈಗ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಯ ಮೂಲಕ ತಂಡಕ್ಕೆ ಮರಳುವ ನಿರೀಕ್ಷೆಯಿದೆ. ಅವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ನಷ್ಟ ಎಂದು ಕೋಚ್ ಸೀತಾಂಶು ಕೊಟಕ್ ಹೇಳಿದ್ದಾರೆ. ಹಾರ್ದಿಕ್ ಪುನರಾಗಮನದಿಂದ ತಂಡಕ್ಕೆ ಬಲ ಬರಲಿದೆ.

ಪೃಥ್ವಿಶಂಕರ
|

Updated on: Oct 22, 2025 | 5:32 PM

Share
ಕಳೆದ ಕೆಲವು ವರ್ಷಗಳಿಂದ ಹಾರ್ದಿಕ್ ಪಾಂಡ್ಯ ಸತತ ಗಾಯಗಳಿಂದ ಬಳಲುತ್ತಿದ್ದಾರೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಏಷ್ಯಾಕಪ್ ಸಮಯದಲ್ಲಿ ಗಾಯಗೊಂಡಿದ್ದರು. ಇದರಿಂದಾಗಿ ಅವರು ಪಾಕಿಸ್ತಾನ ವಿರುದ್ಧದ ಫೈನಲ್‌ ಪಂದ್ಯದಲ್ಲಿ ಆಡಿರಲಿಲ್ಲ. ಇದಾದ ಬಳಿಕ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೂ ಪರಿಗಣಿಸಲಾಗಿಲ್ಲ. ಈಗ ಹಾರ್ದಿಕ್ ಪಾಂಡ್ಯ ಫಿಟ್ ಮತ್ತು ಫೈನ್ ಆಗಿದ್ದು, ಶೀಘ್ರದಲ್ಲೇ ಟೀಂ ಇಂಡಿಯಾಕ್ಕೆ  ಮರಳಿದ್ದಾರೆ ಎಂದು ಹೇಳಲಾಗುತ್ತದೆ.

1 / 5
ಆದರೆ ಭಾರತ ತಂಡಕ್ಕೆ ಹಾರ್ದಿಕ್ ಮರಳಬೇಕಾದರೆ, ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ನಾಲ್ಕು ವಾರಗಳನ್ನು ಕಳೆಯಬೇಕಾಗುತ್ತದೆ. ಅದಾದ ನಂತರ, ಟೀಂ ಇಂಡಿಯಾದಲ್ಲಿ ಅವರ ಪುನರಾಗಮನದ ಹಾದಿ ಸ್ಪಷ್ಟವಾಗುತ್ತದೆ. ಹಾರ್ದಿಕ್ ಪಾಂಡ್ಯ ಕಳೆದ ವಾರವಷ್ಟೇ ಸಿಒಇಗೆ ಬಂದಿದ್ದರು. ಆದರೆ ದೀಪಾವಳಿಯಿಂದಾಗಿ ಕೆಲವು ದಿನಗಳ ವಿರಾಮ ತೆಗೆದುಕೊಂಡಿದ್ದರು ಇದೀಗ ಅಕ್ಟೋಬರ್ 22 ರಿಂದ ಹಾರ್ದಿಕ್ ಮತ್ತೆ ತರಬೇತಿಯನ್ನು ಪುನರಾರಂಭಿಸಿದ್ದಾರೆ.

2 / 5
ವಾಸ್ತವವಾಗಿ ದಕ್ಷಿಣ ಆಫ್ರಿಕಾ ತಂಡ ಮುಂದಿನ ತಿಂಗಳು ಭಾರತ ಪ್ರವಾಸ ಕೈಗೊಳ್ಳಲಿದೆ. ಈ ಅವಧಿಯಲ್ಲಿ ಉಭಯ ತಂಡಗಳ ನಡುವೆ ಎರಡು ಟೆಸ್ಟ್ ಪಂದ್ಯಗಳು, ಮೂರು ಏಕದಿನ ಪಂದ್ಯಗಳು ಮತ್ತು ಐದು ಟಿ20 ಪಂದ್ಯಗಳನ್ನು ಆಡಲಿವೆ. ಇದರಲ್ಲಿ ಹಾರ್ದಿಕ್ ಪಾಂಡ್ಯ ನವೆಂಬರ್ 30 ರಿಂದ ಆರಂಭವಾಗಲಿರುವ ಸೀಮಿತ ಓವರ್‌ಗಳ ಸ್ವರೂಪದಲ್ಲಿ ತಂಡಕ್ಕೆ ಮರಳುವ ನಿರೀಕ್ಷೆಯಿದೆ.

3 / 5
ಮೇಲೆ ಹೇಳಿದಂತೆ ಶ್ರೀಲಂಕಾ ವಿರುದ್ಧದ ಏಷ್ಯಾಕಪ್ ಪಂದ್ಯದ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ, ಪಾಕಿಸ್ತಾನ ವಿರುದ್ಧದ ಹೈ ಪ್ರೊಫೈಲ್ ಫೈನಲ್ ಪಂದ್ಯದಿಂದ ಹೊರಗುಳಿದಿದ್ದರು. ಅಂದಿನಿಂದ ಅವರು ಆಟದಿಂದ ಹೊರಗುಳಿದಿದ್ದಾರೆ. ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸಕ್ಕೆ ಅವರು ಲಭ್ಯವಿಲ್ಲ. ಅವರ ಅನುಪಸ್ಥಿತಿಯು ಗಮನಾರ್ಹ ನಷ್ಟ ಎಂದು ಬ್ಯಾಟಿಂಗ್ ಕೋಚ್ ಸೀತಾಂಶು ಕೊಟಕ್ ಹೇಳಿದ್ದಾರೆ.

4 / 5
ಈ ಬಗ್ಗೆ ಮಾತನಾಡಿದ್ದ ಸೀತಾಂಶು ಕೊಟಕ್, ‘ಹಾರ್ದಿಕ್‌ನಂತಹ ಆಟಗಾರ ಇಲ್ಲದಿರುವುದು ತಂಡಕ್ಕೆ ದೊಡ್ಡ ನಷ್ಟ. ಆದರೆ ನೀವು ಸಕಾರಾತ್ಮಕ ಅಂಶವನ್ನು ನೋಡಿದರೆ, ನಿತೀಶ್‌ಗೆ ಕೆಲವು ಪಂದ್ಯಗಳಲ್ಲಿ ಆಡಲು ಅವಕಾಶ ಸಿಕ್ಕಿತು. ನಾವು ಅವರನ್ನು ಪ್ರೋತ್ಸಾಹಿಸಲು ಪ್ರಯತ್ನಿಸುತ್ತಿದ್ದೇವೆ. ಅವರು ಚೆನ್ನಾಗಿ ತಯಾರಿ ನಡೆಸುತ್ತಿದ್ದಾರೆ. ಆದರೆ ಹಾರ್ದಿಕ್‌ನಂತಹ ಆಟಗಾರನ ಕೊರತೆಯಿದೆ ಎಂದಿದ್ದರು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ