- Kannada News Photo gallery Cricket photos Arijit Singh paid his respects to the MS Dhoni in IPL 2023 opening ceremony before start GT vs CSK Match
MS Dhoni: ಎಂಎಸ್ ಧೋನಿ ಕಾಲು ಮುಟ್ಟಿ ನಮಸ್ಕರಿಸಿದ ಅರಿಜಿತ್ ಸಿಂಗ್: ಚೆನ್ನೈ-ಗುಜರಾತ್ ಪಂದ್ಯದ ರೋಚಕ ಫೊಟೋ ಇಲ್ಲಿದೆ
GT vs CSK, IPL 2023: ಸಿಎಸ್ಕೆ ನಾಯಕ ಎಂಎಸ್ ಧೋನಿ ವೇದಿಕೆ ಮೇಲೆ ಬರುತ್ತಿದ್ದಂತೆ ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಎಂಎಸ್ಡಿ ಕಾಲು ಮುಟ್ಟಿ ನಮಸ್ಕರಿಸಿದರು. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
Updated on:Apr 01, 2023 | 7:19 AM

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಶುಕ್ರವಾರ ಸಂಜೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಉದ್ಘಾಟನಾ ಸಮಾರಂಭ ಅಭಿಮಾನಿಗಳನ್ನು ಖುಷಿ ಪಡಿಸಿತು. ಬಳಿಕ ನಡೆದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 5 ವಿಕೆಟ್ಗಳ ರೋಚಕ ಜಯ ಸಾಧಿಸಿತು.

ಮೊದಲ ಪಂದ್ಯ ಆರಂಭಕ್ಕೂ ಮುನ್ನ ನಡೆದ ಉದ್ಘಾಟನಾ ಸಮಾರಂಭದಲ್ಲಿ ನಟಿಯರಾದ ತಮನ್ನಾ ಭಾಟಿಯಾ ಹಾಗೂ ರಶ್ಮಿಕಾ ಮಂದಣ್ಣ ಹೆಜ್ಜೆ ಹಾಕಿದರು. ಜೊತೆಗೆ ಅರಿಜಿತ್ ಸಿಂಗ್ ಗಾಯನಕ್ಕೆ ಫ್ಯಾನ್ಸ್ ಮನಸೋತರು.

ಇದರ ನಡುವೆ ಸಿಎಸ್ಕೆ ನಾಯಕ ಎಂಎಸ್ ಧೋನಿ ವೇದಿಕೆ ಮೇಲೆ ಬರುತ್ತಿದ್ದಂತೆ ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಎಂಎಸ್ಡಿ ಕಾಲು ಮುಟ್ಟಿ ನಮಸ್ಕರಿಸಿದರು. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ಪಂದ್ಯದಲ್ಲಿ ಟಾಸ್ ಸೋತ ಚೆನ್ನೈ ಮೊದಲು ಬ್ಯಾಟಿಂಗ್ ಮಾಡಿತು. ಆರಂಭದಲ್ಲೇ ಡೆವೋನ್ ಕಾನ್ವೆ (1) ವಿಕೆಟ್ ಕಳೆದುಕೊಂಡರೂ ರುತುರಾಜ್ ಗಾಯಕ್ವಾಡ್ ಮತ್ತು ಮೊಯಿನ್ ಅಲಿ (23) ಪವರ್ ಪ್ಲೇ ಅನ್ನು ಚೆನ್ನಾಗಿ ಉಪಯೋಗಿಸಿಕೊಂಡರು. ಆದರೆ, ಬೆನ್ ಸ್ಟೋಕ್ಸ್ (7) ಆಟ ನಡೆಯಲಿಲ್ಲ.

ಅಂಬಟಿ ರಾಯುಡು (12) ಕೂಡ ಬೇಗನೆ ನಿರ್ಗಮಿಸಿದರು. ಇದರ ನಡುವೆ ಗಾಯಕ್ವಾಡ್ ಸ್ಫೋಟಕ ಆಟವಾಡಿ ತಂಡಕ್ಕೆ ಆಧಾರವಾದದರು. 50 ಎಸೆತಗಳಲ್ಲಿ 41ಫೋರ್ ಹಾಗೂ ಬರೋಬ್ಬರಿ 9 ಸಿಕ್ಸರ್ ಸಿಡಿಸಿ 92 ರನ್ ಚಚ್ಚಿದರು.

ಶಿವಂ ದುಬೆ 19 ರನ್ ಗಳಿಸಿದರೆ ಎಂಎಸ್ ಧೋನಿ ಅಜೇಯ 14 ರನ್ ಬಾರಿಸಿದರು. ಚೆನ್ನೈ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತು. ಗುಜರಾತ್ ಪರ ಶಮಿ, ರಶೀದ್ ಖಾನ್ ಮತ್ತು ಅಲ್ಜರಿ ಜೋಸೆಫ್ ತಲಾ 2 ವಿಕೆಟ್ ಪಡೆದರು.

ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಜಿಟಿ ತಂಡ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆಗೆ ವೃದ್ದಿಮಾನ್ ಸಾಹ (25) ವಿಕೆಟ್ ಕಳೆದುಕೊಂಡಿತು. ಸಾಯಿ ಸುದರ್ಶನ್ 22 ಹಾಗೂ ನಾಯಕ ಹಾರ್ದಿಕ್ ಪಾಂಡ್ಯ 8 ರನ್ಗೆ ನಿರ್ಗಮಿಸಿದರು.

ಆದರೆ, ಗಿಲ್ ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ಹತ್ತಿರ ಮಾಡಿದರು. 36 ಎಸೆತಗಳಲ್ಲಿ 6 ಫೋರ್, 3 ಸಿಕ್ಸರ್ನೊಂದಿಗೆ 63 ರನ್ ಗಳಿಸಿದರು.

ಕೊನೆಯಲ್ಲಿ ವಿಜಯ್ ಶಂಕರ್ (27), ರಾಹುಲ್ ತೇವಾಟಿಯ (15*) ಹಾಗೂ ರಶೀದ್ ಖಾನ್ (10*) ಬ್ಯಾಟ್ ಬೀಸಿ ತಂಡಕ್ಕೆ ಗೆಲುವು ತಂದಿಟ್ಟರು. ಜಿಟಿ 19.2 ಓವರ್ನಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಬಾರಿಸಿ ಜಯ 5 ವಿಕೆಟ್ಗಳ ಜಯ ಸಾಧಿಸಿತು. ರಶೀದ್ ಖಾನ್ ಪಂದ್ಯಶ್ರೇಷ್ಠ ಬಾಚಿಕೊಂಡರು.
Published On - 7:19 am, Sat, 1 April 23
