AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದ ಅರ್ಜುನ್ ತೆಂಡೂಲ್ಕರ್

Arjun Tendulkar: ಅರ್ಜುನ್ ತೆಂಡೂಲ್ಕರ್ ಐಪಿಎಲ್ 2026 ರಲ್ಲಿ ಲಕ್ನೋ ಸೂಪರ್‌ಜೈಂಟ್ಸ್‌ ಪರ ಆಡಲು ಅವಕಾಶ ಸಿಕ್ಕಿಲ್ಲ. ಈ ನಡುವೆ ಮುಂಬೈ ಟಿ20 ಲೀಗ್ ಹರಾಜಿಗೆ ₹5 ಲಕ್ಷ ಮೂಲಬೆಲೆಯೊಂದಿಗೆ ಸೇರಿಕೊಂಡಿದ್ದಾರೆ. ಗೋವಾ ಪರ ದೇಶೀಯ ಕ್ರಿಕೆಟ್ ಆಡುತ್ತಿದ್ದರೂ, ಅವರಿಗೆ ಮುಂಬೈ ಟಿ20 ಲೀಗ್‌ ಆಡಲು ವಿಶೇಷ ಅನುಮತಿ ಲಭಿಸಿದೆ. LSG ತಂಡದಲ್ಲಿ ಅವಕಾಶಕ್ಕಾಗಿ ಕಾಯುತ್ತಿರುವ ಅರ್ಜುನ್‌ಗೆ ಇದು ಹೊಸ ವೇದಿಕೆಯಾಗಿದೆ.

ಪೃಥ್ವಿಶಂಕರ
|

Updated on: Apr 29, 2026 | 4:46 PM

Share
ಐಪಿಎಲ್ 2026 ರಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡದ ಭಾಗವಾಗಿರುವ ಅರ್ಜುನ್ ತೆಂಡೂಲ್ಕರ್​ಗೆ ಇದುವರೆಗೆ ತಂಡದ ಪರ ಕಣಕ್ಕಿಳಿಯಲು ಸಾಧ್ಯವಾಗಿಲ್ಲ. ಲಕ್ನೋ ತಂಡ ಇದುವರೆಗೆ ಕಳಪೆ ಪ್ರದರ್ಶನ ನೀಡಿರುವ ಕಾರಣ ಮುಂದಿನ ದಿನಗಳಲ್ಲಿ ಅರ್ಜುನ್​ಗೆ ತಂಡದಲ್ಲಿ ಆಡುವ ಅವಕಾಶ ಸಿಗುವ ಸಾಧ್ಯತೆಗಳಿವೆ. ಇದರ ನಡುವೆ ಅರ್ಜುನ್ ತೆಂಡೂಲ್ಕರ್ ಮತ್ತೊಂದು ಲೀಗ್​ನಲ್ಲಿ ಆಡುವ ಸಲುವಾಗಿ ಅರ್ಜುನ್ ತೆಂಡೂಲ್ಕರ್ ಹರಾಜಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

1 / 5
ವಾಸ್ತವವಾಗಿ ಮುಂಬೈ ಟಿ20 ಲೀಗ್​ಗಾಗಿ ಮೇ 2 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಅರ್ಜುನ್ ಕೂಡ ಮೂಲ ಬೆಲೆ 5 ಲಕ್ಷ ರೂಗಳೊಂದಿಗೆ ಈ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಾಸ್ತವವಾಗಿ ಅರ್ಜುನ್ ತೆಂಡೂಲ್ಕರ್ ಗೋವಾ ಪರ ದೇಶೀಯ ಕ್ರಿಕೆಟ್ ಆಡುತ್ತಾರೆ, ಆದರೆ ಇದರ ಹೊರತಾಗಿಯೂ, ಅವರಿಗೆ ಮುಂಬೈ ಟಿ20 ಲೀಗ್‌ನಲ್ಲಿ ಆಡಲು ಅನುಮತಿ ನೀಡಲಾಗಿದೆ. ಅರ್ಜುನ್ ಜೊತೆಗೆ, ಪಾಂಡಿಚೇರಿ ಆಟಗಾರ ಸಿದ್ಧಾಂತ್ ಅಧತರಾವ್ ಅವರಿಗೆ ಮುಂಬೈ ಟಿ20 ಲೀಗ್‌ನಲ್ಲಿ ಆಡಲು ವಿಶೇಷ ಅನುಮತಿ ನೀಡಲಾಗಿದೆ.

2 / 5
ಅರ್ಜುನ್ ತೆಂಡೂಲ್ಕರ್ ಪ್ರಸ್ತುತ ಗೋವಾ ರಣಜಿ ತಂಡಕ್ಕಾಗಿ ಆಡುತ್ತಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​ನಿಯಮಗಳ ಪ್ರಕಾರ, ತಂಡಕ್ಕೆ ಮರಳುವ ಯಾವುದೇ ಸ್ಥಳೀಯ ಮುಂಬೈ ಆಟಗಾರ ಒಂದು ವರ್ಷದ ಕೂಲಿಂಗ್-ಆಫ್ ಅವಧಿಯನ್ನು ಪೂರೈಸಬೇಕು, ಆದರೆ ಎಂಸಿಎ ಕಾರ್ಯದರ್ಶಿ ಉನ್ಮೇಶ್ ಖಾನ್ವಿಲ್ಕರ್ ಅವರು ಅರ್ಜುನ್ ತೆಂಡೂಲ್ಕರ್ ಅವರಿಗೆ ಈ ನಿಯಮ ಅನ್ವಯಿಸುವುದಿಲ್ಲ ಏಕೆಂದರೆ ಅವರು ಯಾವುದೇ ಗೋವಾ ಟಿ20 ಲೀಗ್‌ನಲ್ಲಿ ಭಾಗವಹಿಸಿಲ್ಲ. ಹೀಗಾಗಿ ಬಿಸಿಸಿಐ ನಿಯಮಗಳ ಪ್ರಕಾರ, ಅರ್ಜುನ್ ಮತ್ತು ಸಿದ್ಧಾಂತ್ ಅಧಾತ್ರವ್ ಇಬ್ಬರೂ ಟಿ20 ಮುಂಬೈ ಲೀಗ್‌ನಲ್ಲಿ ಆಡಬಹುದು ಎಂದಿದ್ದಾರೆ.

3 / 5
ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್ ಮತ್ತು ಶಿವಂ ದುಬೆ ಕೂಡ ಟಿ20 ಮುಂಬೈ ಲೀಗ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂವರು ಆಟಗಾರರನ್ನು ಆಯಾ ತಂಡಗಳು ಉಳಿಸಿಕೊಂಡಿವೆ. ಯಶಸ್ವಿ ಜೈಸ್ವಾಲ್ ಅವರನ್ನು ಬಾಂದ್ರಾ ಬ್ಲಾಸ್ಟರ್ಸ್ ಕೂಡ ಉಳಿಸಿಕೊಂಡಿದೆ, ಆದರೆ ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಟೆಸ್ಟ್ ಪಂದ್ಯದಿಂದಾಗಿ ಅವರು ಲೀಗ್‌ನಲ್ಲಿ ಭಾಗವಹಿಸುವುದು ಅಸಂಭವವಾಗಿದೆ.

4 / 5
ಅರ್ಜುನ್ ತೆಂಡೂಲ್ಕರ್ ಬಗ್ಗೆ ಹೇಳುವುದಾದರೆ, ಐಪಿಎಲ್ 2026 ಕ್ಕೂ ಮೊದಲು ಅವರನ್ನು ಲಕ್ನೋ ಸೂಪರ್‌ಜೈಂಟ್ಸ್ ತಂಡ ಟ್ರೆಡಿಂಗ್ ಮೂಲಕ 30 ಲಕ್ಷ ರೂ. ಮೂಲ ಬೆಲೆಗೆ ಖರೀದಿ ಮಾಡಿದೆ. ಆದಾಗ್ಯೂ, ಅವರಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ಆದಾಗ್ಯೂ ಲಕ್ನೋ ಸೂಪರ್‌ಜೈಂಟ್ಸ್ ಮ್ಯಾನೇಜ್‌ಮೆಂಟ್ ಅವರನ್ನು ಯಾವಾಗ ಕಣಕ್ಕಿಳಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?

ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು

ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ