- Kannada News Photo gallery Cricket photos Arshdeep Singh: 100 T20I Wickets! Asia Cup Performance & Career Highlights
Asia cup 2025: ಟಿ20 ಕ್ರಿಕೆಟ್ನಲ್ಲಿ ಐತಿಹಾಸಿಕ ಶತಕ ಪೂರೈಸಿದ ಅರ್ಷದೀಪ್ ಸಿಂಗ್
Arshdeep Singh's Century of Wickets: ಏಷ್ಯಾಕಪ್ ಲೀಗ್ ಹಂತದಲ್ಲಿ ಭಾರತದ ಗೆಲುವಿನೊಂದಿಗೆ, ಅರ್ಶ್ದೀಪ್ ಸಿಂಗ್ ಅವರು ತಮ್ಮ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ 100 ವಿಕೆಟ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಇದು ಕಡಿಮೆ ಪಂದ್ಯಗಳಲ್ಲಿ ಸಾಧಿಸಿದ ಅಪರೂಪದ ಸಾಧನೆ. ಒಮಾನ್ ವಿರುದ್ಧದ ಪಂದ್ಯದಲ್ಲಿ ಈ ಮೈಲುಗಲ್ಲನ್ನು ತಲುಪಿದ ಅವರು, ಭಾರತದ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರಾಗಿದ್ದಾರೆ.
Updated on: Sep 20, 2025 | 3:45 PM

ಏಷ್ಯಾಕಪ್ನ ಲೀಗ್ ಹಂತ ಮುಕ್ತಾಯಗೊಂಡಿದೆ. ಭಾರತ ಹಾಗೂ ಒಮಾನ್ ನಡುವೆ ನಡೆದ ಲೀಗ್ ಸುತ್ತಿನ ಕೊನೆಯ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಟೀಂ ಇಂಡಿಯಾ ಗೆಲುವು ಸಾಧಿಸಿತು. ಆದಾಗ್ಯೂ ಕ್ರಿಕೆಟ್ ಶಿಶು ಒಮಾನ್, ಟೀಂ ಇಂಡಿಯಾದಂತಹ ಬಲಿಷ್ಠ ತಂಡದೆದುರು ಗಮನಾರ್ಹ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವವಾಯಿತು.

ಈ ಪಂದ್ಯ ಟೀಂ ಇಂಡಿಯಾಕ್ಕೆ ಕೇವಲ ಔಪಚಾರಿಕ ಪಂದ್ಯವಾಗಿದ್ದರಿಂದ ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿತ್ತು. ಅದರಂತೆ ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದರು. ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸಿದ್ದ ಅರ್ಷದೀಪ್ ಈ ಪಂದ್ಯದಲ್ಲಿ ವಿಶೇಷ ಶತಕವನ್ನು ಪೂರೈಸಿದರು.

ಏಷ್ಯಾಕಪ್‌ನಲ್ಲಿ ಕೊನೆಗೂ ಆಡುವ ಅವಕಾಶ ಪಡೆದಿದ್ದ ಅರ್ಷದೀಪ್ ಸಿಂಗ್ ಒಮಾನ್ ವಿರುದ್ಧದ ಪಂದ್ಯದಲ್ಲಿ ತಮ್ಮ ಮೊದಲ ವಿಕೆಟ್ ಪಡೆದ ತಕ್ಷಣ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಈ ಸ್ವರೂಪದಲ್ಲಿ 100 ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2022 ರಲ್ಲಿ ಟೀಂ ಇಂಡಿಯಾ ಪರ ಟಿ20ಗೆ ಪಾದಾರ್ಪಣೆ ಮಾಡಿದ ಅರ್ಷದೀಪ್, ಮೂರು ವರ್ಷಗಳಲ್ಲಿ ಈ ವಿಶೇಷ ಸಾಧನೆ ಮಾಡಿದ್ದಾರೆ. ಇದು ಅವರ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ ಕೇವಲ 64 ನೇ ಪಂದ್ಯವಾಗಿದ್ದು, ಕಡಿಮೆ ಪಂದ್ಯಗಳಲ್ಲಿ 100 ವಿಕೆಟ್‌ಗಳನ್ನು ಪೂರೈಸಿದ ಸಾಧನೆ ಮಾಡಿದ್ದಾರೆ.

ಅರ್ಷದೀಪ್ ತಮ್ಮ ವೃತ್ತಿಜೀವನದಲ್ಲಿ ಎರಡು ಬಾರಿ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದಾರೆ. ಅರ್ಷದೀಪ್ ನಂತರ, ಭಾರತದ ಪರ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್, 80 ಪಂದ್ಯಗಳಲ್ಲಿ 96 ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾರ್ದಿಕ್ ಪಾಂಡ್ಯ 114 ಪಂದ್ಯಗಳಲ್ಲಿ 96 ವಿಕೆಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಜುಲೈ 2022 ರಲ್ಲಿ ಭಾರತ ಪರ ಟಿ20ಐ ಚೊಚ್ಚಲ ಪಂದ್ಯವನ್ನಾಡಿದ್ದ ಅರ್ಷದೀಪ್, ಅಂದಿನಿಂದ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದು ಅವರ ಎರಡನೇ ಏಷ್ಯಾ ಕಪ್. 2022 ರಲ್ಲಿ ಅವರು ಟೂರ್ನಮೆಂಟ್‌ನಲ್ಲಿಯೂ ಭಾಗವಹಿಸಿದ್ದರು. ಆಗ, ಟೂರ್ನಮೆಂಟ್ ಅನ್ನು ಯುಎಇಯಲ್ಲಿ ಮತ್ತು ಟಿ20 ಸ್ವರೂಪದಲ್ಲಿ ನಡೆಸಲಾಗುತ್ತಿತ್ತು.

ನಂತರ ಅದೇ ವರ್ಷ ಅರ್ಷದೀಪ್ ಟಿ20 ವಿಶ್ವಕಪ್‌ನಲ್ಲಿ ಆಡಿ ಆರು ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು, 10 ವಿಕೆಟ್‌ಗಳನ್ನು ಪಡೆದಿದ್ದರು. ಇದಲ್ಲದೆ, ಅವರು 2024 ರ ಟಿ20 ವಿಶ್ವಕಪ್‌ನಲ್ಲಿ ಎಂಟು ಇನ್ನಿಂಗ್ಸ್‌ಗಳಲ್ಲಿ 17 ವಿಕೆಟ್‌ಗಳನ್ನು ಪಡೆಯುವ ಮೂಲಕ ಭಾರತದ ಅತ್ಯಂತ ಯಶಸ್ವಿ ಬೌಲರ್ ಆಗಿದ್ದರು.
