ಬುಮ್ರಾ, ಭುವಿ ಹಿಂದಿಕ್ಕಿದ ಅರ್ಷದೀಪ್! ಟಿ20ಯಲ್ಲಿ ಐತಿಹಾಸಿಕ ಸಾಧನೆ

Updated on: Oct 30, 2026 | 3:35 PM

ಅರ್ಷದೀಪ್ ಸಿಂಗ್ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 150 ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಆಗಿ ಇತಿಹಾಸ ನಿರ್ಮಿಸಿದ್ದಾರೆ. 103 ಪಂದ್ಯಗಳಲ್ಲಿ ಈ ಮೈಲಿಗಲ್ಲು ತಲುಪಿದ ಅವರು, ವೇಗವಾಗಿ 150 ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿದ್ದಾರೆ. ಒಂದು ಕ್ಯಾಲೆಂಡರ್ ವರ್ಷದಲ್ಲಿ ಗರಿಷ್ಠ ವಿಕೆಟ್‌ಗಳ ದಾಖಲೆಯನ್ನೂ ಅವರು ಬರೆದಿದ್ದಾರೆ, ಇದು ಭಾರತೀಯ ಕ್ರಿಕೆಟ್‌ಗೆ ಹೆಮ್ಮೆಯ ಕ್ಷಣ.

1 / 5
ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 150 ವಿಕೆಟ್‌ಗಳ ಮೈಲಿಗಲ್ಲು ತಲುಪಿದ ಭಾರತದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಪಾತ್ರರಾಗಿದ್ದಾರೆ. ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಅವರನ್ನು ಔಟ್ ಮಾಡುವ ಮೂಲಕ ಅರ್ಷದೀಪ್ ಈ ಸಾಧನೆ ಮಾಡಿದರು(PC-PTI).

ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 150 ವಿಕೆಟ್‌ಗಳ ಮೈಲಿಗಲ್ಲು ತಲುಪಿದ ಭಾರತದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಪಾತ್ರರಾಗಿದ್ದಾರೆ. ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಅವರನ್ನು ಔಟ್ ಮಾಡುವ ಮೂಲಕ ಅರ್ಷದೀಪ್ ಈ ಸಾಧನೆ ಮಾಡಿದರು(PC-PTI).

2 / 5

ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಇದುವರೆಗೆ 103 ಪಂದ್ಯಗಳ 99 ಇನಿಂಗ್ಸ್‌ಗಳಲ್ಲಿ 150 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 20.62ರ ಸರಾಸರಿ ಹಾಗೂ 8.65ರ ಎಕಾನಮಿ ರೇಟ್ ಹೊಂದಿರುವ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ 51 ರನ್‌ಗಳಿಗೆ 5 ವಿಕೆಟ್ ಆಗಿದೆ(PC-PTI).

3 / 5

ಈ ಸಾಧನೆಯೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅರ್ಷದೀಪ್ ಒಂಬತ್ತನೇ ಸ್ಥಾನಕ್ಕೇರಿದ್ದಾರೆ. ಅಲ್ಲದೆ, ಈ ಮಾದರಿಯಲ್ಲಿ 150 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಮೂರನೇ ವೇಗದ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ನ್ಯೂಜಿಲೆಂಡ್‌ನ ಟಿಮ್ ಸೌಥಿ ಮತ್ತು ಬಾಂಗ್ಲಾದೇಶದ ಮುಸ್ತಫಿಜುರ್ ರೆಹಮಾನ್ ಈ ಸಾಧನೆ ಮಾಡಿದ ಉಳಿದ ಇಬ್ಬರು ವೇಗದ ಬೌಲರ್‌ಗಳಾಗಿದ್ದಾರೆ(PC-PTI).

4 / 5

ಇನ್ನು ಒಂದು ಕ್ಯಾಲೆಂಡರ್ ವರ್ಷದಲ್ಲಿ ಪೂರ್ಣ ಸದಸ್ಯತ್ವ ಹೊಂದಿರುವ ದೇಶದ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೊಸ ದಾಖಲೆಯನ್ನೂ ಅರ್ಷದೀಪ್ ಬರೆದಿದ್ದಾರೆ. 2026ರಲ್ಲಿ ಅವರು ಒಟ್ಟು 40 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಮೂಲಕ 2022ರಲ್ಲಿ 39 ವಿಕೆಟ್ ಪಡೆದಿದ್ದ ಐರ್ಲೆಂಡ್‌ನ ಜೋಶ್ ಲಿಟಲ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ(PC-PTI).

5 / 5

ಇಷ್ಟೇ ಅಲ್ಲದೆ, ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 150 ವಿಕೆಟ್‌ಗಳ ಸಾಧನೆ ಮಾಡಿದ ಬೌಲರ್‌ಗಳ ಪಟ್ಟಿಯಲ್ಲೂ ಅರ್ಷದೀಪ್ ಮೂರನೇ ಸ್ಥಾನದಲ್ಲಿದ್ದಾರೆ. ಈ ಮೈಲಿಗಲ್ಲು ತಲುಪಲು ಅವರು ಕೇವಲ 2,143 ಎಸೆತಗಳನ್ನು ಬಳಸಿದ್ದಾರೆ. ಶ್ರೀಲಂಕಾದ ವನಿಂದು ಹಸರಂಗ 2,035 ಎಸೆತಗಳಲ್ಲಿ ಹಾಗೂ ಅಫ್ಘಾನಿಸ್ತಾನದ ರಶೀದ್ ಖಾನ್ 2,098 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು(PC-PTI).

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us