Arshdeep Singh IPL Auction 2025: ಪಂಜಾಬ್​ನಲ್ಲೇ ಉಳಿದ ಅರ್ಷದೀಪ್; ಪಡೆದ ಹಣವೆಷ್ಟು?

Arshdeep Singh Auction Price: ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಅರ್ಷದೀಪ್ ಸಿಂಗ್ ಅವರನ್ನು ಖರೀದಿಸಲು ಬಯಸಿದ್ದವು. ಆದರೆ ಅಂತಿಮವಾಗಿ ಪಂಜಾಬ್ ಕಿಂಗ್ಸ್ ಅರ್ಷದೀಪ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಅರ್ಷದೀಪ್ ಸಿಂಗ್ ಪ್ರಸ್ತುತ ಐಪಿಎಲ್ ಬಿಡ್‌ನಲ್ಲಿ ಅತ್ಯಂತ ದುಬಾರಿ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Nov 24, 2024 | 4:13 PM

ಐಪಿಎಲ್ 2025 ರ ಮೆಗಾ ಹರಾಜು ಆರಂಭವಾಗಿದೆ. ಮಾರ್ಕ್ಯೂ ಆಟಗಾರರ ಮೊದಲ ಸೆಟ್​ನಲ್ಲಿ ಮೊದಲ ಆಟಗಾರನಾಗಿ ಹರಾಜಿಗೆ ಬಂದಿದ್ದ ಟೀಂ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಮತ್ತೆ ಪಂಜಾಬ್ ತಂಡವನ್ನೇ ಸೇರಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

1 / 5
ಅರ್ಷದೀಪ್​ಗಾಗಿ ಹಲವು ತಂಡಗಳ ನಡುವೆ ಭಾರಿ ಪೈಪೋಟಿ ನಡೆಯಿತು. ಮೊದಲು ಸಿಎಸ್​ಕೆ ಖರೀದಿಗೆ ಮುಂದಾಯಿತು. ಆ ಬಳಿಕ ಗುಜರಾತ್ ಟೈಟಾನ್ಸ್ ಕೂಡ ಅಖಾಡಕ್ಕಿಳಿಯಿತು. ಆರ್​ಸಿಬಿ ಕೂಡ ಅರ್ಷದೀಪ್​ಗೆ 10 ಕೋಟಿ ರೂ. ನೀಡಲು ಮುಂದಾಯಿತು.

2 / 5
ಆ ನಂತರ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಪೈಪೋಟಿ ನಡೆಯಿತು. ಇಲ್ಲಿ ಅಖಾಡಕ್ಕಿಳಿದ ಸನ್​ರೈಸರ್ಸ್​ ಹೈದರಾಬಾದ್ 15.75 ಕೋಟಿ ರೂ. ಬಿಡ್ ಮಾಡಿತು. ಅಂತಿಮವಾಗಿ ಹೈದರಾಬಾದ್ 18 ಕೋಟಿ ನೀಡಲು ಮುಂದಾಯಿತು. ಆದರೆ ಇಲ್ಲಿ ಪಂಜಾಬ್ ಕಿಂಗ್ಸ್​ ಆರ್​ಟಿಎಮ್ ಆಯ್ಕೆ ಇದ್ದ ಕಾರಣ ಅರ್ಷದೀಪ್​ರನ್ನು 18 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಂಡಿತು.

3 / 5
ಪ್ರಸ್ತುತ ಟೀಂ ಇಂಡಿಯಾದ ಟಿ20 ಬ್ರಿಗೇಡ್‌ನ ಪ್ರಮುಖ ಆಟಗಾರನಾಗಿರುವ ಅರ್ಷದೀಪ್ ಟಿ20 ಕ್ರಿಕೆಟ್‌ನಲ್ಲಿ ಭರ್ಜರಿ ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆಡಿರುವ 60 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 95 ವಿಕೆಟ್ ಪಡೆದಿದ್ದಾರೆ. ಅರ್ಷದೀಪ್ ಸಿಂಗ್ ಅವರ ವಿಶೇಷವೆಂದರೆ ಅವರು ಪವರ್‌ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ವಿಕೆಟ್ ಪಡೆಯುವ ಶಕ್ತಿ ಹೊಂದಿದ್ದಾರೆ.

4 / 5
2019 ರಲ್ಲಿ ಪಂಜಾಬ್ ಕಿಂಗ್ಸ್‌ಗೆ ಪಾದಾರ್ಪಣೆ ಮಾಡಿದ ಅರ್ಷದೀಪ್ ಸಿಂಗ್, 2024 ರವರೆಗೆ ಪಂಜಾಬ್‌ ಪರ 65 ಪಂದ್ಯಗಳನ್ನು ಆಡಿದ್ದು, 76 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ವೇಳೆ ಅವರು ಒಂದು ಪಂದ್ಯದಲ್ಲಿ ಐದು ಮತ್ತು ಎರಡು ಪಂದ್ಯಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 5
Follow us
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್

ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು

ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ

ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ

ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ

ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ

‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?

‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ

ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್

ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!