ಶ್ರೀನಾಥ್-ಶಮಿ ಸಾಲಿಗೆ ಸೇರಿದ ಅರ್ಷದೀಪ್; ಕಿವೀಸ್ ನೆಲದಲ್ಲಿ ಭಾರತದ ವೇಗಿಯ ಹೊಸ ಸಾಧನೆ

Updated on: Nov 04, 2026 | 9:17 PM

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 4 ವಿಕೆಟ್ ಪಡೆದು ಟೀಂ ಇಂಡಿಯಾ ಗೆಲುವಿಗೆ ನೆರವಾದರು. ಅವರು ನ್ಯೂಜಿಲೆಂಡ್ ನೆಲದಲ್ಲಿ 4 ವಿಕೆಟ್‌ಗಳ ಗೊಂಚಲು ಪಡೆದ ಭಾರತದ ಮೂರನೇ ವೇಗಿಯಾಗಿ ಜಾವಗಲ್ ಶ್ರೀನಾಥ್ ಮತ್ತು ಮೊಹಮ್ಮದ್ ಶಮಿ ಅವರಂತಹ ದಿಗ್ಗಜರ ಪಟ್ಟಿಗೆ ಸೇರಿದರು. ಈ ಸಾಧನೆಯು ಭಾರತೀಯ ಬೌಲಿಂಗ್ ಇತಿಹಾಸದಲ್ಲಿ ಅವರ ಸ್ಥಾನವನ್ನು ಭದ್ರಪಡಿಸಿದೆ.

1 / 5
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸುಲಭ ಗೆಲುವು ದಾಖಲಿಸಿತು. ತಂಡದ ಈ ಗೆಲುವಿನಲ್ಲಿ ವೇಗಿ ಅರ್ಷದೀಪ್‌ ಸಿಂಗ್ ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ಅವರು ಪ್ರಮುಖ 4 ವಿಕೆಟ್ ಉರುಳಿಸಿದರು. ಈ ಮೂಲಕ ನ್ಯೂಜಿಲೆಂಡ್ ನೆಲದಲ್ಲಿ ನಾಲ್ಕು ವಿಕೆಟ್‌ಗಳ ಗೊಂಚಲು ಪಡೆದ ಭಾರತದ ಮೂರನೇ ವೇಗಿ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಸಿಂಗ್ ಪಾತ್ರರಾದರು(PC-PTI).

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸುಲಭ ಗೆಲುವು ದಾಖಲಿಸಿತು. ತಂಡದ ಈ ಗೆಲುವಿನಲ್ಲಿ ವೇಗಿ ಅರ್ಷದೀಪ್‌ ಸಿಂಗ್ ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ಅವರು ಪ್ರಮುಖ 4 ವಿಕೆಟ್ ಉರುಳಿಸಿದರು. ಈ ಮೂಲಕ ನ್ಯೂಜಿಲೆಂಡ್ ನೆಲದಲ್ಲಿ ನಾಲ್ಕು ವಿಕೆಟ್‌ಗಳ ಗೊಂಚಲು ಪಡೆದ ಭಾರತದ ಮೂರನೇ ವೇಗಿ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಸಿಂಗ್ ಪಾತ್ರರಾದರು(PC-PTI).

2 / 5

ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಅರ್ಷದೀಪ್ ತಮ್ಮ ಕೋಟಾದ 10 ಓವರ್‌ಗಳಲ್ಲಿ 70 ರನ್ ನೀಡಿ 4 ವಿಕೆಟ್ ಪಡೆದರು. ಈ ಮೂಲಕ ಭಾರತದ ಮಾಜಿ ವೇಗಿಗಳಾದ ಜಾವಗಲ್ ಶ್ರೀನಾಥ್ ಮತ್ತು ಮೊಹಮ್ಮದ್ ಶಮಿ ಅವರ ವಿಶೇಷ ಪಟ್ಟಿಗೆ ಸೇರ್ಪಡೆಯಾದರು(PC-PTI).

3 / 5

ನ್ಯೂಜಿಲೆಂಡ್‌ನಲ್ಲಿ ಭಾರತೀಯ ವೇಗಿಗಳ ಅತ್ಯುತ್ತಮ ಬೌಲಿಂಗ್ ಪ್ರದರ್ಶನಗಳ ಪಟ್ಟಿಯಲ್ಲಿ ಅರ್ಷದೀಪ್ ಅವರ ಈ ಸಾಧನೆ ನಾಲ್ಕನೇ ಸ್ಥಾನದಲ್ಲಿದೆ. 2003ರಲ್ಲಿ ಆಕ್ಲೆಂಡ್‌ನಲ್ಲಿ 23 ರನ್ ನೀಡಿ 4 ವಿಕೆಟ್ ಹಾಗೂ 1995ರಲ್ಲಿ ನೇಪಿಯರ್‌ನಲ್ಲಿ 52 ರನ್ ನೀಡಿ 4 ವಿಕೆಟ್ ಪಡೆದಿದ್ದ ಜಾವಗಲ್ ಶ್ರೀನಾಥ್ ಮೊದಲ ಎರಡು ಸ್ಥಾನಗಳಲ್ಲಿದ್ದಾರೆ. ಇನ್ನು 2014ರಲ್ಲಿ ನೇಪಿಯರ್‌ನಲ್ಲಿ 55 ರನ್ ನೀಡಿ 4 ವಿಕೆಟ್ ಪಡೆದಿದ್ದ ಮೊಹಮ್ಮದ್ ಶಮಿ ಮೂರನೇ ಸ್ಥಾನದಲ್ಲಿದ್ದಾರೆ(PC-PTI).

4 / 5

ಇನ್ನೊಂದು ವಿಕೆಟ್ ಪಡೆದಿದ್ದರೆ ಅರ್ಷದೀಪ್ ಸಿಂಗ್ ನ್ಯೂಜಿಲೆಂಡ್ ನೆಲದಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆದ ಭಾರತದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದರು. 1994ರಲ್ಲಿ ವೆಲ್ಲಿಂಗ್ಟನ್‌ನಲ್ಲಿ 33 ರನ್ ನೀಡಿ 5 ವಿಕೆಟ್ ಪಡೆದಿದ್ದ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರರಾಗಿದ್ದಾರೆ(PC-PTI).

5 / 5

ಈ ವರ್ಷ ಆಡಿರುವ ಐದು ಏಕದಿನ ಪಂದ್ಯಗಳಲ್ಲಿ ಅರ್ಷದೀಪ್ 23.08ರ ಸರಾಸರಿಯಲ್ಲಿ ಒಟ್ಟು 12 ವಿಕೆಟ್ ಪಡೆದಿದ್ದಾರೆ. 6.08ರ ಎಕಾನಮಿ ದರ ಹೊಂದಿರುವ ಅವರ ಈ ವರ್ಷದ ಅತ್ಯುತ್ತಮ ಬೌಲಿಂಗ್ ಪ್ರದರ್ಶನ 70 ರನ್ ನೀಡಿ 6 ವಿಕೆಟ್ ಪಡೆದಿರುವುದಾಗಿದೆ(PC-PTI).

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us