AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುವನೇಶ್ವರ್ ದಾಖಲೆ ಮುರಿದ ಅರ್ಷದೀಪ್ ಸಿಂಗ್! ಇನ್ನೆರಡು ವಿಕೆಟ್ ಪಡೆದರೆ ವಿಶ್ವದಾಖಲೆ

ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 2026ರಲ್ಲಿ 38 ವಿಕೆಟ್‌ಗಳನ್ನು ಪಡೆದು ಭುವನೇಶ್ವರ್ ಕುಮಾರ್ ಅವರ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಟಿ20ಐ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿದ್ದಾರೆ. ಅವರು ಈಗ ಐರ್ಲೆಂಡ್‌ನ ಜೋಶುವಾ ಲಿಟಲ್ ಅವರ ವಿಶ್ವದಾಖಲೆಗೆ ಬಹಳ ಹತ್ತಿರದಲ್ಲಿದ್ದು, ಇತಿಹಾಸ ನಿರ್ಮಿಸುವ ಸನಿಹದಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Oct 24, 2026 | 8:55 PM

Share
ನ್ಯೂಜಿಲೆಂಡ್ ವಿರುದ್ಧ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ಪಡೆ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್ ಗಳಿಸಿತು. ಈ ಪಂದ್ಯದಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಅರ್ಷದೀಪ್ ಸಿಂಗ್ ಇಬ್ಬರು ಕಿವೀಸ್ ಬ್ಯಾಟರ್‌ಗಳನ್ನು ಔಟ್ ಮಾಡುವ ಮೂಲಕ ಭುವನೇಶ್ವರ್ ಕುಮಾರ್ ಅವರ ನಾಲ್ಕು ವರ್ಷಗಳ ಹಳೆಯ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ(PC-PTI).

1 / 5
ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 4 ಓವರ್‌ಗಳಲ್ಲಿ 33 ರನ್ ನೀಡಿ ಟಿಮ್ ಸೀಫರ್ಟ್ ಮತ್ತು ಗ್ಲೆನ್ ಫಿಲಿಪ್ಸ್ ಅವರ ವಿಕೆಟ್ ಪಡೆದರು. ಈ ಎರಡು ವಿಕೆಟ್‌ಗಳೊಂದಿಗೆ ಅರ್ಷದೀಪ್ ಸಿಂಗ್, ಒಂದು ಕ್ಯಾಲೆಂಡರ್ ವರ್ಷದಲ್ಲಿ ಭಾರತ ಪರ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ(PC-PTI).

2 / 5
ಇದಕ್ಕೂ ಮೊದಲು ಈ ದಾಖಲೆ ಭುವನೇಶ್ವರ್ ಕುಮಾರ್ ಅವರ ಹೆಸರಿನಲ್ಲಿತ್ತು. ಅವರು 2022ರಲ್ಲಿ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಒಟ್ಟು 37 ವಿಕೆಟ್ ಪಡೆದಿದ್ದರು. ಇದೀಗ ಅರ್ಷದೀಪ್ ಸಿಂಗ್ 2026ರಲ್ಲಿ 38 ವಿಕೆಟ್ ಪಡೆಯುವ ಮೂಲಕ ಭುವನೇಶ್ವರ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಅಷ್ಟೇ ಅಲ್ಲದೆ, ಅರ್ಷದೀಪ್ ಸಿಂಗ್ 2024ರಲ್ಲೂ 36 ವಿಕೆಟ್ ಪಡೆದು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ(PC-PTI).

3 / 5
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪೂರ್ಣ ಸದಸ್ಯತ್ವ ಹೊಂದಿರುವ ತಂಡಗಳ ಪರ ಒಂದೇ ವರ್ಷದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಐರ್ಲೆಂಡ್‌ನ ಜೋಶುವಾ ಲಿಟಲ್ ಹೆಸರಿನಲ್ಲಿದೆ. ಅವರು 2022ರಲ್ಲಿ ಒಟ್ಟು 39 ವಿಕೆಟ್‌ಗಳನ್ನು ಕಬಳಿಸಿದ್ದರು(PC-ICC).

4 / 5
ಇದೀಗ ಅರ್ಷದೀಪ್ ಸಿಂಗ್ 2026ರಲ್ಲಿ 38 ವಿಕೆಟ್ ಪಡೆದು ಈ ಪಟ್ಟಿಯಲ್ಲಿ ಜೋಶುವಾ ಲಿಟಲ್‌ಗೆ ಸಮೀಪದಲ್ಲಿದ್ದಾರೆ. ಅರ್ಷದೀಪ್ ಇನ್ನೆರಡು ವಿಕೆಟ್‌ಗಳನ್ನು ಪಡೆದರೆ ಲಿಟಲ್ ದಾಖಲೆಯನ್ನು ಹಿಂದಿಕ್ಕಿ ವಿಶ್ವದಾಖಲೆ ನಿರ್ಮಿಸಲಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಅರ್ಷದೀಪ್ ಪ್ರದರ್ಶನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ

ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ

ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ

ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ

ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ

ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ

2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್

ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್