Ashes 2023: ಆ್ಯಶಸ್​ನಲ್ಲಿ ದಾಖಲೆ ಬರೆದ ಬೆನ್ ಸ್ಟೋಕ್ಸ್; ದಿಗ್ಗಜರ ಸಾಲಿಗೆ ಇಂಗ್ಲೆಂಡ್ ನಾಯಕ..!

Ben Stokes: ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್, ಪ್ರಸ್ತುತ ನಡೆಯುತ್ತಿರುವ ಆ್ಯಶಸ್ ಟೆಸ್ಟ್ ಸರಣಿಯ 3ನೇ ಟೆಸ್ಟ್ ಪಂದ್ಯದಲ್ಲಿ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.

ಪೃಥ್ವಿಶಂಕರ
|

Updated on: Jul 08, 2023 | 8:07 AM

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್, ಪ್ರಸ್ತುತ ನಡೆಯುತ್ತಿರುವ ಆ್ಯಶಸ್ ಟೆಸ್ಟ್ ಸರಣಿಯ 3ನೇ ಟೆಸ್ಟ್ ಪಂದ್ಯದಲ್ಲಿ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಕ್ರಿಕೆಟ್​ನ ದೀರ್ಘ ಸ್ವರೂಪದಲ್ಲಿ ಈ ಸಾಧನೆ ಮಾಡಿದ ಮೂರನೇ ಆಟಗಾರ ಎಂಬ ಖ್ಯಾತಿಗೆ ಸ್ಟೋಕ್ಸ್ ಪಾತ್ರರಾಗಿದ್ದಾರೆ.

1 / 7
ಆಸ್ಟ್ರೇಲಿಯಾ ವಿರುದ್ಧದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಕೇವಲ 68 ರನ್​ಗಳಿಗೆ 4 ವಿಕೆಟ್​ ಕಳೆದುಕೊಂಡು ಇಂಗ್ಲೆಂಡ್ ತಂಡ ಸಂಕಷ್ಟದಲ್ಲಿದ್ದಾಗ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದ ಸ್ಟೋಕ್ಸ್ ನಾಯಕತ್ವದ ಇನ್ನಿಂಗ್ಸ್ ಆಡಿದರು. ತಮ್ಮ ಅಮೋಘ 80 ರನ್​ಗಳ ಇನ್ನಿಂಗ್ಸ್ ಮೂಲಕ ಇಂಗ್ಲೆಂಡ್ ತಂಡವನ್ನು ಹಿನ್ನಡೆಯಿಂದ ಪಾರು ಮಾಡಿದ್ದಲ್ಲದೆ ಅಪರೂಪದ ಮೈಲಿಗಲ್ಲನ್ನು ದಾಟಿದರು.

2 / 7
ಇಂಗ್ಲೆಂಡ್ ಪರ 95ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಬೆನ್ ಸ್ಟೋಕ್ಸ್, ಕ್ರಿಕೆಟ್​ನ ಈ ದೀರ್ಫ ಸ್ವರೂಪದಲ್ಲಿ 6000 ರನ್ ಹಾಗೂ 100 ವಿಕೆಟ್‌ ಪಡೆದ 3ನೇ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದಾರೆ. ಸ್ಟೋಕ್ಸ್​ಗೂ ಮೊದಲು ವಿಶ್ವ ಕ್ರಿಕೆಟ್​ನಲ್ಲಿ ಇಬ್ಬರು ಆಟಗಾರರು ಈ ದಾಖಲೆ ಮಾಡಿದ್ದಾರೆ. ಆ ಇಬ್ಬರು ಯಾರೆಂದರೆ.?

3 / 7
ಸರ್ ಗಾರ್ಫೀಲ್ಡ್ ಸೋಬರ್ಸ್: ವೆಸ್ಟ್ ಇಂಡೀಸ್ ಕ್ರಿಕೆಟ್​ನ ದಿಗ್ಗಜ ಆಲ್​ರೌಂಡರ್ ಸರ್ ಗಾರ್ಫೀಲ್ಡ್ ಸೋಬರ್ಸ್​ರವರು ವಿಂಡೀಸ್ ಪರ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಬ್ಯಾಟ್​ನಿಂದ 8032 ರನ್ ಕಲೆಹಾಕಿದ್ದರೆ, ಬೌಲಿಂಗ್​ನಲ್ಲಿ 235 ವಿಕೆಟ್ ಉರುಳಿಸಿದ್ದಾರೆ.

4 / 7
ಜಾಕ್ವೆಸ್ ಕಾಲಿಸ್: ಹಾಗೆಯೇ ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಆಲ್​ರೌಂಡರ್ ಜಾಕ್ವೆಸ್ ಕಾಲಿಸ್ ಕೂಡ ಆಫ್ರಿಕಾ ಪರ ಬ್ಯಾಟಿಂಗ್​ನಲ್ಲಿ13289 ರನ್ ಕಲೆಹಾಕಿದ್ದು, ಬೌಲಿಂಗ್​ನಲ್ಲಿ 292 ವಿಕೆಟ್ ಪಡೆದಿದ್ದಾರೆ.

5 / 7
ಇನ್ನು ಟೆಸ್ಟ್ ಪಂದ್ಯದ ಬಗ್ಗೆ ಮಾತನಾಡುವುದಾದರೆ, ಐದು ಪಂದ್ಯಗಳ ಸರಣಿಯಲ್ಲಿ 0-2 ರಿಂದ ಹಿನ್ನಡೆಯಲ್ಲಿರುವ ಇಂಗ್ಲೆಂಡ್ ಈ ಪಂದ್ಯವನ್ನಯ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸೀಸ್ ಮೊದಲ ಇನ್ನಿಂಗ್ಸ್​ನಲ್ಲಿ 263 ರನ್ ಕಲೆಹಾಕಿತು.

6 / 7
ಇದಕ್ಕುತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 237 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿತ್ತು. ಇದೀಗ 2ನೇ ಇನ್ನಿಂಗ್ಸ್ ಆರಂಭಿಸಿರುವ ಕಾಂಗರೂಗಳು 116 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ ಪ್ರತಿಷ್ಠಿತ ಆ್ಯಶಸ್ ಸರಣಿ ಅವರ ಪಾಲಾಗಲಿದೆ.

7 / 7
Follow us
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM