Ashes 2023: ಲಾರ್ಡ್ಸ್ ಮೈದಾನದಲ್ಲಿ 10 ರನ್ ಸಿಡಿಸಿ ದಾಖಲೆ ಬರೆದ ರೂಟ್..!

Edited By:

Updated on: Jun 30, 2023 | 11:34 AM

Ashes 2023: ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 10 ರನ್​ ಬಾರಿಸಿದ ರೂಟ್, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ-10 ಆಟಗಾರರಲ್ಲಿ ಒಬ್ಬರಾಗಿದ್ದಾರೆ.

1 / 7
ಆಸ್ಟ್ರೇಲಿಯಾ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆ್ಯಶಸ್ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್ ವಿಶೇಷ ದಾಖಲೆಯ ಕ್ಲಬ್‌ಗೆ ಸೇರಿಕೊಂಡಿದ್ದಾರೆ. ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 10 ರನ್​ ಬಾರಿಸಿದ ರೂಟ್, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ-10 ಆಟಗಾರರಲ್ಲಿ ಒಬ್ಬರಾಗಿದ್ದಾರೆ.

2 / 7

ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಇಂಗ್ಲೆಂಡ್ ಆಟಗಾರರ ಪೈಕಿ ಅಲೆಸ್ಟರ್ ಕುಕ್ ನಂತರ ಜೋ ರೂಟ್ ಟಾಪ್ 10ರಲ್ಲಿ ಸ್ಥಾನ ಪಡೆದಿದ್ದಾರೆ.

3 / 7

ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಜೋ ರೂಟ್ ಇದುವರೆಗೆ 132 ಟೆಸ್ಟ್ ಪಂದ್ಯಗಳ 241 ಇನ್ನಿಂಗ್ಸ್‌ಗಳಲ್ಲಿ 50.57 ಸರಾಸರಿಯಲ್ಲಿ 11178 ರನ್ ಸಿಡಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 58 ಅರ್ಧ ಶತಕಗಳು ಸೇರಿವೆ.

4 / 7

ಜೋ ರೂಟ್ ಮೊದಲು, ಆಸ್ಟ್ರೇಲಿಯಾದ ಮಾಜಿ ನಾಯಕ ಅಲನ್ ಬಾರ್ಡರ್ ಟಾಪ್ 10 ರಲ್ಲಿ ಹತ್ತನೇ ಸ್ಥಾನದಲ್ಲಿದ್ದರು.

5 / 7

ಕ್ರಿಕೆಟ್ ದೇವರು ಭಾರತದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಟೆಸ್ಟ್ ಮಾದರಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಸಚಿನ್ 200 ಟೆಸ್ಟ್ ಪಂದ್ಯಗಳಲ್ಲಿ 15921 ರನ್ ಬಾರಿಸಿದ್ದಾರೆ.

6 / 7

161 ಪಂದ್ಯಗಳಲ್ಲಿ 12472 ರನ್ ಗಳಿಸಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲೆಸ್ಟರ್ ಕುಕ್, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್-10 ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.

7 / 7

ಈ ವಿಶೇಷ ಕ್ಲಬ್‌ಗೆ ಸೇರಲು ಜೋ ರೂಟ್‌ಗೆ ಹತ್ತಿರವಾಗಿ ಯಾವುದೇ ಆಟಗಾರನೂ ಇಲ್ಲ. ಪ್ರಸ್ತುತ ಕಾಲದ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳ ಪೈಕಿ ಭಾರತದ ವಿರಾಟ್ ಕೊಹ್ಲಿ, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್, ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರಂತಹ ಆಟಗಾರರು ಕೂಡ ಈ ಪಟ್ಟಿಗೆ ಸೇರ್ಪಡೆಯಾಗುವುದಕ್ಕೆ ಸಾಕಷ್ಟು ದೂರ ಕ್ರಮಿಸಬೇಕಾಗಿದೆ.

Loading...
Unable to load recommendations.
Follow Us