Ashes 2023: ಸತತ ಸೋಲಿನ ಸುಳಿಗೆ ಸಿಲುಕಿರುವ ಇಂಗ್ಲೆಂಡ್ಗೆ ಮತ್ತೊಂದು ಆಘಾತ..!
Ashes 2023: ಆ್ಯಶಸ್ ಸರಣಿಯ ಮೊದಲ ಎರಡು ಟೆಸ್ಟ್‌ಗಳಲ್ಲಿ ಸೋಲನುಭವಿಸಿರುವ ಆತಿಥೇಯ ಇಂಗ್ಲೆಂಡ್ ಸರಣಿಯಲ್ಲಿ ಉಳಿಯಲು ಮುಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಲ್ಲಿದೆ. ಇಂಗ್ಲೆಂಡ್ ಸರಣಿಯಲ್ಲಿ 0-2 ಹಿನ್ನಡೆಯಲ್ಲಿದೆ.
1 / 7
ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯ ನಡುವೆ ನಡೆಯುತ್ತಿರುವ ಆ್ಯಶಸ್ ಸರಣಿಯ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ತಂಡದ ಉಪನಾಯಕ ಒಲಿ ಪೋಪ್ ಗಾಯದ ಸಮಸ್ಯೆಯಿಂದಾಗಿ ಆ್ಯಶಸ್ ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಐಸಿಸಿ ಮತ್ತು ಇಂಗ್ಲೆಂಡ್ ಕ್ರಿಕೆಟ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.
2 / 7
ತನ್ನ ಹೇಳಿಕೆಯಲ್ಲಿ, ಭುಜದ ಗಾಯದಿಂದಾಗಿ ಇಂಗ್ಲೆಂಡ್ ತಂಡದ ಉಪನಾಯಕ ಒಲಿ ಪೋಪ್ ಆ್ಯಶಸ್ ಸರಣಿಯ ಮುಂಬರುವ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇಂಜುರಿಗೊಳಗಾಗಿದ್ದ ಒಲಿ ಪೋಪ್ಗೆ ನಿನ್ನೆ ಭುಜದ ಸ್ಕ್ಯಾನ್ ಮಾಡಲಾಗಿತ್ತು. ತಪಾಸಣೆ ಬಳಿಕ ಪೋಪ್ ಅವರಿಗೆ ವಿಶ್ರಾಂತಿ ನೀಡಲು ವೈದ್ಯರು ಸೂಚನೆ ನೀಡಿದ್ದಾರೆ.
3 / 7
ಭುಜದ ಗಾಯಕ್ಕೆ ಒಳಗಾಗಿರುವ ಪೋಪ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ, ಅವರು ಇಂಗ್ಲೆಂಡ್‌ನ ವೈದ್ಯಕೀಯ ತಂಡದ ಮಾರ್ಗದರ್ಶನದಲ್ಲಿ ಚೇತರಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸುಲ್ಲಿದ್ದಾರೆ. ಹೀಗಾಗಿ ಈ ಸರಣಿಯಿಂದ ಪೋಪ್ ಹೊರಗುಳಿಯಲ್ಲಿದ್ದಾರೆ ಎಂದು ಬರೆದುಕೊಂಡಿದೆ.
4 / 7
ಲಾರ್ಡ್ಸ್ ಟೆಸ್ಟ್‌ನ ಮೊದಲ ದಿನವೇ ಒಲಿ ಪೋಪ್ ಗಾಯಗೊಂಡಿದ್ದರು. ಆಸ್ಟ್ರೇಲಿಯಾದ ಬ್ಯಾಟಿಂಗ್ ವೇಳೆ ಫೀಲ್ಡಿಂಗ್ ಮಾಡುವಾಗ ಚೆಂಡನ್ನು ನಿಲ್ಲಿಸಲು ಯತ್ನಿಸಿ ಪೋಪ್ ಗಾಯಗೊಂಡಿದ್ದರು. ಗಾಯದ ಹೊರತಾಗಿಯೂ, ಮೊದಲ ಇನ್ನಿಂಗ್ಸ್‌ನಲ್ಲಿ ನಿರ್ಣಾಯಕ 42 ರನ್ ಬಾರಿಸಿದ್ದ ಪೋಪ್, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ಮೂರು ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದ್ದರು.
5 / 7
ಆ್ಯಶಸ್ ಸರಣಿಯ ಮೊದಲ ಎರಡು ಟೆಸ್ಟ್‌ಗಳಲ್ಲಿ ಒಲಿ ಪೋಪ್ ಅವರ ಪ್ರದರ್ಶನ ಸರಾಸರಿಯಾಗಿದೆ. ಮೊದಲ ಟೆಸ್ಟ್‌ನ ಎರಡು ಇನ್ನಿಂಗ್ಸ್‌ಗಳಲ್ಲಿ 45 ರನ್ ಕಲೆಹಾಕಿದ್ದ ಪೋಪ್, ಎರಡನೇ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ 45 ಬಾರಿಸಲಷ್ಟೇ ಶಕ್ತರಾಗಿದ್ದರು.
6 / 7
ಆ್ಯಶಸ್ ಸರಣಿಯ ಮೊದಲ ಎರಡು ಟೆಸ್ಟ್‌ಗಳಲ್ಲಿ ಸೋಲನುಭವಿಸಿರುವ ಆತಿಥೇಯ ಇಂಗ್ಲೆಂಡ್ ಸರಣಿಯಲ್ಲಿ ಉಳಿಯಲು ಮುಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಲ್ಲಿದೆ. ಇಂಗ್ಲೆಂಡ್ ಸರಣಿಯಲ್ಲಿ 0-2 ಹಿನ್ನಡೆಯಲ್ಲಿದೆ.
7 / 7
ಸರಣಿಯಲ್ಲಿ ಇನ್ನೂ ಮೂರು ಟೆಸ್ಟ್ ಪಂದ್ಯಗಳು ಬಾಕಿ ಉಳಿದಿದ್ದು, ಇಂಗ್ಲೆಂಡ್ ಕೂಡ ಸರಣಿ ಗೆಲ್ಲುವ ಅವಕಾಶ ಹೊಂದಿದೆ. ಆದರೆ ಅದಕ್ಕಾಗಿ ಮೂರೂ ಪಂದ್ಯಗಳನ್ನು ಗೆಲ್ಲಲೇಬೇಕು. ಇದಕ್ಕೂ ಮುನ್ನ ಸರಣಿಯಲ್ಲಿ ಉಳಿಯಲು ಮೂರನೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.