Ashes 2023: ಮೊದಲ ದಿನವೇ ಡಿಕ್ಲೇರ್ ಘೋಷಿಸಿ ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್

| Updated By: ಝಾಹಿರ್ ಯೂಸುಫ್

Updated on: Jun 19, 2023 | 9:20 PM

Ashes 2023 England vs Australia: ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಜೋ ರೂಟ್ ಸ್ವಿಚ್​ ಹಿಟ್​ಗಳ ಮೂಲಕ ಗಮನ ಸೆಳೆದರು. ಅಲ್ಲದೆ ಆಸೀಸ್ ವೇಗಿಗಳನ್ನು ಮನಸೊ ಇಚ್ಛೆ ದಂಡಿಸುವ ಮೂಲಕ 152 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಅಜೇಯ 118 ರನ್ ಬಾರಿಸಿದರು.

1 / 11
Ashes 2023: ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯವು ಕುತೂಹಲಘಟ್ಟದತ್ತ ಸಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತ್ತು.

2 / 11
ಆರಂಭಿಕ ಝಾಕ್ ಕ್ರಾಲಿ (61) ಉತ್ತಮ ಆರಂಭ ಒದಗಿಸಿದರೆ, ಮತ್ತೊಂದೆಡೆ ಬೆನ್ ಡಕೆಟ್ (12) ಹಾಗೂ ಅಲಿ ಪೋಪ್ (31) ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

3 / 11
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಜೋ ರೂಟ್ ಸ್ವಿಚ್​ ಹಿಟ್​ಗಳ ಮೂಲಕ ಗಮನ ಸೆಳೆದರು. ಅಲ್ಲದೆ ಆಸೀಸ್ ವೇಗಿಗಳನ್ನು ಮನಸೊ ಇಚ್ಛೆ ದಂಡಿಸುವ ಮೂಲಕ 152 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಅಜೇಯ 118 ರನ್ ಬಾರಿಸಿದರು. ಅಲ್ಲದೆ ಮೊದಲ ದಿನದಾಟದಲ್ಲೇ 8 ವಿಕೆಟ್ ನಷ್ಟಕ್ಕೆ 393 ರನ್​ ಕಲೆಹಾಕಿ ಡಿಕ್ಲೇರ್ ಘೋಷಿಸಿ ಅಚ್ಚರಿ ಮೂಡಿಸಿತು.

4 / 11
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 67 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಸೀಸ್​ ತಂಡಕ್ಕೆ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ ಆಸರೆಯಾದರು.

5 / 11
ಆರಂಭದಿಂದಲೂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಖ್ವಾಜಾ 199 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 2ನೇ ದಿನದಾಟವರೆಗೆ ಬ್ಯಾಟಿಂಗ್ ಕಾಯ್ದುಕೊಂಡು ತಂಡದ ಮೊತ್ತವನ್ನು 5 ವಿಕೆಟ್ ನಷ್ಟಕ್ಕೆ 311 ರನ್​ಗೆ ತಂದು ನಿಲ್ಲಿಸಿದ್ದರು.

6 / 11
ಆದರೆ ಮೂರನೇ ದಿನದಾಟದ ಆರಂಭದಲ್ಲೇ ಮೇಲುಗೈ ಸಾಧಿಸಿದ ಇಂಗ್ಲೆಂಡ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು. 66 ರನ್​ಗಳಿಸಿದ್ದ ಅಲೆಕ್ಸ್ ಕ್ಯಾರಿಯ ವಿಕೆಟ್ ಪಡೆದು ಆಂಗ್ಲರು ಶುಭಾರಂಭ ಮಾಡಿದ್ದರು. ಇದರ ಬೆನ್ನಲ್ಲೇ ರಾಬಿನ್ಸನ್ ಉಸ್ಮಾನ್ ಖ್ವಾಜಾ (141) ಅವರ ವಿಕೆಟ್ ಉರುಳಿಸಿದರು.

7 / 11
ಖ್ವಾಜಾ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಆಸ್ಟ್ರೇಲಿಯಾ ತಂಡವು 386 ರನ್​ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಸ್ಟುವರ್ಟ್ ಬ್ರಾಡ್ ಹಾಗೂ ಒಲ್ಲಿ ರಾಬಿನ್ಸನ್ ತಲಾ 3 ವಿಕೆಟ್ ಕಬಳಿಸಿ ಮಿಂಚಿದರು.

8 / 11
ಇತ್ತ ಪ್ರಥಮ ಇನಿಂಗ್ಸ್​ನಲ್ಲಿ 393 ರನ್​ಗಳನ್ನು ಬಾರಿಸಿದ್ದ ಇಂಗ್ಲೆಂಡ್ ತಂಡವು 7 ರನ್​ಗಳ ಮುನ್ನಡೆ ದ್ವಿತೀಯ ಇನಿಂಗ್ಸ್ ಆರಂಭಿಸಿತು. ಆದರೆ ಇದೇ ವೇಳೆ ಮಳೆಯಾಗಿದ್ದರಿಂದ ಪಂದ್ಯವನ್ನು ಕೆಲ ಗಂಟೆಗಳ ಕಾಲ ಸ್ಥಗಿತಗೊಳಿಸಲಾಯಿತು. ಆ ಬಳಿಕ ಪುನರಾರಂಭಗೊಂಡ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲರ್​ಗಳು ಮೇಲುಗೈ ಸಾಧಿಸಿದರು. ಅಲ್ಲದೆ ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡವು 2 ವಿಕೆಟ್ ನಷ್ಟಕ್ಕೆ 28 ರನ್ ಕಲೆಹಾಕಿತ್ತು.

9 / 11
ಆದರೆ ನಾಲ್ಕನೇ ದಿನದಾಟದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದ ಆಸ್ಟ್ರೇಲಿಯನ್ನರ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಆಂಗ್ಲರು ಪರದಾಡಿದರು. ಪರಿಣಾಮ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವು ಕೇವಲ 273 ರನ್​ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಪರ ನಾಥನ್ ಲಿಯಾನ್ ಹಾಗೂ ಪ್ಯಾಟ್ ಕಮಿನ್ಸ್ ತಲಾ 4 ವಿಕೆಟ್ ಕಬಳಿಸಿ ಮಿಂಚಿದರು.

10 / 11
ಅದರಂತೆ ಇದೀಗ ಮೊದಲ ಇನಿಂಗ್ಸ್​ ಹಿನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 281 ರನ್​ಗಳ ಅವಶ್ಯಕತೆಯಿದೆ. ಇತ್ತ ನಾಲ್ಕನೇ ದಿನದಾಟವು ಚಾಲ್ತಿಯಲ್ಲಿದ್ದು, ಇನ್ನು ಕೊನೆಯ ದಿನದಾಟ ಕೂಡ ಬಾಕಿಯಿದೆ. ಹೀಗಾಗಿ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲುವ ಅವಕಾಶವಿದೆ.

11 / 11
ಇತ್ತ ಮೊದಲ ದಿನದಾಟದಲ್ಲೇ 393 ರನ್ ಬಾರಿಸಿ ಡಿಕ್ಲೇರ್ ಮಾಡಿಕೊಂಡ ಇಂಗ್ಲೆಂಡ್ ತಂಡವು ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಮುಗ್ಗರಿಸಿ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಒಟ್ಟಿನಲ್ಲಿ ಕೊನೆಯ ದಿನದಾಟದಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬುದೇ ಈಗ ಕುತೂಹಲ.