Ashes 2023: 3ನೇ ದಿನದಾಟ ಮಳೆಗೆ ಆಹುತಿ: ಇಂಗ್ಲೆಂಡ್ ತಂಡಕ್ಕೆ ಅಲ್ಪ ಮುನ್ನಡೆ

Ashes 2023: ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 67 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಸೀಸ್​ ತಂಡಕ್ಕೆ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ ಆಸರೆಯಾದರು.

TV9 Web
| Updated By: ಝಾಹಿರ್ ಯೂಸುಫ್

Updated on: Jun 18, 2023 | 11:27 PM

Ashes 2023: ಇಂಗ್ಲೆಂಡ್-ಆಸ್ಟ್ರೇಲಿಯಾ (England vs Australia) ನಡುವೆ ನಡೆಯುತ್ತಿರುವ ಪ್ರತಿಷ್ಠಿತ ಆ್ಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದ 3ನೇ ದಿನದಾಟವು ಮಳೆಗೆ ಆಹುತಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು.

1 / 10
ಆರಂಭಿಕ ಝಾಕ್ ಕ್ರಾಲಿ (61) ಉತ್ತಮ ಆರಂಭ ಒದಗಿಸಿದರೆ, ಮತ್ತೊಂದೆಡೆ ಬೆನ್ ಡಕೆಟ್ (12) ಹಾಗೂ ಅಲಿ ಪೋಪ್ (31) ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

2 / 10
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಜೋ ರೂಟ್ ಸ್ವಿಚ್​ ಹಿಟ್​ಗಳ ಮೂಲಕ ಗಮನ ಸೆಳೆದರು. ಅಲ್ಲದೆ ಆಸೀಸ್ ವೇಗಿಗಳನ್ನು ಮನಸೊ ಇಚ್ಛೆ ದಂಡಿಸುವ ಮೂಲಕ 152 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಅಜೇಯ 118 ರನ್ ಬಾರಿಸಿದರು. ಅಲ್ಲದೆ ಮೊದಲ ದಿನದಾಟದಲ್ಲೇ 8 ವಿಕೆಟ್ ನಷ್ಟಕ್ಕೆ 393 ರನ್​ ಕಲೆಹಾಕಿ ಡಿಕ್ಲೇರ್ ಘೋಷಿಸಿತು.

3 / 10
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 67 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಸೀಸ್​ ತಂಡಕ್ಕೆ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ ಆಸರೆಯಾದರು.

4 / 10
ಆರಂಭದಿಂದಲೂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಖ್ವಾಜಾ 199 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 2ನೇ ದಿನದಾಟವರೆಗೆ ಬ್ಯಾಟಿಂಗ್ ಕಾಯ್ದುಕೊಂಡು ತಂಡದ ಮೊತ್ತವನ್ನು 5 ವಿಕೆಟ್ ನಷ್ಟಕ್ಕೆ 311 ರನ್​ಗೆ ತಂದು ನಿಲ್ಲಿಸಿದ್ದರು.

5 / 10
ಆದರೆ ಮೂರನೇ ದಿನದಾಟದ ಆರಂಭದಲ್ಲೇ ಮೇಲುಗೈ ಸಾಧಿಸಿದ ಇಂಗ್ಲೆಂಡ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು. 66 ರನ್​ಗಳಿಸಿದ್ದ ಅಲೆಕ್ಸ್ ಕ್ಯಾರಿಯ ವಿಕೆಟ್ ಪಡೆದು ಆಂಗ್ಲರು ಶುಭಾರಂಭ ಮಾಡಿದ್ದರು. ಇದರ ಬೆನ್ನಲ್ಲೇ ರಾಬಿನ್ಸನ್ ಉಸ್ಮಾನ್ ಖ್ವಾಜಾ (141) ಅವರ ವಿಕೆಟ್ ಉರುಳಿಸಿದರು.

6 / 10
ಖ್ವಾಜಾ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಆಸ್ಟ್ರೇಲಿಯಾ ತಂಡವು 386 ರನ್​ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಸ್ಟುವರ್ಟ್ ಬ್ರಾಡ್ ಹಾಗೂ ಒಲ್ಲಿ ರಾಬಿನ್ಸನ್ ತಲಾ 3 ವಿಕೆಟ್ ಕಬಳಿಸಿ ಮಿಂಚಿದರು.

7 / 10
ಇತ್ತ ಪ್ರಥಮ ಇನಿಂಗ್ಸ್​ನಲ್ಲಿ 393 ರನ್​ಗಳನ್ನು ಬಾರಿಸಿದ್ದ ಇಂಗ್ಲೆಂಡ್ ತಂಡವು 7 ರನ್​ಗಳ ಮುನ್ನಡೆ ದ್ವಿತೀಯ ಇನಿಂಗ್ಸ್ ಆರಂಭಿಸಿತು. ಆದರೆ ಇದೇ ವೇಳೆ ಮಳೆಯಾಗಿದ್ದರಿಂದ ಪಂದ್ಯವನ್ನು ಕೆಲ ಗಂಟೆಗಳ ಕಾಲ ಸ್ಥಗಿತಗೊಳಿಸಲಾಯಿತು.

8 / 10
ಆ ಬಳಿಕ ಪುನರಾರಂಭಗೊಂಡ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲರ್​ಗಳು ಮೇಲುಗೈ ಸಾಧಿಸಿದರು. ಪ್ಯಾಟ್ ಕಮಿನ್ಸ್ ಬೆನ್ ಡಕೆಟ್ (19) ರನ್ನು ಔಟ್ ಮಾಡಿದರೆ, ಅತ್ತ ಬೋಲ್ಯಾಂಡ್ ಡೇಂಜರಸ್ ಝಾಕ್ ಕ್ರಾಲಿ (7) ವಿಕೆಟ್ ಪಡೆದರು.

9 / 10
ಇದೇ ವೇಳೆ ಮತ್ತೆ ವರುಣ ಅಡ್ಡಿಯಾಗಿದ್ದರಿಂದ 3ನೇ ದಿನದಾಟವನ್ನು ಸ್ಥಗಿತಗೊಳಿಸಲಾಯಿತು. ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡವು 2 ವಿಕೆಟ್ ನಷ್ಟಕ್ಕೆ 28 ರನ್ ಕಲೆಹಾಕಿದೆ. ಅಲ್ಲದೆ 35 ರನ್​ಗಳ ಮುನ್ನಡೆಯೊಂದಿಗೆ ಕ್ರೀಸ್​ನಲ್ಲಿ ಜೋ ರೂಟ್ ಹಾಗೂ ಒಲ್ಲಿ ಪೋಪ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

10 / 10
Follow us
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ

ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು

ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್

ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ