AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ಆಸ್ಟ್ರೇಲಿಯಾ ತಂಡ ಆಲೌಟ್: ಇಂಗ್ಲೆಂಡ್​ಗೆ 7 ರನ್​ಗಳ ಮುನ್ನಡೆ

Ashes 2023: ಮೂರನೇ ದಿನದಾಟದ ಆರಂಭದಲ್ಲೇ ಆಸ್ಟ್ರೇಲಿಯಾ ಬ್ಯಾಟರ್​ಗಳ ವಿರುದ್ಧ ಮೇಲುಗೈ ಸಾಧಿಸಿದ ಇಂಗ್ಲೆಂಡ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು.

TV9 Web
| Edited By: |

Updated on: Jun 18, 2023 | 6:00 PM

Share
Ashes 2023: ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಪ್ರತಿಷ್ಠಿತ ಆ್ಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ ಪೂರ್ಣಗೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು.

1 / 8
ಆರಂಭಿಕ ಝಾಕ್ ಕ್ರಾಲಿ (61) ಉತ್ತಮ ಆರಂಭ ಒದಗಿಸಿದರೆ, ಮತ್ತೊಂದೆಡೆ ಬೆನ್ ಡಕೆಟ್ (12) ಹಾಗೂ ಅಲಿ ಪೋಪ್ (31) ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

2 / 8
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಜೋ ರೂಟ್ ಸ್ವಿಚ್​ ಹಿಟ್​ಗಳ ಮೂಲಕ ಗಮನ ಸೆಳೆದರು. ಅಲ್ಲದೆ ಆಸೀಸ್ ವೇಗಿಗಳನ್ನು ಮನಸೊ ಇಚ್ಛೆ ದಂಡಿಸುವ ಮೂಲಕ 152 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಅಜೇಯ 118 ರನ್ ಬಾರಿಸಿದರು. ಅಲ್ಲದೆ ಮೊದಲ ದಿನದಾಟದಲ್ಲೇ 8 ವಿಕೆಟ್ ನಷ್ಟಕ್ಕೆ 393 ರನ್​ ಕಲೆಹಾಕಿ ಡಿಕ್ಲೇರ್ ಘೋಷಿಸಿತು.

3 / 8
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 67 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಸೀಸ್​ ತಂಡಕ್ಕೆ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ ಆಸರೆಯಾದರು.

4 / 8
ಆರಂಭದಿಂದಲೂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಖ್ವಾಜಾ 199 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 2ನೇ ದಿನದಾಟವರೆಗೆ ಬ್ಯಾಟಿಂಗ್ ಕಾಯ್ದುಕೊಂಡು ತಂಡದ ಮೊತ್ತವನ್ನು 5 ವಿಕೆಟ್ ನಷ್ಟಕ್ಕೆ 311 ರನ್​ಗೆ ತಂದು ನಿಲ್ಲಿಸಿದ್ದರು.

5 / 8
ಆದರೆ ಮೂರನೇ ದಿನದಾಟದ ಆರಂಭದಲ್ಲೇ ಮೇಲುಗೈ ಸಾಧಿಸಿದ ಇಂಗ್ಲೆಂಡ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು. 66 ರನ್​ಗಳಿಸಿದ್ದ ಅಲೆಕ್ಸ್ ಕ್ಯಾರಿಯ ವಿಕೆಟ್ ಪಡೆದು ಆಂಗ್ಲರು ಶುಭಾರಂಭ ಮಾಡಿದ್ದರು. ಇದರ ಬೆನ್ನಲ್ಲೇ ರಾಬಿನ್ಸನ್ ಉಸ್ಮಾನ್ ಖ್ವಾಜಾ (141) ಅವರ ವಿಕೆಟ್ ಉರುಳಿಸಿದರು.

6 / 8
ಖ್ವಾಜಾ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಆಸ್ಟ್ರೇಲಿಯಾ ತಂಡವು 386 ರನ್​ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್ ಪರ ಸ್ಟುವರ್ಟ್ ಬ್ರಾಡ್ ಹಾಗೂ ಒಲ್ಲಿ ರಾಬಿನ್ಸನ್ ತಲಾ 3 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

7 / 8
ಇತ್ತ ಪ್ರಥಮ ಇನಿಂಗ್ಸ್​ನಲ್ಲಿ 393 ರನ್​ಗಳನ್ನು ಬಾರಿಸಿದ್ದ ಇಂಗ್ಲೆಂಡ್ ತಂಡವು 7 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಸದ್ಯ ಮೂರನೇ ದಿನದಾಟ ನಡೆಯುತ್ತಿದ್ದು, ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ತಂತ್ರಗಾರಿಕೆ ಹೇಗಿರಲಿದೆ ಎಂಬುದೇ ಕುತೂಹಲ.

8 / 8
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್