Joe Root: ಮೊದಲ ಬಾರಿ ಸ್ಟಂಪ್ ಔಟ್ ಆಗಿ ವಿಶೇಷ ದಾಖಲೆ ಬರೆದ ಜೋ ರೂಟ್

Joe Root Records: ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ರೂಟ್ ಅಜೇಯ 118 ರನ್​ ಬಾರಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 46 ರನ್​ಗಳಿಸಿ ನಾಥನ್ ಲಿಯಾನ್ ಎಸೆತದಲ್ಲಿ ಸ್ಟಂಪ್ ಔಟ್ ಆಗಿ ಹೊರನಡೆದರು.

TV9 Web
| Updated By: ಝಾಹಿರ್ ಯೂಸುಫ್

Updated on: Jun 20, 2023 | 3:42 PM

Ashes 2023: ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಆಶ್ಯಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರ ಜೋ ರೂಟ್ (Joe Root) ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ವಿಶೇಷ ಎಂದರೆ ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

1 / 10
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ರೂಟ್ ಅಜೇಯ 118 ರನ್​ ಬಾರಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 46 ರನ್​ಗಳಿಸಿ ನಾಥನ್ ಲಿಯಾನ್ ಎಸೆತದಲ್ಲಿ ಸ್ಟಂಪ್ ಔಟ್ ಆಗಿ ಹೊರನಡೆದರು.

2 / 10
ವಿಶೇಷ ಎಂದರೆ 240 ಟೆಸ್ಟ್ ಇನಿಂಗ್ಸ್​ ಆಡಿರುವ ಜೋ ರೂಟ್ ಇದೇ ಮೊದಲ ಬಾರಿಗೆ ಸ್ಟಂಪ್ ಔಟ್ ಆಗಿದ್ದಾರೆ. ಇದರೊಂದಿಗೆ ಕೆಲ ದಾಖಲೆಗಳು ಕೂಡ ರೂಟ್ ಹೆಸರಿಗೆ ಸೇರ್ಪಡೆಯಾಯಿತು.

3 / 10
ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ಬಾರಿಗೆ ಸ್ಟಂಪ್ ಔಟ್ ಆಗುವ ಮುನ್ನ ಅತೀ ಹೆಚ್ಚು ರನ್​ಗಳಿಸಿದ ಇಂಗ್ಲೆಂಡ್ ಬ್ಯಾಟರ್ ಎಂಬ ದಾಖಲೆ ಜೋ ರೂಟ್ ಪಾಲಾಗಿದೆ. ಅಲ್ಲದೆ ಟೆಸ್ಟ್ ವೃತ್ತಿಜೀವನದಲ್ಲಿ ಸ್ಟಂಪ್ ಔಟ್ ಆಗುವ ಮೊದಲು ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 10
ಈ ವಿಶೇಷ ದಾಖಲೆಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್​ನ ಮಾಜಿ ಟೆಸ್ಟ್ ಸ್ಪೆಷಲಿಸ್ಟ್ ಶಿವನಾರಾಯಣ್ ಚಂದ್ರಪಾಲ್ ಅಗ್ರಸ್ಥಾನದಲ್ಲಿದ್ದಾರೆ. ಚಂದ್ರಪಾಲ್ ಟೆಸ್ಟ್​ನಲ್ಲಿ ಮೊದಲ ಬಾರಿಗೆ ಸ್ಟಂಪ್ ಆಗುವ ಮುನ್ನ ಒಟ್ಟು 11,414 ರನ್​ ಕಲೆಹಾಕಿದ್ದರು.

5 / 10
ಇದೀಗ ಜೋ ರೂಟ್ ಟೆಸ್ಟ್​ ಕೆರಿಯರ್​ನಲ್ಲಿ ಮೊದಲ ಬಾರಿ ಸ್ಟಂಪ್ ಔಟ್​ ಆಗಿ ಹೊರನಡೆಯುವ ಮುನ್ನ 11,168 ರನ್ ಕಲೆಹಾಕಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 10
ಇನ್ನು ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ಬಾರಿಗೆ ಸ್ಟಂಪ್ ಔಟ್ ಆಗುವ ಮುನ್ನ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಟೆಸ್ಟ್ ಕೆರಿಯರ್​ನಲ್ಲಿ ಮೊದಲ ಬಾರಿಗೆ ಸ್ಟಂಪ್ ಔಟ್ ಆಗುವ ಮುನ್ನ ಒಟ್ಟು 8,195 ರನ್​ ಕಲೆಹಾಕಿದ್ದರು.

7 / 10
ಹಾಗೆಯೇ 2 ಮಾದರಿಯ ಕ್ರಿಕೆಟ್​ನಲ್ಲಿ 50+ ಸರಸಾರಿಯಲ್ಲಿ ರನ್​ ಕಲೆಹಾಕಿದ ವಿಶೇಷ ದಾಖಲೆಯೊಂದು ಕೂಡ ಜೋ ರೂಟ್ ಪಾಲಾಗಿದೆ. ಜೋ ರೂಟ್ 131 ಟೆಸ್ಟ್ ಪಂದ್ಯಗಳಲ್ಲಿ 50.76 ಸರಾಸರಿಯಲ್ಲಿ 11168 ರನ್​ಗಳಿಸಿದ್ದರೆ, ಏಕದಿನ ಕ್ರಿಕೆಟ್​ನಲ್ಲಿ 158 ಪಂದ್ಯಗಳಿಂದ 50.06 ಸರಾಸರಿಯಲ್ಲಿ 6207 ರನ್ ಪೇರಿಸಿದ್ದಾರೆ.

8 / 10
ಇದಕ್ಕೂ ಮುನ್ನ ಸೌತ್ ಆಫ್ರಿಕಾದ ಎಬಿ ಡಿವಿಲಿಯರ್ಸ್ ಹಾಗೂ ವಿರಾಟ್ ಕೊಹ್ಲಿ ಮಾತ್ರ ಇಂತಹ ಸಾಧನೆ ಮಾಡಿದ್ದರು. ಎಬಿಡಿ 114 ಟೆಸ್ಟ್ ಪಂದ್ಯಗಳಲ್ಲಿ 50.66 ಸರಾಸರಿಯಲ್ಲಿ 8765 ರನ್ ಕಲೆಹಾಕಿದ್ದಾರೆ. ಹಾಗೆಯೇ 228 ಏಕದಿನ ಪಂದ್ಯಗಳಿಂದ 53.5 ಸರಾಸರಿಯಲ್ಲಿ 9577 ರನ್​ಗಳಿಸಿದ್ದಾರೆ.

9 / 10
ಹಾಗೆಯೇ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ 274 ಪಂದ್ಯಗಳಲ್ಲಿ 57.32 ಸರಾಸರಿಯಲ್ಲಿ 12898 ರನ್​ ಗಳಿಸಿದ್ದರೆ, ಟಿ20 ಕ್ರಿಕೆಟ್​ನಲ್ಲಿ 115 ಇನಿಂಗ್ಸ್​ಗಳಿಂದ 52.74 ಸರಾಸರಿಯಲ್ಲಿ 4008 ರನ್ ಕಲೆಹಾಕಿದ್ದಾರೆ. ಇದೀಗ ವಿರಾಟ್ ಕೊಹ್ಲಿ ಹಾಗೂ ಎಬಿಡಿ ಹೆಸರಿನಲ್ಲಿದ್ದ ಅಪರೂಪದ ದಾಖಲೆಯೊಂದಿಗೆ ಜೋ ರೂಟ್ ಹೆಸರು ಕೂಡ ಸೇರ್ಪಡೆಯಾಗಿರುವುದು ವಿಶೇಷ.

10 / 10
Follow us
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ

ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್

ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ

ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ