AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: 600 ಟೆಸ್ಟ್ ವಿಕೆಟ್; ಆ್ಯಶಸ್​ನಲ್ಲಿ ಮತ್ತೊಂದು ದಾಖಲೆ ಬರೆದ ಸ್ಟುವರ್ಟ್ ಬ್ರಾಡ್..!

Stuart Broad, Ashes 2023: ಆಸೀಸ್ ಬ್ಯಾಟರ್​ ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡುವ ಮೂಲಕ ಬ್ರಾಡ್ ತಮ್ಮ 600 ನೇ ಟೆಸ್ಟ್ ವಿಕೆಟ್‌ಗಳನ್ನು ಪೂರೈಸಿದರು.

ಪೃಥ್ವಿಶಂಕರ
|

Updated on: Jul 20, 2023 | 7:06 AM

Share
ಪ್ರಸ್ತುತ ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಆ್ಯಶಸ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ನ ಅನುಭವಿ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್ ತಮ್ಮ ವೃತ್ತಿಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದಾರೆ.

1 / 7
ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಆ್ಯಶಸ್ ಟೆಸ್ಟ್‌ನ ಮೊದಲ ದಿನದಂದು ಆಸೀಸ್ ಬ್ಯಾಟರ್​ ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡುವ ಮೂಲಕ ಬ್ರಾಡ್ ತಮ್ಮ 600 ನೇ ಟೆಸ್ಟ್ ವಿಕೆಟ್‌ಗಳನ್ನು ಪೂರೈಸಿದರು. ಬ್ರಾಡ್ ತಮ್ಮ 165ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದರು.

2 / 7
ಇದರೊಂದಿಗೆ, 37 ವರ್ಷದ ಸ್ಟುವರ್ಟ್ ಬ್ರಾಡ್ ಟೆಸ್ಟ್‌ನಲ್ಲಿ 600 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದ ಎರಡನೇ ವೇಗಿ ಮತ್ತು ಒಟ್ಟಾರೆ ಐದನೇ ಬೌಲರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಮುಂಚೂಣಿಯಲ್ಲಿದ್ದು, ಅವರ ಹೆಸರಿನಲ್ಲಿ 800 ವಿಕೆಟ್‌ಗಳಿವೆ.

3 / 7
ವೇಗದ ಬೌಲರ್‌ಗಳಲ್ಲಿ ಬ್ರಾಡ್‌ನ ಜೊತೆಗಾರ ಜೇಮ್ಸ್ ಆಂಡರ್ಸನ್ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆ್ಯಂಡರ್ಸನ್ ಇದುವರೆಗೆ ಆಡಿರುವ 181 ಟೆಸ್ಟ್ ಪಂದ್ಯಗಳಲ್ಲಿ 688 ವಿಕೆಟ್ ಪಡೆದಿದ್ದಾರೆ.

4 / 7
ಇಷ್ಟೇ ಅಲ್ಲ, ಆಸ್ಟ್ರೇಲಿಯಾ ವಿರುದ್ಧ 149 ನೇ ಟೆಸ್ಟ್ ವಿಕೆಟ್ ಉರುಳಿಸಿದ ಬ್ರಾಡ್, ಆಸೀಸ್ ವಿರುದ್ಧ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ದಾಖಲೆ ಬರೆದಿದ್ದ ತಮ್ಮದೇ ದೇಶದ ಇಯಾನ್ ಬೋಥಮ್ (148) ಅವರನ್ನೂ ಸಹ ಹಿಂದಿಕ್ಕಿದ್ದಾರೆ.

5 / 7
ಇನ್ನು ಈ ನಾಲ್ಕನೇ ಟೆಸ್ಟ್ ಪಂದ್ಯದ ಬಗ್ಗೆ ಹೇಳುವುದಾದರೆ, ಈ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ದಿನದಾಟದಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 299 ರನ್ ಕಲೆಹಾಕಿದೆ. ತಂಡದ ಪರ ಲಬುಶೇನ್ ಹಾಗೂ ಶಾನ್ ಮಾರ್ಷ್ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಉಳಿದವರಿಂದ ಸಪ್ಪೆ ಪ್ರದರ್ಶನ ಕಂಡು ಬಂದಿದೆ.

6 / 7
ಹಾಗೆಯೇ ಇಂಗ್ಲೆಂಡ್ ಪರ ವೇಗಿ ಕ್ರಿಸ್ ವೋಕ್ಸ್ 4 ವಿಕೆಟ್ ಪಡೆದು ಮಿಂಚಿದರೆ, ಸ್ಟುವರ್ಟ್​ ಬ್ರಾಡ್ 2, ಮಾರ್ಕ್​ವುಡ್ ಹಾಗೂ ಮೊಯಿನ್ ಅಲಿ ತಲಾ 1 ವಿಕೆಟ್ ಪಡೆದುಕೊಂಡಿದ್ದಾರೆ.

7 / 7
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ