- Kannada News Photo gallery Cricket photos Kannada News | Ashes 2023: Usman Khawaja Smashes his first century in England
Usman Khawaja: ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ ಉಸ್ಮಾನ್ ಖ್ವಾಜಾ
Ashes 2023: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಜೋ ರೂಟ್ (118) ಅವರ ಅಜೇಯ ಶತಕದ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 393 ರನ್ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.
Updated on: Jun 17, 2023 | 11:05 PM

Ashes 2023: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಆ್ಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ ಅಬ್ಬರಿಸಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಜೋ ರೂಟ್ (118) ಅವರ ಅಜೇಯ ಶತಕದ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 393 ರನ್ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.

ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 67 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಸೀಸ್ ತಂಡಕ್ಕೆ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ ಆಸರೆಯಾದರು.

ಆರಂಭದಿಂದಲೂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಖ್ವಾಜಾ 199 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ತಂಡದ ಮೊತ್ತವನ್ನು 250 ಗಡಿ ದಾಟಿಸಿದರು.

ವಿಶೇಷ ಎಂದರೆ ಇದು ಇಂಗ್ಲೆಂಡ್ ನೆಲದಲ್ಲಿ ಉಸ್ಮಾನ್ ಖ್ವಾಜಾ ಬಾರಿಸಿದ ಮೊದಲ ಶತಕವಾಗಿದೆ. ಹಾಗೆಯೇ 8 ವರ್ಷಗಳ ಬಳಿಕ ಆಸ್ಟ್ರೇಲಿಯಾ ಆರಂಭಿಕನಿಂದ ಮೂಡಿಬಂದ ಮೊದಲ ಸೆಂಚುರಿ ಇದಾಗಿದೆ. 2015 ರಲ್ಲಿ ಲಾರ್ಡ್ಸ್‌ನಲ್ಲಿ ಕ್ರಿಸ್ ರೋಜರ್ಸ್ 173 ರನ್ ಗಳಿಸಿದ್ದರು.

ಇನ್ನು ಉಸ್ಮಾನ್ ಖ್ವಾಜಾ ಅವರ ಈ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು 2ನೇ ದಿನಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 311 ರನ್ ಕಲೆಹಾಕಿದೆ. ಕ್ರೀಸ್ನಲ್ಲಿ ಉಸ್ಮಾನ್ ಖ್ವಾಜಾ (126) ಹಾಗೂ ಅಲೆಕ್ಸ್ ಕ್ಯಾರಿ (52) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.




