AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾನ್​ದಾರ್ ಶತಕದೊಂದಿಗೆ ಹೊಸ ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್

Australia vs England, 5th Test: ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಟೀವ್ ಸ್ಮಿತ್ (129) ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡವು ಮೂರನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 518 ರನ್ ಕಲೆಹಾಕಿದ್ದು, ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ 134 ರನ್​ಗಳ ಮುನ್ನಡೆ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jan 06, 2026 | 2:54 PM

Share
ಸ್ಟೀವ್ ಸ್ಮಿತ್ (Steve Smith) ಟೆಸ್ಟ್ ಕ್ರಿಕೆಟ್​​ನಲ್ಲಿ  37ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಆ್ಯಶಸ್ ಸರಣಿಯಲ್ಲಿ ಸ್ಮಿತ್ ವಿಶೇಷ ಮೈಲಿಗಲ್ಲನ್ನು ದಾಟಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 384 ರನ್​ ಕಲೆಹಾಕಿತು.

1 / 6
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ ಪರ ಸ್ಟೀವ್ ಸ್ಮಿತ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆರಂಭದಿಂದಲೇ ಕಲಾತ್ಮಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದ ಸ್ಮಿತ್ 166 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಆ್ಯಶಸ್ ಸರಣಿ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡರು.

2 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಆಸ್ಟ್ರೇಲಿಯನ್ ಲೆಜೆಂಡ್ ಡಾನ್ ಬ್ರಾಡ್ಮನ್. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 63 ಇನಿಂಗ್ಸ್ ಆಡಿರುವ ಡಾನ್ ಬ್ರಾಡ್ಮನ್ ಒಟ್ಟು 19 ಶತಕ ಬಾರಿಸಿದ್ದಾರೆ. ಇದೀಗ 73 ಇನಿಂಗ್ಸ್​ಗಳಲ್ಲಿ 13 ಸೆಂಚುರಿ ಸಿಡಿಸಿ ಸ್ಟೀವ್ ಸ್ಮಿತ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

3 / 6
ಅಷ್ಟೇ ಅಲ್ಲದೆ ಈ ಶತಕದೊಂದಿಗೆ ಸ್ಟೀವ್ ಸ್ಮಿತ್ ಆ್ಯಶಸ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟ್ಸ್​​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಇಂಗ್ಲೆಂಡ್​ನ ಬ್ಯಾಟರ್ ಜಾಕ್ ಹಾಬ್ಸ್ ಎರಡನೇ ಸ್ಥಾನದಲ್ಲಿದ್ದರು.

4 / 6
ಇಂಗ್ಲೆಂಡ್ ಪರ 41 ಆ್ಯಶಸ್ ಟೆಸ್ಟ್ ಪಂದ್ಯವಾಡಿರುವ ಜಾಕ್ ಹಾಬ್ಸ್ 71 ಇನಿಂಗ್ಸ್​ಗಳ ಮೂಲಕ 12 ಶತಕದೊಂದಿಗೆ ಒಟ್ಟು 3636 ರನ್ ಕಲೆಹಾಕಿದ್ದರು. ಈ ಮೂಲಕ ಆ್ಯಶಸ್ ಸರಣಿಯಲ್ಲಿ ಡಾನ್ ಬ್ರಾಡ್ಮನ್ (5028) ಬಳಿಕ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು.

5 / 6
ಇದೀಗ ಜಾಕ್ ಹಾಬ್ಸ್ ಅವರನ್ನು ಹಿಂದಿಕ್ಕಿ ಸ್ಟೀವ್ ಸ್ಮಿತ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಸ್ಮಿತ್ ಆ್ಯಶಸ್ ಸರಣಿಯಲ್ಲಿ ಆಡಿದ 73 ಇನಿಂಗ್ಸ್​ಗಳೊಂದಿಗೆ ​ 3660* ರನ್ ಕಲೆಹಾಕಿದ್ದಾರೆ. ಈ ಮೂಲಕ ಪ್ರತಿಷ್ಠಿತ ಟೆಸ್ಟ್ ಸರಣಿಯಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಎರಡನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6