ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಈಗಾಗಲೇ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಜೋಶ್ ಹ್ಯಾಝಲ್ವುಡ್ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಈ ಇಬ್ಬರು ಆಟಗಾರರು ತವರಿಗೆ ಮರಳಿದ್ದು, ಹೀಗಾಗಿ ಮುಂದಿನ 2 ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದೀಗ ಅಗರ್ ಕೂಡ ಹೊರನಡೆದಿರುವುದು ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ.