ಹಾಗೆಯೇ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಲು ಬೇಕಿರುವುದು ಕೇವಲ 8 ವಿಕೆಟ್ಗಳು ಮಾತ್ರ. 180 ಟೆಸ್ಟ್ ಇನಿಂಗ್ಸ್ ಆಡಿರುವ ಅಶ್ವಿನ್ 492 ವಿಕೆಟ್ ಪಡೆದಿದ್ದಾರೆ. ಇದೀಗ ಇಂಗ್ಲೆಂಡ್ ವಿರುದ್ಧ ಎಂಟು ವಿಕೆಟ್ ಕಬಳಿಸಿದರೆ, ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಉರುಳಿಸಿದ 2ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ (619) ಅಗ್ರಸ್ಥಾನದಲ್ಲಿದ್ದಾರೆ.