ಶೇನ್ ವಾರ್ನ್ ವಿಶ್ವ ದಾಖಲೆ ಸರಿಗಟ್ಟಿದ ಅಶ್ವಿನ್

Ravichandran Ashwin: ಟೀಮ್ ಇಂಡಿಯಾ ಪರ 191 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ರವಿಚಂದ್ರನ್ ಅಶ್ವಿನ್ ಈವರೆಗೆ ಒಟ್ಟು 26370 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 37 ಬಾರಿ 5 ವಿಕೆಟ್​ಗಳ ಸಾಧನೆಯೊಂದಿಗೆ ಒಟ್ಟು 522 ವಿಕೆಟ್ ಕಬಳಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 22, 2024 | 1:06 PM

ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ 6 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದ ಅಶ್ವಿನ್ ದ್ವಿತೀಯ ಇನಿಂಗ್ಸ್​ನಲ್ಲಿ 21 ಓವರ್‌ಗಳಲ್ಲಿ 88 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ. ಈ ಆರು ವಿಕೆಟ್‌ಗಳೊಂದಿಗೆ ಟೀಮ್ ಇಂಡಿಯಾ ಸ್ಪಿನ್ನರ್ ಲೆಜೆಂಡ್‌ ಶೇನ್ ವಾರ್ನ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 5
ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಪಡೆದ 2ನೇ ಬೌಲರ್ ಎಂಬ ವಿಶ್ವ ದಾಖಲೆ ಆಸ್ಟ್ರೇಲಿಯಾದ ಮಾಜಿ ದಂತಕಥೆ ಶೇನ್ ವಾರ್ನ್ ಹೆಸರಿನಲ್ಲಿತ್ತು. 145 ಟೆಸ್ಟ್ ಪಂದ್ಯಗಳ 273 ಇನಿಂಗ್ಸ್ ಗಳಲ್ಲಿ ಬೌಲಿಂಗ್ ಮಾಡಿರುವ ವಾರ್ನ್ ಒಟ್ಟು 37 ಬಾರಿ 5 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟೆಸ್ಟ್​ನಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಪಡೆದ ವಿಶ್ವದ 2ನೇ ಬೌಲರ್ ಎನಿಸಿಕೊಂಡಿದ್ದರು.

2 / 5
ಇದೀಗ ಬಾಂಗ್ಲಾ ವಿರುದ್ದ 6 ವಿಕೆಟ್ ಕಬಳಿಸಿ ಅಶ್ವಿನ್ ವಾರ್ನ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ. 101 ಟೆಸ್ಟ್ ಪಂದ್ಯಗಳ 191 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅಶ್ವಿನ್ 37 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್‌ನಲ್ಲಿ ಅತ್ಯಧಿಕ ಬಾರಿ ಐದು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

3 / 5
ಈ ವಿಶ್ವ ದಾಖಲೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್. ಲಂಕಾ ಲೆಜೆಂಡ್ 133 ಟೆಸ್ಟ್ ಪಂದ್ಯಗಳ 230 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದು, ಈ ವೇಳೆ ಒಟ್ಟು 67 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ ಐತಿಹಾಸಿಕ ದಾಖಲೆ ಬರೆದಿಟ್ಟಿದ್ದಾರೆ.

4 / 5
ಸದ್ಯ 37 ಐದು ವಿಕೆಟ್‌ಗಳ ಗುಚ್ಛದೊಂದಿಗೆ ರವಿಚಂದ್ರನ್ ಅಶ್ವಿನ್ ಟೆಸ್ಟ್‌ನಲ್ಲಿ ಒಟ್ಟು 522 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ 550 ವಿಕೆಟ್‌ಗಳತ್ತ ದಾಪುಗಾಲಿಟ್ಟಿರುವ ಟೀಮ್ ಇಂಡಿಯಾ ಸ್ಪಿನ್ನರ್ ಕಡೆಯಿಂದ ಮುಂಬರುವ ಪಂದ್ಯಗಳಲ್ಲಿ ಮತ್ತಷ್ಟು ದಾಖಲೆಗಳನ್ನು ನಿರೀಕ್ಷಿಸಬಹುದು.

5 / 5
Follow us
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ

Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ

ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್

ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್

ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು

ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?

Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು

ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ