Ashwin: ಒಂದೇ ಒಂದು ವಿಕೆಟ್ ಪಡೆದ್ರೆ ಹೊಸ ಇತಿಹಾಸ ನಿರ್ಮಾಣ
TV9 Web | Updated By: ಝಾಹಿರ್ ಯೂಸುಫ್
Updated on:
Feb 12, 2024 | 1:04 PM
India vs England 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಒಂದು ವಿಕೆಟ್ ಪಡೆದರೆ ರವಿಚಂದ್ರನ್ ಅಶ್ವಿನ್ ಹೆಸರಿಗೆ ಹೊಸ ದಾಖಲೆ ನಿರ್ಮಾಣವಾಗಲಿದೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 10ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.
1 / 5
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (R. Ashwin) ಒಂದು ವಿಕೆಟ್ ಪಡೆದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅದು ಕೂಡ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
2 / 5
ಅಂದರೆ ಟೆಸ್ಟ್ ಕ್ರಿಕೆಟ್ನಲ್ಲಿ 500+ ವಿಕೆಟ್ಗಳನ್ನು ಕಬಳಿಸಿದ ಏಕೈಕ ಭಾರತೀಯ ಬೌಲರ್ ಎಂಬ ದಾಖಲೆ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿದೆ. ಕುಂಬ್ಳೆ 132 ಟೆಸ್ಟ್ ಪಂದ್ಯಗಳಿಂದ ಒಟ್ಟು 619 ವಿಕೆಟ್ಗಳನ್ನು ಕಬಳಿಸಿದ್ದಾರೆ.
3 / 5
ಇದೀಗ 500 ವಿಕೆಟ್ಗಳ ಸಾಧನೆ ಮಾಡಲು ಅಶ್ವಿನ್ಗೆ ಬೇಕಿರುವುದು ಕೇವಲ ಒಂದು ವಿಕೆಟ್ ಮಾತ್ರ. ಅಂದರೆ ಟೀಮ್ ಇಂಡಿಯಾ ಪರ ಈಗಾಗಲೇ 97 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 499 ವಿಕೆಟ್ಗಳನ್ನು ಕಬಳಿಸಿದ್ದಾರೆ. ರಾಜ್ಕೋಟ್ ಟೆಸ್ಟ್ನಲ್ಲಿ ಒಂದು ವಿಕೆಟ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪಡೆದ 2ನೇ ಭಾರತೀಯ ಎನಿಸಿಕೊಳ್ಳಬಹುದು.
4 / 5
ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 10ನೇ ಬೌಲರ್ ಎಂಬ ಹೆಗ್ಗಳಿಕೆಗೂ ರವಿಚಂದ್ರನ್ ಅಶ್ವಿನ್ ಪಾತ್ರರಾಗಲಿದ್ದಾರೆ. ಹೀಗಾಗಿ ಫೆಬ್ರವರಿ 15 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಕಡೆಯಿಂದ ಹೊಸ ದಾಖಲೆಯನ್ನು ನಿರೀಕ್ಷಿಸಬಹುದು.
5 / 5
ಇನ್ನು ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆ ಇರುವುದು ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿ. 133 ಟೆಸ್ಟ್ ಪಂದ್ಯಗಳಿಂದ 800 ವಿಕೆಟ್ ಕಬಳಿಸಿ ಮುರಳೀದರನ್ ವಿಶ್ವ ದಾಖಲೆ ನಿರ್ಮಿಸಿಟ್ಟಿದ್ದಾರೆ.