Updated on: Sep 04, 2022 | 10:47 AM
ಏಷ್ಯಾಕಪ್ 2022ರಲ್ಲಿ ಸೂಪರ್ 4 ಹಂತದ ಪಂದ್ಯಗಳು ಆರಂಭವಾಗಿದ್ದು ಇಂದು ಭಾರತ ಹಾಗೂ ಪಾಕಿಸ್ತಾನ ತಂಡ ಮುಖಾಮುಖಿ ಆಗಲಿದೆ. ಈ ಬಾರಿಯ ಏಷ್ಯಾಕಪ್ ನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಅಮೋಘ ಗೆಲುವು ಕಂಡಿರುವ ಟೀಮ್ ಇಂಡಿಯಾ ಜಯದ ನಾಗಾಲೋಟವನ್ನು ಮುಂದುವರೆಸುವ ತವಕದಲ್ಲಿದೆ. ಇದಕ್ಕಾಗಿ ರೋಹಿತ್ ಪಡೆ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 3 ಸಿಕ್ಸರ್ ಸಿಡಿಸಿದರೆ ವಿಶೇಷ ಶತಕದ ದಾಖಲೆ ನಿರ್ಮಾಣವಾಗಲಿದೆ. ಕೊಹ್ಲಿ ಬ್ಯಾಟ್ ನಿಂದ ಇಂದು ಮೂರು ಸಿಕ್ಸ್ ಬಂದರೆ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 100 ಸಿಕ್ಸರ್ ಬಾರಿಸಿದ ಸಾಧನೆ ಮಾಡಲಿದ್ದಾರೆ.
ಲೀಗ್ ಹಂತದ ಪಂದ್ಯಗಳಲ್ಲಿ ಭಾರತ-ಪಾಕ್ ಮುಖಾಮುಖಿ ಆಗಿತ್ತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಭರ್ಜರಿ ಆಲ್ರೌಂಡ್ ಪ್ರದರ್ಶನ ನೀಡಿದ್ದರು. ಹಾಂಗ್ ಕಾಂಗ್ ವಿರುದ್ಧ ಸೂರ್ಯಕುಮಾರ್ ಯಾದವ್ ಅಬ್ಬರಿಸಿದ್ದರು. ಇವರಿಬ್ಬರ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
ಅಭ್ಯಾಸದಲ್ಲಿ ನಿರತರಾಗಿರುವ ರಿಷಭ್ ಪಂತ್.
ವಿಕೆಟ್ ಕೀಪಿಂಗ್ ಅಭ್ಯಾಸ ನಡೆಸುತ್ತಿರುವ ದಿನೇಶ್ ಕಾರ್ತಿಕ್.
ಟೀಮ್ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಆಗಲೇಬೇಕಿದೆ. ವೇಗಿಗಳ ಪೈಕಿ ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಬಿಟ್ಟರೆ ಮತ್ಯಾರು ಮಾರಕ ದಾಳಿ ಸಂಘಟಿಸುತ್ತಿಲ್ಲ.
ಅರ್ಶ್ದೀಪ್ ಸಿಂಗ್ ಹಾಗೂ ಆವೇಶ್ ಖಾನ್ ದುಬಾರಿಯಾಗುತ್ತಿದ್ದಾರೆ. ವಿಕೆಟ್ ಕೂಡ ಪಡೆದುಕೊಳ್ಳುತ್ತಿಲ್ಲ. ಯುಜ್ವೇಂದ್ರ ಚಹಲ್ ರನ್ ಹರಿ ಬಿಡದಿದ್ದರೂ ವಿಕೆಟ್ ಪಡೆಯಲು ವಿಫಲರಾಗುತ್ತಿದ್ದಾರೆ. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ.
ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7:30ಕ್ಕೆ ಶುರುವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಹಾಟ್ ಸ್ಟಾರ್‌ನಲ್ಲಿ ನೇರ ಪ್ರಸಾರವಾಗಲಿದೆ. ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದ ಪಿಚ್ ಸಮಯೋಜಿತವಾಗಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ.
ಬೌಲಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ರವಿ ಬಿಷ್ಟೋಯ್
Published On - 10:47 am, Sun, 4 September 22