Updated on: Sep 01, 2022 | 11:24 AM
ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 13 ಎಸೆತಗಳಲ್ಲಿ 21 ರನ್ ಬಾರಿಸುವ ಮೂಲಕ ಹಿಟ್ಮ್ಯಾನ್, ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವ ದಾಖಲೆಯನ್ನು ಬರೆದರು.
ವಿಶೇಷ ಎಂದರೆ ಟಿ20 ಕ್ರಿಕೆಟ್ನಲ್ಲಿ 3500 ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ನ ಮಾರ್ಟಿನ್ ಗಪ್ಟಿಲ್ 3497 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದರು. ಇದೀಗ ರೋಹಿತ್ ಶರ್ಮಾ 3520 ರನ್ ಕಲೆಹಾಕುವ ಮೂಲಕ ನಂಬರ್ 1 ಸ್ಥಾನಕ್ಕೇರಿದ್ದಾರೆ. ಇದಲ್ಲದೆ...
ಏಷ್ಯಾಕಪ್ ಇತಿಹಾಸದಲ್ಲೇ ಅತ್ಯಧಿಕ ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನೂ ಕೂಡ ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು.
ಮಹೇಲ ಜಯವರ್ಧನೆ ಏಷ್ಯಾಕಪ್ನಲ್ಲಿ ಒಟ್ಟು 28 ಪಂದ್ಯಗಳನ್ನಾಡುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಶ್ರೀಲಂಕಾದ ಮಾಜಿ ಆಟಗಾರನ ದಾಖಲೆಯನ್ನು ಹಿಂದಿಕ್ಕಿದ್ದಾರೆ.
2008 ರಿಂದ ಏಷ್ಯಾಕಪ್ ಆಡುತ್ತಿರುವ ಹಿಟ್ಮ್ಯಾನ್ ಇದುವರೆಗೆ 29 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಏಷ್ಯಾಕಪ್ ಇತಿಹಾಸದಲ್ಲೇ ಅತ್ಯಧಿಕ ಪಂದ್ಯವಾಡಿದ ಆಟಗಾರ ಎನಿಸಿಕೊಂಡಿದ್ದಾರೆ.
ಇನ್ನು ಈ 29 ಪಂದ್ಯಗಳಲ್ಲಿ 27 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ 40.68 ಸರಾಸರಿಯಲ್ಲಿ 895 ರನ್ ಗಳಿಸಿದ್ದಾರೆ. ಈ ವೇಳೆ ಒಂದು ಶತಕವನ್ನೂ ಕೂಡ ಸಿಡಿಸಿದ್ದರು ಎಂಬುದು ವಿಶೇಷ.