Rohit Sharma: ಏಷ್ಯಾಕಪ್ನಲ್ಲಿ ಹೊಸ ಇತಿಹಾಸ ಬರೆದ ಹಿಟ್ಮ್ಯಾನ್
TV9 Web | Updated By: ಝಾಹಿರ್ ಯೂಸುಫ್
Updated on:
Sep 01, 2022 | 11:24 AM
Asia Cup 2022: ಈ ಹಿಂದೆ ನ್ಯೂಜಿಲೆಂಡ್ನ ಮಾರ್ಟಿನ್ ಗಪ್ಟಿಲ್ 3497 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದರು. ಇದೀಗ ರೋಹಿತ್ ಶರ್ಮಾ 3520 ರನ್ ಕಲೆಹಾಕುವ ಮೂಲಕ ನಂಬರ್ 1 ಸ್ಥಾನಕ್ಕೇರಿದ್ದಾರೆ. ಇದಲ್ಲದೆ...
1 / 6
ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 13 ಎಸೆತಗಳಲ್ಲಿ 21 ರನ್ ಬಾರಿಸುವ ಮೂಲಕ ಹಿಟ್ಮ್ಯಾನ್, ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವ ದಾಖಲೆಯನ್ನು ಬರೆದರು.
2 / 6
ವಿಶೇಷ ಎಂದರೆ ಟಿ20 ಕ್ರಿಕೆಟ್ನಲ್ಲಿ 3500 ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ನ ಮಾರ್ಟಿನ್ ಗಪ್ಟಿಲ್ 3497 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದರು. ಇದೀಗ ರೋಹಿತ್ ಶರ್ಮಾ 3520 ರನ್ ಕಲೆಹಾಕುವ ಮೂಲಕ ನಂಬರ್ 1 ಸ್ಥಾನಕ್ಕೇರಿದ್ದಾರೆ. ಇದಲ್ಲದೆ...
3 / 6
ಏಷ್ಯಾಕಪ್ ಇತಿಹಾಸದಲ್ಲೇ ಅತ್ಯಧಿಕ ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನೂ ಕೂಡ ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು.
4 / 6
ಮಹೇಲ ಜಯವರ್ಧನೆ ಏಷ್ಯಾಕಪ್ನಲ್ಲಿ ಒಟ್ಟು 28 ಪಂದ್ಯಗಳನ್ನಾಡುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಶ್ರೀಲಂಕಾದ ಮಾಜಿ ಆಟಗಾರನ ದಾಖಲೆಯನ್ನು ಹಿಂದಿಕ್ಕಿದ್ದಾರೆ.
5 / 6
2008 ರಿಂದ ಏಷ್ಯಾಕಪ್ ಆಡುತ್ತಿರುವ ಹಿಟ್ಮ್ಯಾನ್ ಇದುವರೆಗೆ 29 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಏಷ್ಯಾಕಪ್ ಇತಿಹಾಸದಲ್ಲೇ ಅತ್ಯಧಿಕ ಪಂದ್ಯವಾಡಿದ ಆಟಗಾರ ಎನಿಸಿಕೊಂಡಿದ್ದಾರೆ.
6 / 6
ಇನ್ನು ಈ 29 ಪಂದ್ಯಗಳಲ್ಲಿ 27 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ 40.68 ಸರಾಸರಿಯಲ್ಲಿ 895 ರನ್ ಗಳಿಸಿದ್ದಾರೆ. ಈ ವೇಳೆ ಒಂದು ಶತಕವನ್ನೂ ಕೂಡ ಸಿಡಿಸಿದ್ದರು ಎಂಬುದು ವಿಶೇಷ.