ಇದೀಗ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವ ಪ್ರಕಾರ ರಾಹುಲ್ ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಕೂಡ ಏಷ್ಯಾಕಪ್ನಲ್ಲಿ ಆಡುವುದು ಅನುಮಾನ ಎನ್ನಲಾಗಿದೆ. ವಾಸ್ತವವಾಗಿ, ಈ ವರ್ಷದ ಆರಂಭದಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಬೆನ್ನಿನ ನೋವಿಗೆ ತುತ್ತಾಗಿದ್ದ ಅಯ್ಯರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಗಾಯದಿಂದಾಗಿ, ಅಯ್ಯರ್‌ಗೆ ಐಪಿಎಲ್ ಅಥವಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಡಲಾಗಲಿಲ್ಲ.