Asia Cup 2023 Schedule: ಏಷ್ಯಾಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
Asia Cup 2023 Schedule: 6 ತಂಡಗಳನ್ನು 2 ಗ್ರೂಪ್ಗಳಲ್ಲಿ ವಿಂಗಡಿಸಲಾಗಿದ್ದು, ಗ್ರೂಪ್-ಎ ನಲ್ಲಿ ಭಾರತ, ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳಿವೆ. ಹಾಗೆಯೇ ಗ್ರೂಪ್-ಬಿ ನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ತಂಡಗಳಿವೆ.
Updated on:Aug 29, 2023 | 4:25 PM

Asia Cup 2023 Schedule: ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿ ಬುಧವಾರದಿಂದ (ಆಗಸ್ಟ್ 30) ಶುರುವಾಗಲಿದೆ. ಈ ಬಾರಿಯ ಏಷ್ಯಾಕಪ್ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿದ್ದು, ಪಾಕಿಸ್ತಾನ್ ಹಾಗೂ ಶ್ರೀಲಂಕಾ ಜಂಟಿಯಾಗಿ ಪಂದ್ಯಗಳನ್ನು ಆಯೋಜಿಸಲಿದೆ. ಅದರಂತೆ ಮುಲ್ತಾನ್ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ.

ಇನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯಕ್ಕೆ ಶ್ರೀಲಂಕಾದ ಕ್ಯಾಂಡಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಇಲ್ಲಿ 6 ತಂಡಗಳನ್ನು 2 ಗ್ರೂಪ್ಗಳಲ್ಲಿ ವಿಂಗಡಿಸಲಾಗಿದ್ದು, ಗ್ರೂಪ್-ಎ ನಲ್ಲಿ ಭಾರತ, ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳಿವೆ. ಹಾಗೆಯೇ ಗ್ರೂಪ್-ಬಿ ನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ತಂಡಗಳಿವೆ.

ಇನ್ನು ಪ್ರತಿ ಗ್ರೂಪ್ನಿಂದ ಎರಡು ತಂಡಗಳು ಸೂಪರ್-4 ಹಂತಕ್ಕೇರಲಿದ್ದು, ಸೂಪರ್ ಫೋರ್ ಸುತ್ತಿನಲ್ಲಿ 4 ತಂಡಗಳು ಸೆಣಸಲಿದೆ. ಅಲ್ಲದೆ ಸೂಪರ್-4 ಪಾಯಿಂಟ್ಸ್ ಟೇಬಲ್ನಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಫೈನಲ್ ಆಡಲಿದೆ.

ಆಗಸ್ಟ್ 30 ರಿಂದ ಶುರುವಾಗಲಿರುವ ಟೂರ್ನಿಯ ಮೊದಲ ಸುತ್ತಿನಲ್ಲಿ ಒಟ್ಟು 6 ಪಂದ್ಯಗಳು ನಡೆಯಲಿದೆ. ಇದಾದ ಬಳಿಕ ಸೂಪರ್ ಫೋರ್ ಹಂತದ ಪಂದ್ಯಗಳು ಶುರುವಾಗಲಿದೆ.

ಸೂಪರ್-4 ಹಂತದಲ್ಲಿ ಒಟ್ಟು 6 ಪಂದ್ಯಗಳು ಜರುಗಲಿದ್ದು, ಸೆಪ್ಟೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಏಷ್ಯಾಕಪ್ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).
Published On - 4:21 pm, Tue, 29 August 23
























