ಏಷ್ಯಾಕಪ್ 2023 ರಲ್ಲಿ ಇಂದು ಯಾವುದೇ ಪಂದ್ಯ ಆಯೋಜಿಸಿಲ್ಲ: ಯಾಕೆ ಗೊತ್ತೇ?

Asia Cup 2023: ಏಷ್ಯಾಕಪ್​ನಲ್ಲಿ ಇಂದು (ಸೆಪ್ಟೆಂಬರ್ 8) ಪಂದ್ಯವನ್ನು ಆಯೋಜಿಸಲಾಗಿಲ್ಲ. ಸೆಪ್ಟೆಂಬರ್ 9ಕ್ಕೆ ಏಷ್ಯಾಕಪ್​ನ ಸೂಪರ್-4 ಹಂತದ ಪಂದ್ಯದಲ್ಲಿ ಶ್ರೀಲಂಕಾ-ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

Vinay Bhat
|

Updated on: Sep 08, 2023 | 8:44 AM

ಏಷ್ಯಾಕಪ್ 2023 (Asia Cup 2023) ಟೂರ್ನಿಯಲ್ಲಿ ಸೂಪರ್-4 ಹಂತದ ಪಂದ್ಯಗಳಿಗೆ ಈಗಾಗಲೇ ಚಾಲನೆ ಸಿಕ್ಕಾಗಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ ಭರ್ಜರಿ ಗೆಲುವು ಕಾಣುವ ತನ್ನ ಫಾರ್ಮ್ ಮುಂದುವರೆಸಿತು. ಆದರೆ, ಏಷ್ಯಾಕಪ್​ನಲ್ಲಿ ಇಂದು (ಸೆಪ್ಟೆಂಬರ್ 8) ಪಂದ್ಯವನ್ನು ಆಯೋಜಿಸಲಾಗಿಲ್ಲ. ಯಾವುದೇ ಪಂದ್ಯ ಏಷ್ಯಾಕಪ್​ನಲ್ಲಿ ಶುಕ್ರವಾರ ನಡೆಯುತ್ತಿಲ್ಲ. ಇದಕ್ಕೆ ಕಾರಣವಿದೆ.

1 / 7
ಏಷ್ಯಾಕಪ್‌ನ ಸೂಪರ್-4 ಹಂತದಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸುತ್ತಿವೆ. ಶ್ರೀಲಂಕಾ, ಪಾಕಿಸ್ತಾನ, ಭಾರತ ಹಾಗೂ ಬಾಂಗ್ಲಾದೇಶ. ಇದರಲ್ಲಿ ಬುಧವಾರ ನಡೆದ ಮೊದಲ ಪಂದ್ಯವನ್ನು ಪಾಕಿಸ್ತಾನದಲ್ಲಿ ಆಯೋಜಿಸಲಾಗಿತ್ತು. ಆದರೆ, ವೇಳಾಪಟ್ಟಿಯ ಪ್ರಕಾರ ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ.

2 / 7
ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮ್ಯಾಚ್ ಇರುವುದು ಶ್ರೀಲಂಕಾದಲ್ಲಿ. ಬಾಂಗ್ಲಾ ತಂಡ ಪಾಕ್​ನಿಂದ ಲಂಕಾಕಕ್ಕೆ ತೆರಳಲು ಸಮಯ ಬೇಕಿದೆ. ಹೀಗಾಗಿ ಪ್ರಯಾಣಕ್ಕಾಗಿ ಮತ್ತು ವಿಶ್ರಾಂತಿಗಾಗಿ ಎಂದು ಏಷ್ಯಾಕಪ್​ನಲ್ಲಿ ಇಂದು ಯಾವುದೇ ಪಂದ್ಯವನ್ನು ಆಯೋಜಿಸಲಾಗಿಲ್ಲ.

3 / 7
ಸೆಪ್ಟೆಂಬರ್ 9ಕ್ಕೆ ಏಷ್ಯಾಕಪ್​ನ ಸೂಪರ್-4 ಹಂತದ ಪಂದ್ಯದಲ್ಲಿ ಶ್ರೀಲಂಕಾ-ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಸೋತ ಬಾಂಗ್ಲಾಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

4 / 7
ಸೂಪರ್ -4 ನಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯ ಸೆಪ್ಟೆಂಬರ್ 10 ರಂದು ಆಯೋಜನೆ ಮಾಡಲಾಗಿದ್ದು, ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ.

5 / 7
ಆದರೆ, ಕೊಲಂಬೊದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಎಲ್ಲ ತಂಡಗಳು ಕೊಲಂಬೊಕ್ಕೆ ಬಂದಿದ್ದರೂ ಮೈದಾನದಲ್ಲಿ ಅಭ್ಯಾಸ ನಡೆಸಲು ಸಾಧ್ಯವಾಗುತ್ತಿಲ್ಲ. ಪ್ರ್ಯಾಕ್ಟೀಸ್ ಸೆಷನ್ ಕೈಬಿಡಬಾರದು ಎಂಬ ಕಾರಣಕ್ಕೆ ಟೀಮ್ ಇಂಡಿಯಾ ಆಟಗಾರರು ಕೊಲಂಬೊದಲ್ಲಿ ಒಳಾಂಗಣ ಕ್ರೀಡಾಂಗಣದ ಮೂಲಕ ಅಭ್ಯಾಸ ನಡೆಸಿದರು.

6 / 7
ಏಷ್ಯಾಕಪ್‌ನ ಸೂಪರ್-4 ರೌಂಡ್ ಮತ್ತು ಫೈನಲ್‌ ಪಂದ್ಯಗಳ ಸ್ಥಳಗಳನ್ನು ಬದಲಾಹಿಸುವ ಸಾಧ್ಯತೆಗಳಿವೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದು, ಏಷ್ಯಾಕಪ್ ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದೆ.

7 / 7
Follow us