Ishan Kishan: ಪಾಕ್ ವಿರುದ್ಧ ಅಬ್ಬರಿಸಿ ವಿಶೇಷ ದಾಖಲೆ ಬರೆದ ಇಶಾನ್ ಕಿಶನ್

| Updated By: ಝಾಹಿರ್ ಯೂಸುಫ್

Updated on: Sep 02, 2023 | 7:47 PM

Ishan Kishan vs Pakistan: ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ ಹಾರ್ದಿಕ್ ಪಾಂಡ್ಯ ಜೊತೆಗೂಡಿ ಶತಕದ ಜೊತೆಯಾಟವಾಡಿದರು. ಈ ಶತಕದ ಜೊತೆಯಾಟದೊಂದಿಗೆ ಅರ್ಧಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು.

1 / 7
ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ಇಶಾನ್ ಕಿಶನ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಮಹೇಂದ್ರ ಸಿಂಗ್ ಧೋನಿಯ ಅಪರೂಪದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

2 / 7
ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ ಹಾರ್ದಿಕ್ ಪಾಂಡ್ಯ ಜೊತೆಗೂಡಿ ಶತಕದ ಜೊತೆಯಾಟವಾಡಿದರು. ಈ ಶತಕದ ಜೊತೆಯಾಟದೊಂದಿಗೆ ಅರ್ಧಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು.

3 / 7
ಈ ಹಾಫ್ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಸತತ 4 ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಬ್ಯಾಟರ್ ಎಂಬ ವಿಶೇಷ ದಾಖಲೆ ಇಶಾನ್ ಕಿಶನ್ ಪಾಲಾಯಿತು.

4 / 7
ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಹೆಸರಿನಲ್ಲಿತ್ತು.  2011 ರಲ್ಲಿ 30 ವರ್ಷದ ಧೋನಿ ಸತತ 4 ಅರ್ಧಶತಕಗಳನ್ನು ಬಾರಿಸುವ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೊದಲ ವಿಕೆಟ್ ಕೀಪರ್ ಎನಿಸಿಕೊಂಡಿದ್ದರು.

5 / 7
ಇದೀಗ ತಮ್ಮ 25ನೇ ವಯಸ್ಸಿನಲ್ಲೇ ಇಶಾನ್ ಕಿಶನ್ ಏಕದಿನ ಕ್ರಿಕೆಟ್​ನಲ್ಲಿ ಸತತ 4 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 7
ಇದಕ್ಕೂ ಮುನ್ನ ಇಶಾನ್ ಕಿಶನ್ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ 52, 55 ಹಾಗೂ 77 ರನ್ ಬಾರಿಸಿದ್ದರು. ಇದೀಗ ಏಷ್ಯಾಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ 81 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್​ ಹಾಗೂ 9 ಫೋರ್​ಗಳೊಂದಿಗೆ 82 ರನ್ ಸಿಡಿಸಿದ್ದಾರೆ.

7 / 7
ಈ ಮೂಲಕ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಸತತ 4 ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಮಹೇಂದ್ರ ಸಿಂಗ್ ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಇಶಾನ್ ಕಿಶನ್ ತಮ್ಮದಾಗಿಸಿಕೊಂಡಿದ್ದಾರೆ.