IND vs PAK: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ: ಇಲ್ಲಿದೆ ಪ್ಲೇಯಿಂಗ್ 11
Team India Playing XI: ಏಕದಿನ ಕ್ರಿಕೆಟ್ನಲ್ಲಿ ಕೊನೆಯ ಬಾರಿ ಭಾರತ-ಪಾಕ್ ಮುಖಾಮುಖಿಯಾಗಿರುವುದು 2019 ರಲ್ಲಿ. ಅಂದರೆ ಕಳೆದ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಎದುರು 89 ರನ್ಗಳ ಸೋಲುಂಡ ಬಳಿಕ ಪಾಕಿಸ್ತಾನ್ ತಂಡ 50 ಓವರ್ಗಳ ಪಂದ್ಯದಲ್ಲಿ ಭಾರತ ತಂಡವನ್ನು ಎದುರಿಸಿಲ್ಲ.
Updated on: Sep 02, 2023 | 2:33 PM

ಬಹುನಿರೀಕ್ಷಿತ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯ ಶುರುವಾಗಿದೆ. ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಏಕದಿನ ಕ್ರಿಕೆಟ್ನಲ್ಲಿ ಭಾರತ-ಪಾಕಿಸ್ತಾನ್ ಇದುವರೆಗೆ 132 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಭಾರತ ತಂಡವು ಕೇವಲ 55 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ.

ಮತ್ತೊಂದೆಡೆ ಪಾಕಿಸ್ತಾನ್ ತಂಡವು 73 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಇದಾಗ್ಯೂ ಕೊನೆಯ 5 ಏಕದಿನ ಪಂದ್ಯಗಳಲ್ಲಿ ಭಾರತ ತಂಡವು 4 ಬಾರಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇನ್ನು ಏಕದಿನ ಕ್ರಿಕೆಟ್ನಲ್ಲಿ ಕೊನೆಯ ಬಾರಿ ಭಾರತ-ಪಾಕ್ ಮುಖಾಮುಖಿಯಾಗಿರುವುದು 2019 ರಲ್ಲಿ. ಅಂದರೆ ಕಳೆದ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಎದುರು 89 ರನ್ಗಳ ಸೋಲುಂಡ ಬಳಿಕ ಪಾಕಿಸ್ತಾನ್ ತಂಡ 50 ಓವರ್ಗಳ ಪಂದ್ಯದಲ್ಲಿ ಭಾರತ ತಂಡವನ್ನು ಎದುರಿಸಿಲ್ಲ. ಇದೀಗ ಮೂರು ವರ್ಷಗಳ ಉಭಯ ತಂಡಗಳ ಮುಖಾಮುಖಿಯಾಗುತ್ತಿರುವುದು ವಿಶೇಷ.

ಇದೀಗ ಮೂರು ವರ್ಷಗಳ ಉಭಯ ತಂಡಗಳ ಮುಖಾಮುಖಿಯಾಗುತ್ತಿರುವುದು ವಿಶೇಷ. ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ಪಾಕಿಸ್ತಾನ್ ಪ್ಲೇಯಿಂಗ್ 11: ಫಖರ್ ಝಮಾನ್, ಇಮಾಮ್-ಉಲ್-ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.



















