- Kannada News Photo gallery Cricket photos Asia Cup 2023 Ravindra Jadeja claims 200th ODI wicket joins legendary all-rounder for this feat
IND vs BAN: ಏಕದಿನದಲ್ಲಿ 200 ವಿಕೆಟ್ ಪೂರೈಸಿದ ಜಡೇಜಾ; ಈ ಸಾಧನೆ ಮಾಡಿದ 7ನೇ ಭಾರತೀಯ
Ravindra Jadeja: ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ಬಾಂಗ್ಲಾದೇಶದ ಶಮೀಮ್ ಹುಸೇನ್ ಅವರನ್ನು ಔಟ್ ಮಾಡುವ ಮೂಲಕ ಏಕದಿನ ಕ್ರಿಕೆಟ್ನಲ್ಲಿ 200 ವಿಕೆಟ್ ಪಡೆದ ದಾಖಲೆ ಬರೆದರು. ಇದರೊಂದಿಗೆ ಜಡೇಜಾ ಏಕದಿನದಲ್ಲಿ 200 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಏಳನೇ ಭಾರತೀಯ ಬೌಲರ್ ಎನಿಸಿಕೊಂಡರು.
Updated on: Sep 16, 2023 | 6:13 AM

ಬಾಂಗ್ಲಾದೇಶ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ರೋಹಿತ್ ಪಡೆ 6 ರನ್ಗಳ ಸೋಲುಂಡಿದೆ. ಆದರೆ ಈ ಪಂದ್ಯದಲ್ಲಿ ಏಕೈಕ ವಿಕೆಟ್ ಪಡೆದ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಏಕದಿನ ಕ್ರಿಕೆಟ್ನಲ್ಲಿ ವಿಶೇಷ ಮೈಲಿಗಲ್ಲನ್ನು ಸ್ಥಾಪಿಸಿದರು.

ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ಬಾಂಗ್ಲಾದೇಶದ ಶಮೀಮ್ ಹುಸೇನ್ ಅವರನ್ನು ಔಟ್ ಮಾಡುವ ಮೂಲಕ ಏಕದಿನ ಕ್ರಿಕೆಟ್ನಲ್ಲಿ 200 ವಿಕೆಟ್ ಪಡೆದ ದಾಖಲೆ ಬರೆದರು. ಇದರೊಂದಿಗೆ ಜಡೇಜಾ ಏಕದಿನದಲ್ಲಿ 200 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಏಳನೇ ಭಾರತೀಯ ಬೌಲರ್ ಎನಿಸಿಕೊಂಡರು.

ಜಡೇಜಾ ಅವರಿಗೂ ಮೊದಲು ಕಪಿಲ್ ದೇವ್, ಅನಿಲ್ ಕುಂಬ್ಳೆ, ಜವಗಲ್ ಶ್ರೀನಾಥ್, ಅಜಿತ್ ಅಗರ್ಕರ್, ಜಹೀರ್ ಖಾನ್ ಮತ್ತು ಹರ್ಭಜನ್ ಸಿಂಗ್ 200 ಕ್ಕೂ ಹೆಚ್ಚು ಏಕದಿನ ವಿಕೆಟ್ ಪಡೆದು ಭಾರತೀಯರೆನಿಸಿಕೊಂಡಿದ್ದಾರೆ.

ಅನಿಲ್ ಕುಂಬ್ಳೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಎನಿಸಿಕೊಂಡಿದ್ದು, ಜಂಬೋ ಖ್ಯಾತಿಯ ಅನಿಲ್ ಕುಂಬ್ಳೆ 334 ವಿಕೆಟ್ ಪಡೆದು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ.

ಕುಂಬ್ಳೆ ಬಳಿಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಕನ್ನಡಿಗ ಜಾವಗಲ್ ಶ್ರೀನಾಥ್ 315 ಏಕದಿನ ವಿಕೆಟ್ ಪಡೆದಿದ್ದಾರೆ.

ಪ್ರಸ್ತುತ ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ 288 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಜಹೀರ್ ಖಾನ್ ಮತ್ತು ಹರ್ಭಜನ್ ಸಿಂಗ್ ಕ್ರಮವಾಗಿ 269 ಮತ್ತು 265 ವಿಕೆಟ್‌ಗಳೊಂದಿಗೆ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದರೆ, ಕಪಿಲ್ ದೇವ್ ಏಕದಿನದಲ್ಲಿ 253 ವಿಕೆಟ್ ಪಡೆದಿದ್ದಾರೆ.




