- Kannada News Photo gallery Cricket photos Asia Cup 2023 Rohit Sharma equals Virat Kohli’s unwanted record
ಶೂನ್ಯ ಸುತ್ತುವುದರಲ್ಲಿ ವಿರಾಟ್ ಕೊಹ್ಲಿಯನ್ನು ಸರಿಗಟ್ಟಿದ ರೋಹಿತ್ ಶರ್ಮಾ..!
Rohit Sharma: ತಂಡದ ಕಳಪೆ ಫಿಲ್ಡಿಂಗ್ ಹಾಗೂ ಕಳಪೆ ಬ್ಯಾಟಿಂಗ್ನಿಂದಾಗಿ ಟೀಂ ಇಂಡಿಯಾ, ಬಾಂಗ್ಲಾದೇಶದ ವಿರುದ್ಧ ಸೋಲನುಭವಿಸಿದೆ. ಇನ್ನು ಈ ಪಂದ್ಯದಲ್ಲಿ ಕೇವಲ ಎರಡು ಎಸೆತಗಳನ್ನು ಎದುರಿಸಿ ಯಾವುದೇ ರನ್ ಬಾರಿಸದೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ ನಾಯಕ ರೋಹಿತ್ ಶರ್ಮಾ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ.
Updated on: Sep 16, 2023 | 9:13 AM

ತಂಡದ ಕಳಪೆ ಫಿಲ್ಡಿಂಗ್ ಹಾಗೂ ಕಳಪೆ ಬ್ಯಾಟಿಂಗ್ನಿಂದಾಗಿ ಟೀಂ ಇಂಡಿಯಾ, ಬಾಂಗ್ಲಾದೇಶದ ವಿರುದ್ಧ ಸೋಲನುಭವಿಸಿದೆ. ಇನ್ನು ಈ ಪಂದ್ಯದಲ್ಲಿ ಕೇವಲ ಎರಡು ಎಸೆತಗಳನ್ನು ಎದುರಿಸಿ ಯಾವುದೇ ರನ್ ಬಾರಿಸದೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ ನಾಯಕ ರೋಹಿತ್ ಶರ್ಮಾ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ.

ವಾಸ್ತವವಾಗಿ ಏಷ್ಯಾಕಪ್ನಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸಿ ತಂಡದ ಪರ ಅದ್ಭುತ ಪ್ರದರ್ಶನ ನೀಡಿದ್ದ ರೋಹಿತ್, ಬಾಂಗ್ಲಾ ವಿರುದ್ಧ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ಮೂಲಕ ರೋಹಿತ್ ಏಕದಿನ ಕ್ರಿಕೆಟ್‌ನಲ್ಲಿ 15ನೇ ಬಾರಿಗೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ ಬೇಡದ ದಾಖಲೆ ನಿರ್ಮಿಸಿದ್ದಾರೆ.

ಮೇಲೆ ಹೇಳಿದಂತ ಇದು ಏಕದಿನ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ 15 ನೇ ಡಕೌಟ್ ಆಗಿದ್ದು, ಈ ಮೂಲಕ ರೋಹಿತ್, ಈ ಬೇಡದ ದಾಖಲೆಯಲ್ಲಿ ವಿರಾಟ್ ಕೊಹ್ಲಿ ಎಷ್ಟು ಅವರನ್ನು ಸರಿಗಟ್ಟಿದ್ದಾರೆ.

ಈ ಹಿಂದೆ ಟೀಂ ಇಂಡಿಯಾದ ನಾಯಕನಾಗಿದ್ದ ವಿರಾಟ್ ಕೊಹ್ಲಿ ಇದುವರೆಗೆ ಆಡಿರುವ 268 ಏಕದಿನ ಇನ್ನಿಂಗ್ಸ್‌ಗಳಲ್ಲಿ 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

ಇನ್ನು ಏಕದಿನ ಕ್ರಿಕೆಟ್‌ನಲ್ಲಿ 242 ಇನ್ನಿಂಗ್ಸ್‌ಗಳನ್ನಾಡಿರುವ ರೋಹಿತ್ ಶರ್ಮಾ ಇದುವರೆಗೆ 15 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.

ಈ ವಿಚಾರದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, ಸಚಿನ್ ತಮ್ಮ ವೃತ್ತಿಜೀವನದಲ್ಲಿ 452 ಏಕದಿನ ಇನ್ನಿಂಗ್ಸ್‌ಗಳಲ್ಲಿ 20 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

ನಾಯಕನಾಗಿ, ಇದು ಏಕದಿನದಲ್ಲಿ ರೋಹಿತ್ ಶರ್ಮಾ ಅವರ ಎರಡನೇ ಡಕ್ ಔಟ್ ಆಗಿದ್ದು, ಈ ಪಂದ್ಯದ ಮೊದಲು, ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು.

ಇನ್ನು ನಾಯಕನಾಗಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಭಾರತೀಯರ ಪೈಕಿ ರೋಹಿತ್ ಇದೀಗ ಮೂರನೇ ಸ್ಥಾನದಲ್ಲಿದ್ದು, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಏಕದಿನ ಅಂತಾರಾಷ್ಟ್ರೀಯ ಮಾದರಿಯಲ್ಲಿ ನಾಯಕನಾಗಿ ಮೂರು ಬಾರಿ ಶೂನ್ಯಕ್ಕೆ ಔಟಾಗಿ ಎರಡನೇ ಸ್ಥಾನದಲ್ಲಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಈ ವಿಚಾರದಲ್ಲಿ ಅಗ್ರಸ್ಥಾನದಲ್ಲಿದ್ದು, ನಾಯಕರಾಗಿ ಗಂಗೂಲಿ 9 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.




