Rohit Sharma: ಏಷ್ಯಾಕಪ್​ನಲ್ಲಿ ರೋಹಿತ್ ಶರ್ಮಾ ಸಿಕ್ಸರ್ ಕಿಂಗ್

| Updated By: ಝಾಹಿರ್ ಯೂಸುಫ್

Updated on: Sep 11, 2023 | 3:57 PM

Rohit Sharma Records: ಪಾಕಿಸ್ತಾನ್ ವಿರುದ್ಧ ಬಾರಿಸಿದ 4 ಭರ್ಜರಿ ಸಿಕ್ಸ್​ಗಳೊಂದಿಗೆ ಏಷ್ಯಾಕಪ್​ ಏಕದಿನ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಪಾಕ್ ಆಟಗಾರ ಶಾಹಿದ್ ಅಫ್ರಿದಿ ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 6
ಕೊಲಂಬೊದಲ್ಲಿ ನಡೆದ ಏಷ್ಯಾಕಪ್​ನ ಸೂಪರ್​-4 ಹಂತದ 4ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆರಂಭಿಕನಾಗಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ 48 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 53 ರನ್​ ಬಾರಿಸಿದ್ದರು.

2 / 6
ವಿಶೇಷ ಎಂದರೆ ಈ 2 ಭರ್ಜರಿ ಸಿಕ್ಸ್​ಗಳೊಂದಿಗೆ ಏಷ್ಯಾಕಪ್​ ಏಕದಿನ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

3 / 6
ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನದ ಶಾಹಿದ್ ಅಫ್ರಿದಿ ಅವರ ಹೆಸರಿನಲ್ಲಿತ್ತು. ಅಫ್ರಿದಿ 21 ಏಕದಿನ ಇನಿಂಗ್ಸ್​ಗಳಿಂದ ಒಟ್ಟು 26 ಸಿಕ್ಸ್ ಸಿಡಿಸಿದ್ದರು.

4 / 6
ಇದೀಗ ರೋಹಿತ್ ಶರ್ಮಾ 25 ಏಕದಿನ ಇನಿಂಗ್ಸ್​ಗಳ ಮೂಲಕ ಒಟ್ಟು 28 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಏಷ್ಯಾಕಪ್ ಏಕದಿನ ಟೂರ್ನಿಯಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಅಫ್ರಿದಿ ದಾಖಲೆಯನ್ನು ಉಡೀಸ್ ಮಾಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ರೋಹಿತ್ ಶರ್ಮಾ 10 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ವೇಗವಾಗಿ 10 ಸಾವಿರ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.

6 / 6
ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ಶ್ರೀಲಂಕಾ ವಿರುದ್ಧ ಒಟ್ಟು 5 ಅರ್ಧಶತಕ ಬಾರಿಸಿದ್ದರು. ಇದೀಗ ರೋಹಿತ್ ಶರ್ಮಾ ಪಾಕಿಸ್ತಾನ್ ವಿರುದ್ಧ 6 ಅರ್ಧಶತಕಗಳನ್ನು ಬಾರಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.